ಗಟ್ಟಿಮುಟ್ಟಾದ ಕಾರಿದು.. 6-ಸೀಟರ್, ಆದರೂ ಈ 'Tata Suv' ಕೊಳ್ಳಲು ಗ್ರಾಹಕರಿಂದ ನಿರಾಸಕ್ತಿ, ಕಾರಣವೇನು?

ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ಸಫಾರಿ (Tata Safari) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಸುರಕ್ಷತೆಗೂ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದರ ಹೊರತಾಗಿ ಈ ಕಾರಿನ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಏಪ್ರಿಲ್‌ನಲ್ಲಿಯೂ 'ಟಾಟಾ ಸಫಾರಿ'ಯನ್ನು ಕೊಳ್ಳಲು ಗ್ರಾಹಕರು ನಿರಾಸಕ್ತಿ ತೋರಿಸಿದ್ದಾರೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಏಪ್ರಿಲ್-2025) ಟಾಟಾ ಕಂಪನಿಯು ಕೇವಲ 1,340 ಯುನಿಟ್ ಸಫಾರಿ ಕಾರುಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 1,716 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ -22% ಇಳಿಮುಖವಾಗಿದೆ.

Tata Safari Suv April 2025 Sales Details

ಈ ವರ್ಷದ ಮೊದಲ ಮೂರು ತಿಂಗಳು ಸಹ 'ಟಾಟಾ ಸಫಾರಿ' ಎಸ್‌ಯುವಿಗಳ ಮಾರಾಟವು ಅಷ್ಟು ಚೆನ್ನಾಗಿರಲಿಲ್ಲ. ಮಾಸಿಕ ಸರಾಸರಿ 1,500 ಯುನಿಟ್‌ಗಳನ್ನು ಮಾರಾಟ ಮಾಡಲು ಮಾತ್ರವೇ ಕಂಪನಿಯು ಯಶಸ್ವಿಯಾಗಿದೆ. ಸಫಾರಿ ಕಾರಿಗೆ ಮಾರಾಟ ಪ್ರಮಾಣ ಕುಸಿತವಾಗುತ್ತಿರುವ ಬಗ್ಗೆ ಟಾಟಾ ಮೋಟಾರ್ಸ್ ಯಾವುದೇ ಸ್ಪಷ್ಟವಾದ ಕಾರಣವನ್ನು ಬಹಿರಂಗಪಡಿಸಿಲ್ಲ.

ಆದರೂ 'ಸಫಾರಿ' ಎಸ್‌ಯುವಿ ಬೆಲೆಗೆ ಬೇರೆ ಕಂಪನಿಗಳು ಸಾಕಷ್ಟು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ಕಾರುಗಳನ್ನು ಮಾರಾಟಗೊಳಿಸುತ್ತಿವೆ. ಗ್ರಾಹಕರು ಅವುಗಳತ್ತ ಮುಖ ಮಾಡಿದ್ದಾರೆ. ಇದರಿಂದಲೇ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಜೊತೆಗೆ ಈ ಕಾರಿನ ದರವು ಕೊಂಚ ಮಟ್ಟಿಗೆ ದುಬಾರಿಯಾಗಿದ್ದು, ಮಧ್ಯಮ ವರ್ಗದ ಖರೀದಿದಾರರು ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

Tata Safari Suv April 2025 Sales Details

ಟಾಟಾ ಸಫಾರಿ ವಿಶೇಷತೆಗಳೇನು..

ಇದೊಂದು ಫ್ಯಾಮಿಲಿ ಎಸ್‌ಯುವಿಯಾಗಿದೆ. ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಸ್ಮಾರ್ಟ್ (ಒ), ಅಡ್ವೆಂಚರ್ & ಅಕಾಂಪ್ಲಿಶ್ಡ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್ & ಸೂಪರ್‌ನೋವಾ ಕಾಪರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು 2-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Tata Safari Suv April 2025 Sales Details

ನೂತನ ಟಾಟಾ ಸಫಾರಿ ಎಸ್‌ಯುವಿಯು 6/ 7 ಆಸನಗಳನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್-ಜೋನ್ ಆಟೋಮೆಟಿಕ್ ಎಸಿ ಹಾಗೂ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 15, 2025, 8:30 [IST]
English summary
Tata safari suv april 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+