6-ಸೀಟರ್.. ಬಲಭೀಮ ಕಾರಿದು, ಆದರೂ ಈ TATA SUV ಮಾರಾಟದಲ್ಲಿ ತೀವ್ರ ಹಿನ್ನೆಡೆ.. ಯಾಕೆ?
ಟಾಟಾ ಸಫಾರಿ (Tata Safari) ಪ್ರಮುಖ ಫ್ಯಾಮಿಲಿ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ & ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಉತ್ತಮವಾದ ಕಾರ್ಯಕ್ಷಮತೆಯಿಂದಲೂ ಮನೆ ಮಾತಾಗಿದೆ. ಅದರ ಹೊರತಾಗಿ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಈ ಜುಲೈನಲ್ಲೂ ಮುಂದುವರಿದ್ದು, ಸರಿ ಸುಮಾರು 1,242 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 2,109 ಯುನಿಟ್‌ಗಳನ್ನು ಮಾರಲಾಗಿತ್ತು. ಇದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ -41% ಇಳಿಕೆಯಾಗಿದೆ.
ಈ ವರ್ಷದ ಮೊದಲ 6 ತಿಂಗಳಲ್ಲೂ 'ಟಾಟಾ ಸಫಾರಿ' ಎಸ್‌ಯುವಿ ಮಾರಾಟವು ಹೇಳಿಕೊಳ್ಳುವಷ್ಟು ಮಟ್ಟಿಗೆ ಚೆನ್ನಾಗಿರಲಿಲ್ಲ. ಒಟ್ಟು 7,590 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು ಸರಾಸರಿ 1,265 ಯುನಿಟ್ ಮಾತ್ರ ಮಾರಾಟವಾಗಿವೆ.

ಟಾಟಾ ಸಫಾರಿ ವಿಶೇಷತೆಗಳೇನು:
ಇದೊಂದು ಎಸ್‌ಯುವಿಯಾಗಿದೆ. ಕೈಗಟುಕುವ ಬೆಲೆಯಲ್ಲಿ ದೇಶೀಯ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.15.50 ಲಕ್ಷ ಹಾಗೂ ಗರಿಷ್ಠ ರೂ.27.44 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಸ್ಮಾರ್ಟ್, ಸ್ಮಾರ್ಟ್ (ಒ), ಅಡ್ವೆಂಚರ್ ಎಕ್ಸ್ ಪ್ಲಸ್, ಅಡ್ವೆಂಚರ್ ಎಕ್ಸ್ ಪ್ಲಸ್ ಡಾರ್ಕ್, ಅಕಂಪ್ಲಿಶ್ಡ್ ಎಕ್ಸ್, ಅಕಂಪ್ಲಿಶ್ಡ್ ಎಕ್ಸ್ ಪ್ಲಸ್ ಮತ್ತು ಅಕಂಪ್ಲಿಶ್ಡ್ ಎಕ್ಸ್ ಡಾರ್ಕ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಕನೆಕ್ಟ್ಡ್ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಡೈನಾಮಿಕ್ ಟರ್ನ್ ಇಂಡಿಕೇಟರ್‌ಗಳು ಹಾಗೂ ಡೈಮಂಡ್ - ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಕಾಸ್ಮಿಕ್ ಗೋಲ್ಡ್, ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್ ಹಾಗೂ ಸೂಪರ್‌ನೋವಾ ಕಾಪರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಸಫಾರಿ 6/ 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 420 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 4,668 ಎಂಎಂ ಉದ್ದ, 1,922 ಎಂಎಂ ಅಗಲ ಹಾಗೂ 1,795 ಎಂಎಂ ಎತ್ತರ ಕೂಡ ಇದೆ. ಜೊತೆಗೆ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಇದು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಡಿದೆ. 14 ರಿಂದ 16 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 50 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಡುಯಲ್-ಜೋನ್ ಆಟೋಮೆಟಿಕ್ ಎಸಿ ಹಾಗೂ ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ ಸಫಾರಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಒಟ್ಟಾರೆಯಾಗಿ, ಈ 'ಟಾಟಾ ಸಫಾರಿ' ಎಸ್‌ಯುವಿ ಮಾರಾಟ ಸಂಖ್ಯೆ ಕುಸಿತವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಇದರ ಬೆಲೆಗೆ ಬೇರೆ ಕಂಪನಿಯ ಕಾರುಗಳನ್ನೇ ಖರೀದಿ ಮಾಡಬಹುದು. ಜೊತೆಗೆ ಇದು ಡಿಸೇಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ದೊರೆಯಲಿದೆ. ಗ್ರಾಹಕರು ಪೆಟ್ರೋಲ್ & ಎಲೆಕ್ಟ್ರಿಕ್ ಚಾಲಿತ ಕಾರುಗಳನ್ನು ದೊಡ್ಡ ಪ್ರಮಾಣದಲ್ಲಿ ಕೊಂಡುಕೊಳ್ಳಲು ಬಯಸುತ್ತಿದ್ದಾರೆ. ಹೀಗಾಗಿ, ಸಫಾರಿ ಮಾರಾಟವು ಇಳಿಕೆಯಾಗುತ್ತದೆ ಎಂದು ಹೇಳಲಾಗಿದೆ.


Click it and Unblock the Notifications








