Tata Punch: 7 ಲಕ್ಷದೊಳಗೆ ಸಿಗುವ ಎರಡು ಬೆಸ್ಟ್ ಎಸ್‌ಯುವಿಗಳು: ಆದರೂ ಬೆಸ್ಟ್ ಯಾವುದು?

ನಿಸ್ಸಾನ್ ಮ್ಯಾಗ್ನೈಟ್ ಮತ್ತು ಟಾಟಾ ಪಂಚ್ ಎರಡೂ ಕಾರುಗಳು ಆಯಾ ಬ್ರಾಂಡ್‌ಗಳಿಗೆ ಉತ್ತಮ ಯಶಸ್ಸು ತಂದುಕೊಟ್ಟ ಕಾರುಗಳಾಗಿವೆ. ಆಕರ್ಷಕ ಬೆಲೆಯಲ್ಲಿ ಸಿಗುವ ಉತ್ತಮ ಕಾರುಗಳು ಯಾವಾಗಲೂ ಕಾರು ಮಾರುಕಟ್ಟೆಗೆ ಒಳ್ಳೆಯ ಸುದ್ದಿಯಾಗಿದ್ದರೂ, ಇದು ನಿಮ್ಮ ಖರೀದಿ ನಿರ್ಧಾರವನ್ನು ಸ್ವಲ್ಪ ಕಷ್ಟಕರವಾಗಿಸುತ್ತದೆ. ನಿಸ್ಸಾನ್ ಮ್ಯಾಗ್ನೈಟ್ ಹಾಗೂ ಟಾಟಾ ಪಂಚ್ ವಿಷಯದಲ್ಲೂ ಇದೇ ಆಗಿದೆ. ಎರಡೂ ಕಾರುಗಳಲ್ಲಿ ಯಾವ ಕಾಂಪ್ಯಾಕ್ಟ್ ಎಸ್‌ಯುವಿ ನಿಮಗೆ ಉತ್ತಮವಾಗಿ ಹೊಂದಿಕೊಳ್ಳುತ್ತದೆ ಎಂಬುದನ್ನು ನಿರ್ಧರಿಸಲು ನಿಮಗೆ ಸಹಾಯ ಮಾಡಲು ನಾವು ಎರಡು ಕಾರುಗಳನ್ನು ಹೋಲಿಸಿದ್ದೇವೆ.

ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ರೂ.6.14 ಲಕ್ಷದಿಂದ ರೂ.11.76 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ & ಎನ್ - ಕನೆಕ್ಟಾ ಒಳಗೊಂಡಂತೆ ಹಲವು ವೇರಿಯೆಂಟ್‌ಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಸದ್ಯ ಭಾರತದಲ್ಲಿ ಅತಿ ಹೆಚ್ಚು ಮಾರಾಟ ಕಾಣುವ ನಿಸ್ಸಾನ್ ಕಂಪನಿಯ ಪ್ರಮುಖ ಕಾರಾಗಿದೆ.

tata-punch-vs-nissan-magnite-price-features-engine-comparison

ಹೊಚ್ಚ ಹೊಸ ಪಂಚ್ ಫೇಸ್‌ಲಿಫ್ಟ್ ಕಾರು, ರೂ.6.12 ಲಕ್ಷದಿಂದ ರೂ.9.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪ್ಯೂರ್, ಪ್ಯೂರ್ (ಒ), ಕ್ರಿಯೇಟಿವ್ ಪ್ಲಸ್, ಅಕಾಂಪ್ಲಿಶ್ಡ್ ಪ್ಲಸ್, ಅಡ್ವೆಂಚರ್ ಮತ್ತು ಅಡ್ವೆಂಚರ್ ಎಸ್ ಸೇರಿದಂತೆ ಒಟ್ಟು 10 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಎಲ್ಲಾ ಬ್ರಾಂಡ್‌ಗಳನ್ನು ಹಿಂದಿಕ್ಕಿ ದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟ ಕಂಡಿರುವ ಎಸ್‌ಯುವಿಯಾಗಿದೆ.

