Tata: 26.99 ಕಿ.ಮೀ ಮೈಲೇಜ್.. ಬರೀ 5.50 ಲಕ್ಷ, ಈ ಟಾಟಾ ಎಸ್‌ಯುವಿಗೆ ಫುಲ್ ಡಿಮ್ಯಾಂಡ್.. ಜನ ಮುಗಿಬಿದ್ದು ಖರೀದಿ!
ಟಾಟಾ ಪಂಚ್ (Tata Punch) ಪ್ರಮುಖ ಮೈಕ್ರೋ ಎಸ್‌ಯುವಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಪಂಚ್' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಸರಿ ಸುಮಾರು 16,810 ಯುನಿಟ್‌ಗಳನ್ನು ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 15,740 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 7% ಬೆಳವಣಿಗೆಯಾಗಿದೆ.
ಸ್ಟ್ಯಾಂಡರ್ಡ್ 'ಟಾಟಾ ಪಂಚ್' ವಿಶೇಷತೆಗಳೇನು:
ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.50 ಲಕ್ಷದಿಂದ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುತ್ತದೆ. ಪ್ಯೂರ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಪ್ಲಸ್, ಅಕಾಂಪ್ಲಿಶ್ಡ್ ಪ್ಲಸ್ ಎಸ್ ಮತ್ತು ಕ್ರಿಯೇಟಿವ್ ಪ್ಲಸ್ ರೂಪಾಂತರಗಳೊಂದಿಗೂ ಲಭ್ಯವಿದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಪ್ರತಿಯೊಬ್ಬರ ಕಣ್ಮನ ಸೆಳೆಯಬಲ್ಲದು. ಅದಕ್ಕಾಗಿ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 187 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,445 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ 'ಪಂಚ್' ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18 ರಿಂದ 26.99 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 155 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೊರಡುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 366 ಲೀ.ನಷ್ಟು ಬೂಟ್ ಸ್ಪೇನ್‌ನ್ನು ಹೊಂದಿದೆ.
ಇದು 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸನ್‌ರೂಫ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯಿಂದಲೂ ಮನೆ ಮಾತಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಟಾಟಾ ಪಂಚ್ ಇವಿ (Tata Punch EV) ಸಹ ಗ್ರಾಹಕರ ಖರೀದಿ ಲಭ್ಯ:
ಈ ಎಸ್‌ಯುವಿಯು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ. ಕನಿಷ್ಠ ರೂ.9.99 ಲಕ್ಷ ಹಾಗೂ ಗರಿಷ್ಠ ರೂ.14.44 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 25 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 35 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 315 ರಿಂದ 421 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ.
ಹೊಸ 'ಪಂಚ್ ಇವಿ' ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಂಪವರ್ಡ್ ಆಕ್ಸೈಡ್, ಡೇಟೋನಾ ಗ್ರೇ, ಫಿಯರ್‌ಲೆಸ್ ರೆಡ್ ಮತ್ತು ಪ್ರಿಸ್ಟೈನ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25 ಇಂಚಿನ ಡುಯಲ್ ಡಿಸ್‌ಪ್ಲೇಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications








