27 ಕಿ.ಮೀ ಮೈಲೇಜ್.. 5.50 ಲಕ್ಷ ರೂಪಾಯಿ, ಈ ಪ್ರಖ್ಯಾತ Tata SUVಗೆ ಮನಸೋತ ಗ್ರಾಹಕರು!
ಟಾಟಾ ಪಂಚ್ (Tata Punch) ಜಗಮೆಚ್ಚಿದ ಮೈಕ್ರೋ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 15,891 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಅದೇ ರೀತಿಯಲ್ಲಿ ಜೂನ್‌ನಿಂದ ಆಗಸ್ಟ್‌ವರೆಗೂ 31,935 ಯುನಿಟ್‌ಗಳನ್ನು ಮಾರಲಾಗಿದೆ.
ಇದೇ ಸೆಪ್ಟೆಂಬರ್‌ನಲ್ಲಿ 'ಟಾಟಾ ಪಂಚ್' ಎಸ್‌ಯುವಿ ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗಲು ಹತ್ತಾರು ಕಾರಣಗಳಿವೆ. ವಿಶೇಷವಾಗಿ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಜಾರಿಗೊಂಡಿವೆ. ಇದರ ಸಂಪೂರ್ಣ ಪ್ರಯೋಜನವು 'ಪಂಚ್' ಕಾರಿಗೂ ಸಿಗುತ್ತಿದೆ. ಸರಿ ಸುಮಾರು ರೂ.85,000 ವರೆಗೆ ಬೆಲೆ ಇಳಿಕೆಯಾಗಿದೆ. ಜೊತೆಗೆ ದಸರಾ ಹಬ್ಬವಿದ್ದ ಹಿನ್ನೆಲೆ, ಈ ಕಾರು ಉತ್ತಮವಾಗಿ ಮಾರಾಟಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಸ್ಟ್ಯಾಂಡರ್ಡ್ ಟಾಟಾ ಪಂಚ್ ವಿಶೇಷತೆಗಳೇನು:
ಈ ಎಸ್‌ಯುವಿಯು ಅಗ್ಗದ ದರದಲ್ಲೂ ಲಭ್ಯವಿದ್ದು, ಕನಿಷ್ಠ ರೂ.5.50 ಲಕ್ಷ ಹಾಗೂ ಗರಿಷ್ಠ ರೂ.9.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪ್ಯೂರ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಡ್ವೆಂಚರ್ ಪ್ಲಸ್ ಎಸ್, ಅಕಾಂಪ್ಲಿಶ್ಡ್ ಪ್ಲಸ್, ಅಕಾಂಪ್ಲಿಶ್ಡ್ ಪ್ಲಸ್ ಕ್ಯಾಮೊ, ಅಕಾಂಪ್ಲಿಶ್ಡ್ ಪ್ಲಸ್ ಎಸ್ ಹಾಗೂ ಕ್ರಿಯೇಟಿವ್ ಪ್ಲಸ್ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಡುಯಲ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಟ್ರಾಪಿಕಲ್ ಮಿಸ್ಟ್, ಆರ್ಕಸ್ ವೈಟ್, ಡೇಟೋನಾ ಗ್ರೇ, ಟೊರ್ನಾಡೊ ಬ್ಲೂ ಮತ್ತು ಕ್ಯಾಲಿಪ್ಸೊ ರೆಡ್ ಸೇರಿದಂತೆ 10ಕ್ಕೂ ಹೆಚ್ಚು ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಪಂಚ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 366 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಒಳಗೊಂಡಿದೆ. 187 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 1023 ಕೆಜಿ ತೂಕವಿದೆ.
ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 18 ರಿಂದ 27 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಟಾಟಾ ಪಂಚ್ ಇವಿ (Tata Punch EV) ಕೂಡ ಖರೀದಿ ಲಭ್ಯ:
ಇದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ರೂ.9.99 ಲಕ್ಷದಿಂದ ರೂ.14.44 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಂಪವರ್ಡ್ ಆಕ್ಸೈಡ್, ಡೇಟೋನಾ ಗ್ರೇ, ಫಿಯರ್‌ಲೆಸ್ ರೆಡ್ ಹಾಗೂ ಪ್ರಿಸ್ಟೈನ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 25 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 35 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.
ಹೊಸ ಪಂಚ್ ಇವಿ 5 ಆಸನಗಳನ್ನು ಹೊಂದಿದೆ. 10.25 ಇಂಚಿನ ಇನ್ಫೋಟೈನ್‌ಮೆಂಟ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








