TATA: ಮನಸೋತ ಗ್ರಾಹಕರು, ಹಬ್ಬದ ಪ್ರಯುಕ್ತ 1 ಲಕ್ಷ ಟಾಟಾ ಕಾರುಗಳು ಮಾರಾಟ.. 7 ಲಕ್ಷದ ಈ SUVಗೆ ಫುಲ್ ಡಿಮ್ಯಾಂಡ್!
ಟಾಟಾ ಮೋಟಾರ್ಸ್ (Tata Motors) ಜಗಮೆಚ್ಚಿದ ವಾಹನ ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದೆ. ದೇಶೀಯವಾಗಿ ಹಲವು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಹಬ್ಬದ ಋತು ಕಂಪನಿಗೆ ವರವಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಹ್ಯಾಚ್‌ಬ್ಯಾಕ್ ಹಾಗೂ ಎಸ್‌ಯುವಿಗಳನ್ನು ಖರೀದಿದಾರರಿಗೆ ವಿತರಣೆ ಮಾಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ದೇಶಾದ್ಯಂತ ತನ್ನೆಲ್ಲ ಡೀಲರ್‌ಶಿಪ್‌ಗಳಲ್ಲಿ ನವರಾತ್ರಿಯಿಂದ ದೀಪಾವಳಿವರೆಗೆ ಸರಿ ಸುಮಾರು 1 ಲಕ್ಷಕ್ಕೂ ಅಧಿಕ ಕಾರುಗಳನ್ನು ಮಾರಾಟಗೊಳಿಸಲಾಗಿದೆ ಎಂದು ಟಾಟಾ ಮೋಟಾರ್ಸ್ ಘೋಷಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ಶೇಕಡ 33% ಪ್ರಗತಿಯಾಗಿದೆ.

ವಿಶೇಷವಾಗಿ 'ನೆಕ್ಸಾನ್' ಗೇಮ್ ಚೇಂಜರ್ ಕಾಂಪ್ಯಾಕ್ಟ್ ಎಸ್‌ಯುವಿ ಹೊರಹೊಮ್ಮಿದೆ. ಒಟ್ಟು 38,000 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ, ಶೇಕಡ 73% ಬೆಳವಣಿಗೆಯಾಗಿದೆ. ಅದೇ ರೀತಿಯಲ್ಲಿ 'ಪಂಚ್' ಮೈಕ್ರೋ ಎಸ್‌ಯುವಿಯ 32,000 ಯುನಿಟ್‌ಗಳನ್ನು ಮಾರಲಾಗಿದ್ದು, ಶೇಕಡ 29% ಅಭಿವೃದ್ಧಿ ಸಾಧಿಸಲಾಗಿದೆ. ಜೊತೆಗೆ ಬರೋಬ್ಬರಿ 10,000 ಎಲೆಕ್ಟ್ರಿಕ್ ಕಾರುಗಳು ಮಾರಾಟಗೊಂಡಿವೆ.
ಸ್ಟ್ಯಾಂಡರ್ಡ್ ಟಾಟಾ ನೆಕ್ಸಾನ್ (Tata Nexon) ವಿಶೇಷತೆಗಳೇನು:
ಈ ಎಸ್‌ಯುವಿ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.7.32 ಲಕ್ಷ ಹಾಗೂ ಗರಿಷ್ಠ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂರ್ ಗ್ರೇ, ಪ್ರಿಸ್ಟೈನ್ ವೈಟ್, ಕಾರ್ಬನ್ ಬ್ಲ್ಯಾಕ್, ಗ್ರಾಸ್‌ಲ್ಯಾಂಡ್ ಬೀಜ್ ಮತ್ತು ಓಷನ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ನೆಕ್ಸಾನ್' 1.2-ಲೀ. ಟರ್ಬೊ ಪೆಟ್ರೋಲ್, 1.5-ಲೀ. ಡೀಸೆಲ್ & 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25 ಇಂಚು), 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಟಾಟಾ ನೆಕ್ಸಾನ್ ಇವಿಯೂ ಖರೀದಿಗೆ ಲಭ್ಯ:
ಇದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 30 ಮತ್ತು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.
ಸ್ಟ್ಯಾಂಡರ್ಡ್ ಟಾಟಾ ಪಂಚ್ (Tata Punch) ಹೇಗಿದೆ:
ಈ ಎಸ್‌ಯುವಿ ಕನಿಷ್ಠ ರೂ.5.50 ಲಕ್ಷ ಗರಿಷ್ಠ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಟ್ರಾಪಿಕಲ್ ಮಿಸ್ಟ್, ಆರ್ಕಸ್ ವೈಟ್, ಡೇಟೋನಾ ಗ್ರೇ, ಟೊರ್ನಾಡೊ ಬ್ಲೂ & ಕ್ಯಾಲಿಪ್ಸೊ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ಹೊಸ 'ಪಂಚ್' 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 18 ರಿಂದ 27 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25 ಇಂಚು), ಸನ್‌ರೂಫ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಟಾಟಾ ಪಂಚ್ ಇವಿಯೂ ಸಿಗುತ್ತದೆ:
ಇದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ರೂ.9.99 ಲಕ್ಷದಿಂದ ರೂ.14.44 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 25 ಹಾಗೂ 35 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 315 ರಿಂದ 421 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








