6-ಸೀಟರ್.. ಶೀಘ್ರದಲ್ಲೇ ಕಲ್ಲು ಬಂಡೆಯಂತಿರುವ ಈ Tata SUV ಹೊಸ ರೂಪದಲ್ಲಿ ಬಿಡುಗಡೆ, ಬೆಲೆ ಅಗ್ಗವೇ?

ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ (Tata Motors), ವಿವಿಧ ಹ್ಯಾಚ್‌ಬ್ಯಾಕ್ ಹಾಗೂ ಎಸ್‌ಯುವಿಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಪೆಟ್ರೋಲ್, ಡೀಸೆಲ್, ಸಿಎನ್‌ಜಿ & ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿವೆ. ಇತ್ತೀಚೆಗೆ, ದೇಶೀಯವಾಗಿ ಕಂಪನಿಯು ಹೊಚ್ಚ ಹೊಸ ಹ್ಯಾರಿಯರ್ ಇವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದೀಗ ಮೇಲ್ದರ್ಜೆಗೇರಿಸಿದ ಸಫಾರಿ ಎಸ್‌ಯುವಿ ಮಾರಾಟಕ್ಕೆ ತರಲು ತೆರೆಮರೆಯಲ್ಲಿ ಸಿದ್ಧತೆಗಳನ್ನು ನಡೆಸುತ್ತಿದೆ.

ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ ಒಂದಷ್ಟು ನವೀಕರಣಗಳಿಗೆ ಒಳಪಟ್ಟ ನೂತನ ಟಾಟಾ ಸಫಾರಿ (Tata Safari) ಎಸ್‌ಯುವಿಯನ್ನು ಪರಿಚಯಿಸಲಾಗುತ್ತದೆ. ಈಗಾಗಲೇ, ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಾಣಿಸಿಕೊಂಡಿದೆ. ಅದರ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲೂ ಹರಿದಾಡುತ್ತಿವೆ. ಈ ಕಾರಿನ ವಿನ್ಯಾಸ ಹಾಗೂ ವೈಶಿಷ್ಟ್ಯಗಳಲ್ಲಿ ಅಷ್ಟಾಗಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎನ್ನಲಾಗಿದೆ.

Tata Safari Petrol Suv Spotted On Testing Launch Soon Details

ನೂತನ ಸಫಾರಿ ಎಸ್‌ಯುವಿಯ ಸ್ಪೈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಅದು ಪ್ರಸ್ತುತವಿರುವ ಸಫಾರಿಯಂತೆಯೇ ಇರಲಿದೆ. ಮುಂಭಾಗ (ಫ್ರಂಟ್) ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಕನೆಕ್ಟ್ಡ್ ಎಲ್ಇಡಿ ಡಿಆರ್‌ಎಲ್‌ಗ‌ಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಬಣ್ಣಗಳ ಆಯ್ಕೆಯಲ್ಲಿ ಕೂಡ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬಹುದು ಎಂದು ಹೇಳಲಾಗಿದೆ.

ಈಗ ಟಾಟಾ ಸಫಾರಿ ಎಸ್‌ಯುವಿಯನ್ನು ಬಲಿಷ್ಠವಾದ 2-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್‌ ಆಯ್ಕೆಯಲ್ಲಿ ಮಾತ್ರ ಮಾರಾಟಗೊಳಿಸಲಾಗುತ್ತಿದೆ. ಇದರೊಂದಿಗೆ ನವೀಕರಣಕ್ಕೆ ಒಳಪಡುವ ಹೊಸ ಸಫಾರಿ ಕಾರನ್ನು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸುವ ಎಲ್ಲ ಸಾಧ್ಯತೆಗಳಿವೆ. ಆದರೆ, ಈ ಬಗ್ಗೆ ಕಂಪನಿಯು ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.

Tata Safari Petrol Suv Spotted On Testing Launch Soon Details

ಮುಂಬರಲಿರುವ ನೂತನ ಪೆಟ್ರೋಲ್ ಚಾಲಿತ ಟಾಟಾ ಸಫಾರಿ ಎಸ್‌ಯುವಿಯಲ್ಲಿಯೂ 6/ 7 ಆಸನಗಳಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಇದು ಮಾತ್ರವಲ್ಲದೆ, ಸಾಮಾನ್ಯ ಸಫಾರಿಯಂತೆಯೇ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್‌ ಹಾಗೂ ಡುಯಲ್ ಜೋನ್ ಆಟೋಮೆಟಿಕ್ ಎಸಿಯನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ನವೀಕರಣಕ್ಕೆ ಒಳಪಟ್ಟ ಸಫಾರಿ ಕಾರಿನ ಸುರಕ್ಷತಾ ವೈಶಿಷ್ಟ್ಯಗಳಲ್ಲೂ ಯಾವುದೇ ಮಾರ್ಪಾಡುಗಳು ಇರುವುದಿಲ್ಲ ಎನ್ನಲಾಗಿದೆ. ಇದು ಈಗಿರುವ ಸಫಾರಿ ರೀತಿಯಲ್ಲಿಯೇ 7-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರಲಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಟಾಟಾ ಸಫಾರಿ ಎಸ್‌ಯುವಿ, ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಅದೇ ರೀತಿಯಲ್ಲಿ ಪೆಟ್ರೋಲ್ ಚಾಲಿತ ಸಫಾರಿಯು ರೂ.12 ರಿಂದ ರೂ.13 ಲಕ್ಷ ಆರಂಭಿಕ ದರವನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಇತ್ತೀಚೆಗೆ ಬಿಡುಗಡೆಯಾಗಿ ಟಾಟಾ ಹ್ಯಾರಿಯರ್ ಇವಿ ವಿಶೇಷತೆಗಳೇನು:

ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.21.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಈ ಕಾರಿನಲ್ಲಿ 5 ಆಸನಗಳಿವೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, 10 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) & 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Source: Rushlane

Article Published On: Friday, June 20, 2025, 13:08 [IST]
English summary
Tata safari petrol suv spotted on testing launch soon details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+