2024ರ ನವೀಕರಿಸಿದ ಟಾಟಾ ಪಂಚ್ ಫೇಸ್‌ಲಿಫ್ಟ್ ಎಸ್‌ಯುವಿ 1.2 - ಲೀಟರ್ 3 - ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಪಡೆದಿದೆ. 87 ಬಿಹೆಚ್‍ಪಿ ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 5 - ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿಯೂ ದೊರೆಯುತ್ತದೆ.

tata-punch-vs-nissan-magnite-price-features-engine-comparison

ಹೊಸ ನಿಸ್ಸಾನ್ ಮ್ಯಾಗ್ನೈಟ್ ಕಾರು ಶಕ್ತಿಯುತ ಎರಡು ಪವರ್‌ಟ್ರೇನ್‍ನ್ನು ಹೊಂದಿದೆ. 1 - ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5 - ಸ್ಪೀಡ್ ಮ್ಯಾನುವಲ್, 5 - ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಟಾಟಾ ಪಂಚ್ ಪೆಟ್ರೋಲ್ ಮಾಡೆಲ್ 18.8 ರಿಂದ 19-20 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾಡೆಲ್ 26.99 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ. ಇನ್ನೂ ನಿಸ್ಸಾನ್ ಮ್ಯಾಗ್‌ನೈಟ್ ಮೈಲೇಜ್ ವಿಷಯಕ್ಕೆ ಬಂದರೆ 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎರಡೂ ಕಾರುಗಳು ಕೂಡ ಮೈಲೇಜ್ ವಿಷಯದಲ್ಲಿ ಉತ್ತಮ ಅಂಕಿಅಂಶಿಗಳನ್ನು ಹಿಂದಿರುಗಿಸುತ್ತವೆ.

tata-punch-vs-nissan-magnite-price-features-engine-comparison

ನಿಸ್ಸಾನ್ ಮ್ಯಾಗ್‌ನೈಟ್ ಎಸ್‌ಯುವಿ 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಊರಿಂದ ಊರಿಗೆ ಸಂಚಾರ ಮಾಡಬಹುದು. 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

2024ರ ಪಂಚ್ ಈಗ ಸೆಂಟರ್ ಕನ್ಸೋಲ್‌ನಲ್ಲಿ USB ಟೈಪ್-ಸಿ ಚಾರ್ಜಿಂಗ್ ಪೋರ್ಟ್, ವೈರ್‌ಲೆಸ್ ಚಾರ್ಜರ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಹಿಂಭಾಗದಲ್ಲಿ ಎಸಿ ವೆಂಟ್‌ಗಳನ್ನು ಹೊಂದಿದೆ. ಇದರೊಂದಿಗೆ ವೈರ್‌ಲೆಸ್ ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಹೊಸ 10.25-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಮ್, ಮುಂಭಾಗದಲ್ಲಿ ಆರ್ಮ್ ರೆಸ್ಟ್ ನೀಡಲಾಗಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಎಸ್‌ಯುವಿಗೆ ಟಾಟಾ ನೆಕ್ಸಾನ್‌, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್ & ಮಾರುತಿ ಸುಜುಕಿ ಬ್ರೆಝಾ ಕಾರುಗಳು ಅತಿದೊಡ್ಡ ಎದುರಾಳಿಯಾಗಲಿವೆ.

ಟಾಟಾ ಪಂಚ್ ಎಂಟ್ರಿ ಲೆವೆಲ್ ವೇರಿಯೆಂಟ್ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ರೋಲ್‌-ಓವರ್ ಮಿಟಿಗೇಶನ್ ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಟಾಪ್ ಎಂಡ್ ವೇರಿಯೆಂಟ್‌ಗಳು ಹೆಚ್ಚುವರಿಯಾಗಿ 360 - ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ ಹಿಲ್ ಡಿಸೆಂಟ್ ಕಂಟ್ರೋಲ್‌ನ್ನು ಪಡೆದಿವೆ.

