Tata: 6 ಲಕ್ಷ.. 26.99 Km ಮೈಲೇಜ್, 5-ಸೀಟರ್.. ಸನ್‌ರೂಫ್, ಟಾಟಾ ಕಾರಿಗೆ ಮುಗಿಬಿದ್ದ ಜನ!
ಟಾಟಾ ಪಂಚ್ (Tata Punch) ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿದೆ. ಇದು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಹಾಗೆಯೇ ಒಳಭಾಗದಲ್ಲಿ ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಹಿನ್ನೆಲೆ 'ಪಂಚ್' ಫೆಬ್ರವರಿ ತಿಂಗಳಲ್ಲಿ ಮಾರಾಟಗೊಂಡ ಪ್ರಮುಖ ಕಾಂಪ್ಯಾಕ್ಟ್ ಎಸ್‌ಯುವಿಗಳ ಪಟ್ಟಿಯಲ್ಲಿಯೂ ಇದ್ದು, ನಾಲ್ಕನೇ ಸ್ಥಾನದಲ್ಲಿದೆ. ಮೊದಲ ಸ್ಥಾನವನ್ನು 'ಮಾರುತಿ ಸುಜುಕಿ ಫ್ರಾಂಕ್ಸ್' ಕಾರು ತನ್ನದಾಗಿಸಿಕೊಂಡಿದೆ.
ಕಳೆದ ತಿಂಗಳು (ಫೆಬ್ರವರಿ-2025) ಟಾಟಾ ಮೋಟಾರ್ಸ್ ಬರೋಬ್ಬರಿ 14,559 ಯುನಿಟ್ 'ಪಂಚ್' ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 18,438 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -21% ಇಳಿಕೆಯಾಗಿದೆ. ಆದರೆ, ಈ ಮಾರಾಟ ಅಂಕಿಸಂಖ್ಯೆ ಕುಸಿತವಾಗಿರುವ ಬಗ್ಗೆ ಕಂಪನಿಯು ಯಾವುದೇ ಕಾರಣವನ್ನು ಬಹಿರಂಗಪಡಿಸಿಲ್ಲ.

ಜನವರಿಯಲ್ಲಿ 16,231 ಯುನಿಟ್ ಟಾಟಾ ಪಂಚ್ ಕಾರುಗಳು ಮಾರಾಟವಾಗಿದ್ದವು. 2024ರ ದ್ವಿತೀಯಾರ್ಧದಲ್ಲಿಯೂ ಈ ಎಸ್‌ಯುವಿಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದವು. ಡಿಸೆಂಬರ್‌ನಲ್ಲಿ 15,073 ಯುನಿಟ್, ನವೆಂಬರ್‌ನಲ್ಲಿ 15,435 ಯುನಿಟ್, ಅಕ್ಟೋಬರ್‌ನಲ್ಲಿ 15,740 ಮತ್ತು ಸೆಪ್ಟೆಂಬರ್‌ನಲ್ಲಿ 13,711 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.
ಟಾಟಾ ಪಂಚ್ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.6.20 ಲಕ್ಷ ಹಾಗೂ ಗರಿಷ್ಠ ರೂ.10.32 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 18.8 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ರೇರ್ ಎಸಿ ವೆಂಟ್‌ಗಳು ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಟಾಟಾ ಪಂಚ್ ಇವಿ ಕೂಡ ಖರೀದಿಗೆ ಲಭ್ಯ: ಈ ಎಲೆಕ್ಟ್ರಿಕ್ ಎಸ್‌ಯುವಿ ರೂ.9.99 ಲಕ್ಷದಿಂದ ರೂ.14.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 25 ಕೆಡಬ್ಲ್ಯೂಹೆಚ್ & 35 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 265 ರಿಂದ 365 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿಯೂ 5 ಜನರು ಸಂಚಾರ ನಡೆಸಬಹುದು.

ಈ ಎಲೆಕ್ಟ್ರಿಕ್ ಕಾರು ಇನ್ಫೋಟೈನ್‌ಮೆಂಟ್ & ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್ಪ್ಲೇಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಏರ್ ಪ್ಯೂರಿಫೈಯರ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications