Tata: ಟಾಟಾದ ಈ ಪ್ರಖ್ಯಾತ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?
ಟಾಟಾ ಮೋಟಾರ್ಸ್ (Tata Motors), ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿರುವ ಸ್ವದೇಶಿ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಪಂಚ್' ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿದೆ. 2024ರಲ್ಲಿ ಮಾರಾಟಗೊಂಡ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬರೋಬ್ಬರಿ 2,02,031 ಯುನಿಟ್ 'ಪಂಚ್' ಕಾರುಗಳನ್ನು ಗ್ರಾಹಕರು ಖರೀದಿ ಮಾಡಿದ್ದಾರೆ. ಸದ್ಯ, ಈ ಕಾರಿನ ಬೆಲೆ ಒಂದಷ್ಟು ಹೆಚ್ಚಳಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೊಚ್ಚ ಹೊಸ ಟಾಟಾ ಪಂಚ್ (Tata Punch) ಎಸ್‌ಯುವಿಯ ದರಗಳು, ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.7,000 ರಿಂದ ರೂ.17,000 ವರೆಗೆ ಹೆಚ್ಚಿನಗೊಂಡಿದೆ. ಇದರೊಂದಿಗೆ ಈ ಕಾರು ಕನಿಷ್ಠ ರೂ.6.20 ಲಕ್ಷ ಮತ್ತು ಗರಿಷ್ಠ ರೂ.10.32 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ.

ನೂತನ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂರ್, ಪ್ಯೂರ್ (ಒ), ಕ್ರಿಯೇಟಿವ್ ಪ್ಲಸ್, ಅಕಾಂಪ್ಲಿಶ್ಡ್ ಪ್ಲಸ್ ಎಸ್ ಮತ್ತು ಅಡ್ವೆಂಚರ್ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಪಂಚ್ ಎಸ್‌ಯುವಿ ಅಟಾಮಿಕ್ ಆರೆಂಜ್, ಟೊರ್ನಾಡೊ ಬ್ಲ್ಯೂ, ಕ್ಯಾಲಿಪ್ಸೊ ರೆಡ್, ಆರ್ಕಸ್ ವೈಟ್ ಮತ್ತು ಡೇಟೋನಾ ಗ್ರೇ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳನ್ನು ಪಡೆದಿದೆ.
ಹೊಸ ಟಾಟಾ ಪಂಚ್ ಎಸ್‌ಯುವಿ, ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀಟರ್ 3 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಕಾರು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 73.5 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 103 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಇದು ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಲಭ್ಯವಾಗುತ್ತದೆ. ನೂತನ ಪಂಚ್ ಎಸ್‌ಯುವಿ, ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ 18.8 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ಸಹ ಕೊಡುತ್ತದೆ.
ಹೊಸ ಟಾಟಾ ಪಂಚ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ರೇರ್ ಎಸಿ ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 2-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ - ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರಿವರ್ಸಿಂಗ್ ಕ್ಯಾಮೆರಾ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳು ಕೂಡ ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications