10 ಲಕ್ಷ.. 5-ಸೀಟರ್, 365 Km ರೇಂಜ್.. ಈ ಜನಪ್ರಿಯ ಟಾಟಾ ಎಲೆಕ್ಟ್ರಿಕ್ ಎಸ್‌ಯುವಿಗೆ ಹೊಸ ರೂಪ?

ದೇಶೀಯ ಮಾರುಕಟ್ಟೆಯಲ್ಲಿ ಜೂನ್ 3 ರಂದು ನೂತನ 'ಟಾಟಾ ಹ್ಯಾರಿಯರ್ ಇವಿ'ಯನ್ನು ಅದ್ದೂರಿಯಾಗಿ ಪರಿಚಯಿಸಲಾಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿಯ ಬಿಡುಗಡೆ ಬೆನ್ನಲ್ಲೇ, ಜನಪ್ರಿಯ 'ಪಂಚ್ ಇವಿ'ಯನ್ನು ಕೂಡ ನವೀಕರಿಸಿ ಮಾರಾಟಕ್ಕೆ ತರಲು ಎಲ್ಲ ರೀತಿಯ ಸಿದ್ಧತೆಗಳು ನಡೆಸುತ್ತಿವೆ ಎನ್ನಲಾಗಿದೆ. ಆದರೆ, ಈ ಕುರಿತಂತೆ ಕಂಪನಿಯು ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಸದ್ಯ, ಹೊಚ್ಚ ಹೊಸ ಟಾಟಾ ಪಂಚ್ ಇವಿ (Tata Punch EV), ರೂ.9.99 ಲಕ್ಷದಿಂದ ರೂ.14.44 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 25 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 35 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 265 ರಿಂದ 365 ಕಿಲೋಮೀಟರ್‌ ರೇಂಜ್ (ಮೈಲೇಜ್) ನೀಡುತ್ತದೆ.

Tata Punch Ev Facelift Launch Soon Expected

ಎಲ್ಲವು ಅಂದುಕೊಂಡಂತೆ ಸುಸೂತ್ರವಾಗಿ ನಡೆದರೆ, ಮೇಲ್ದರ್ಜೆಗೇರಿಸಲಾಗುವ 'ಟಾಟಾ ಪಂಚ್ ಇವಿ' ದೊಡ್ಡ ಗಾತ್ರದ ಸುಧಾರಿತ ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ಅದಕ್ಕೆ ತಕ್ಕಂತೆ ಹೆಚ್ಚಿನ ಕಾರ್ಯಕ್ಷಮತೆಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಬಹುತೇಕ ನೆಕ್ಸಾನ್ ಇವಿಯ ಬ್ಯಾಟರಿ ಪ್ಯಾಕ್‌ನೇ ಈ ಕಾರಿನಲ್ಲಿಯೂ ಅಳವಡಿಸುವ ಸಾಧ್ಯತೆಗಳಿವೆ.

ನವೀಕರಣಕ್ಕೆ ಒಳಗಾಗುವ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್, ನೂತನ ಹ್ಯಾರಿಯರ್ ಇವಿಯಂತೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಬೃಹದಾಕಾರದ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಪ್ರೀಮಿಯಂ ಸ್ಪೀಕರ್ ಸೆಟಪ್, ಟಿ.ಐಡಲ್ (ಟಾಟಾ ಇಂಟೆಲಿಜೆನ್ಸ್ ಡಿಜಿಟಲ್ ಆರ್ಕಿಟೆಕ್ಚರ್ ಲೇಯರ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಡಿಜಿಟಲ್ ಕೀಯನ್ನು ಹೊಂದಿರಬಹುದು ಎನ್ನಲಾಗಿದೆ.

Tata Punch Ev Facelift Launch Soon Expected

ಈಚೆಗೆ ಮಾರಾಟಕ್ಕೆ ಬಂದ ಟಾಟಾ ಹ್ಯಾರಿಯರ್ ಇವಿ (Tata Harrier EV) ವಿಶೇಷತೆಗಳೇನು..

ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.21.49 ಲಕ್ಷ ಬೆಲೆಯನ್ನು (ಎಕ್ಸ್-ಶೋರೂಂ) ಹೊಂದಿದೆ. ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಮತ್ತು ಪ್ಯೂರ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ಒಳಗೊಂಡಿದ್ದು, 502 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 627 ಕಿಲೋಮೀಟರ್‌ ಕ್ರಮಿಸುತ್ತದೆ. ಜೊತೆಗೆ ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ ಎಸ್‌ಯುವಿಯು 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, ಜೆಬಿಎಲ್ 10-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಒಟ್ಟಾರೆಯಾಗಿ ಮುಂಬರುವ ಕೆಲವೇ ತಿಂಗಳಲ್ಲಿ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಮಾರಾಟಕ್ಕೆ ಬರಲಿದೆ ಎಂಬುದು ಖರೀದಿದಾರರಿಗೆ ಹೆಚ್ಚಿನ ಸಂತಸವನ್ನು ತಂದಿದೆ. ಇದು ನವೀಕೃತ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆ ಬಳಿಕ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, June 11, 2025, 11:03 [IST]
English summary
Tata punch ev facelift launch soon expected
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+