ಇನ್ನು, ನಿಸ್ಸಾನ್ ಮ್ಯಾಗ್ನೈಟ್ ಕೂಡ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಮಾರಾಟಕ್ಕೆ ಬರಲಿದೆ ಎನ್ನಲಾಗುತ್ತಿರುವುದು ಖುಷಿಯ ವಿಚಾರವಾಗಿದೆ. ಈ ಕಾರು ಗರಿಷ್ಠ ಮೈಲೇಜ್ ನೀಡುವ ಸಾಧ್ಯತೆಯೂ ಹೆಚ್ಚಿದೆ. ಇದರಿಂದ ಕಡಿಮೆ ನಿರ್ವಹಣಾ ವೆಚ್ಚದ ಹೊಸ ಎಸ್‌ಯುವಿಯನ್ನು ಖರೀದಿ ಮಾಡಬೇಕು ಅಂದುಕೊಂಡಿರುವ ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಟಾಟಾ ಪಂಚ್ ಎಂಜಿನ್ ಅನ್ನು 5 - ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಗೇರ್ ಬಾಕ್ಸ್‌ಗಳೊಂದಿಗೆ ಜೋಡಿಸಲಾಗಿದೆ. ಒಟ್ಟು ಏಳು ಆವೃತ್ತಿಗಳಲ್ಲಿ ನೀಡಲಾಗುವ ಸಿಎನ್‌ಜಿ ಟ್ರಿಮ್ ಕೂಡ ಆಫರ್ ನಲ್ಲಿದೆ. ಟಾಟಾ ಪಂಚ್ ಫೇಸ್‌ಲಿಫ್ಟ್ ಕಾರು ಹಳೆಯ ಪಂಚ್‌ನಂತೆ ಅದೇ 87 ಬಿಹೆಚ್‍ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಗೇಮ್ ಚೇಂಜರ್ ಎಸ್‌ಯುವಿಯಾಗಿ ಹೊರ ಹೊಮ್ಮಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಪ್ರತಿ ತಿಂಗಳು 2,000ಕ್ಕೂ ಅಧಿಕ ಖರೀದಿದಾರರು ಇದೇ ಮ್ಯಾಗ್ನೈಟ್ ಎಸ್‌ಯುವಿಯನ್ನು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ನೂತನ ನಿಸ್ಸಾನ್ ಮ್ಯಾಗ್ನೈಟ್ ಕಾರನ್ನು ಹೊಸ ಅವತಾರದಲ್ಲಿ ಮಾರಾಟಕ್ಕೆ ತರಲು ಕಂಪನಿಯು ಭರದಿಂದ ಸಿದ್ಧತೆಯನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಟಾಟಾ ಪಂಚ್ ಮಾರುಕಟ್ಟೆಗೆ ಪ್ರವೇಶಿಸಿದ 38 ತಿಂಗಳೊಳಗೆ 5 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡುವ ಮೈಲಿಗಲ್ಲನ್ನು ದಾಟಿದೆ. ಇದು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಕಾರ್ ಸಾಧಿಸಿರುವ ಅಗಾಧ ಬೆಳವಣಿಗೆಯನ್ನು ಸೂಚಿಸುತ್ತದೆ. ಕಳೆದ ಕ್ಯಾಲೆಂಡರ್ ವರ್ಷವೊಂದರಲ್ಲೇ ಟಾಟಾ 2.02 ಲಕ್ಷ ಪಂಚ್ ಕಾರುಗಳನ್ನು ಮಾರಾಟ ಮಾಡಿದೆ. ಇನ್ನು 2024ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಒಟ್ಟು 1.48 ಲಕ್ಷ ಯೂನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 29, 2025, 17:07 [IST]
English summary
Tata punch vs nissan magnite price features engine comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+