ಕಲ್ಲುಬಂಡೆಯಂತಹ ಕಾರಿದು.. ಅದೇಕೋ 6-ಆಸನಗಳ ಈ Tata SUV ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ, ಕಾರಣವೇನು?

ಟಾಟಾ ಸಫಾರಿ (Tata Safari) ಜನಪ್ರಿಯ ಎಸ್‌ಯುವಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಈ ಕಾರು 6-ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ತುಂಬು ಕುಟುಂಬಕ್ಕೆ ಹೆಚ್ಚು ಸೂಕ್ತವಾಗಿದೆ. ಇದು ಸುರಕ್ಷತೆಗೂ ಹೆಸರುವಾಸಿಯಾಗಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆದರೆ, ಕೆಲ ತಿಂಗಳಿಂದ ಸಫಾರಿ ಎಸ್‌ಯುವಿ ಮಾರಾಟ ಪ್ರಮಾಣವು ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಮಾರ್ಚ್-2025) ಟಾಟಾ ಮೋಟಾರ್ಸ್, ಬರೋಬ್ಬರಿ 1,415 ಯುನಿಟ್ ಸಫಾರಿ ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 2,063 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -31% ಇಳಿಮುಖವಾಗಿದೆ.

Tata Safari March 2025 Sales Details

ಈ ವರ್ಷದ ಮೊದಲ 2 ತಿಂಗಳು ಕೂಡ ಟಾಟಾ ಸಫಾರಿ ಎಸ್‌ಯುವಿಯ ಮಾರಾಟ ಸಂಖ್ಯೆ 2,000 ಯುನಿಟ್ ಗಡಿದಾಟಿಲ್ಲ. ಫೆಬ್ರವರಿಯಲ್ಲಿ 1,562 ಯುನಿಟ್, ಜನವರಿಯಲ್ಲಿ 1,548 ಯುನಿಟ್ ಸಫಾರಿ ಕಾರುಗಳನ್ನು ಮಾರಾಟ ಮಾಡಲಾಗಿದೆ. ಅದೇ ರೀತಿಯಲ್ಲಿ 2024ರ ಕಡೆಯ 3 ತಿಂಗಳಲ್ಲೂ ಈ ಎಸ್‌ಯುವಿಯ ಮಾರಾಟ ಅಷ್ಟು ಚೆನ್ನಾಗಿರಲಿಲ್ಲ. ಡಿಸೆಂಬರ್‌ನಲ್ಲಿ 1,385 ಯುನಿಟ್, ನವೆಂಬರ್‌ನಲ್ಲಿ 1,563 ಯುನಿಟ್ ಮತ್ತು ಅಕ್ಟೋಬರ್‌ ತಿಂಗಳಲ್ಲಿ 2,086 ಯುನಿಟ್‌ಗಳು ಮಾರಾಟವಾಗಿದ್ದವು.

ಟಾಟಾ ಸಫಾರಿ ಮಾರಾಟದ ಅಂಕಿಸಂಖ್ಯೆಯು ಈ ಮಟ್ಟದಲ್ಲಿ ಕುಸಿತವಾಗಿರುವ ಬಗ್ಗೆ ಕಂಪನಿಯು ಸಹ ಯಾವುದೇ ಸ್ಪಷ್ಟ ಕಾರಣವನ್ನು ಬಹಿರಂಗಪಡಿಸಿಲ್ಲ. ಮುಂಬರುವ ದಿನಗಳಲ್ಲಿ ಮಾರಾಟ ಪ್ರಮಾಣ ಸುಧಾರಿಸಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಈ ಕಾರಿನ ಬೆಲೆ ಕೊಂಚ ಹೆಚ್ಚಿದ್ದು, ಗ್ರಾಹಕರು ಬಜೆಟ್ ಬೆಲೆಯ ಕಾರುಗಳನ್ನು ಕೊಂಡುಕೊಳ್ಳಲು ಒಲವು ತೋರಿಸುತ್ತಿರುವ ಹಿನ್ನೆಲೆ, ಮಾರಾಟದ ಅಂಕಿಸಂಖ್ಯೆ ಕುಸಿತವಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Tata Safari March 2025 Sales Details

ಟಾಟಾ ಸಫಾರಿ ಎಸ್‌ಯುವಿ ವಿಶೇಷತೆಗಳೇನು: ಈ ಕಾರು ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಕಾಸ್ಮಿಕ್ ಗೋಲ್ಡ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್, ಸೂಪರ್‌ನೋವಾ ಕಾಪರ್ ಹಾಗೂ ಲೂನಾರ್ ಸ್ಟೇಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಕಾರು 2-ಲೀ. ಡೀಸೆಲ್ ಎಂಜಿನ್‌ನ್ನು ಮಾತ್ರ ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 14.50 ರಿಂದ 16.30 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ವಾರಾಂತ್ಯ & ರಜಾದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು 420 ಲೀಟರ್ ವಿಶಾಲವಾಗಿರುವ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Tata Safari March 2025 Sales Details

ನೂತನ ಸಫಾರಿ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಡುಯಲ್-ಜೋನ್ ಆಟೋಮೆಟಿಕ್ ಎಸಿ ಹಾಗೂ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, April 10, 2025, 13:55 [IST]
English summary
Tata safari march 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+