6-ಸೀಟರ್, ಗಟ್ಟಿಮುಟ್ಟದ ಕಾರಿದು.. ಆದರೂ ಈ Tata SUV ಖರೀದಿಸಲು ಗ್ರಾಹಕರು ಮುಂದಾಗುತ್ತಿಲ್ಲ!

ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ಸಫಾರಿ (Tata Safari) ತನ್ನದೆಯಾದ ಛಾಪನ್ನು ಮೂಡಿಸಿದೆ. ಇದು ಉತ್ತಮವಾದ ಕಾರ್ಯಕ್ಷಮತೆ ಹಾಗೂ ಆಕರ್ಷಕವಾದ ವೈಶಿಷ್ಟ್ಯಗಳಿಗೂ ಹೆಸರುವಾಸಿಯಾಗಿದೆ. ಅದರ ಹೊರತಾಗಿ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಈ ಜೂನ್ ತಿಂಗಳಲ್ಲೂ ಮುಂದುವರಿದಿದ್ದು, ಒಟ್ಟು 922 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -34% ಇಳಿಕೆಯಾಗಿದೆ. 2024ರ ಇದೇ ಅವಧಿಯಲ್ಲಿ 1,394 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿತ್ತು.

ಈ ವರ್ಷದ ಮೊದಲ 5 ತಿಂಗಳಲ್ಲೂ ಟಾಟಾ ಸಫಾರಿ ಕಾರಿನ ಮಾರಾಟದಲ್ಲಿ ಹಾವು - ಏಣಿ ಆಟ ಮುಂದುವರಿದಿದ್ದು, ಹಲವು ಏರಿಳಿತಗಳನ್ನು ಕಾಣಲಾಗಿದೆ. ಮೇನಲ್ಲಿ 1,109 ಯುನಿಟ್, ಏಪ್ರಿಲ್‌ನಲ್ಲಿ 1,340 ಯುನಿಟ್, ಮಾರ್ಚ್‌ನಲ್ಲಿ1,415 ಯುನಿಟ್, ಫೆಬ್ರವರಿಯಲ್ಲಿ 1,562 ಯುನಿಟ್ ಹಾಗೂ ಜನವರಿ ತಿಂಗಳಲ್ಲಿ 1,548 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Tata Safari Suv June 2025 Sales Details

ಟಾಟಾ ಸಫಾರಿ ವಿಶೇಷತೆಗಳೇನು:

ಇದೊಂದು ದೊಡ್ಡ ಗಾತ್ರದ ಎಸ್‌ಯುವಿಯಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಸ್ಮಾರ್ಟ್ (ಒ), ಅಡ್ವೆಂಚರ್ ಮತ್ತು ಅಕಂಪ್ಲಿಶ್ಡ್ ಪ್ಲಸ್ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಾಗುತ್ತದೆ.

ಈ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಕಾಸ್ಮಿಕ್ ಗೋಲ್ಡ್, ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್, ಸೂಪರ್‌ನೋವಾ ಕಾಪರ್ ಮತ್ತು ಲೂನಾರ್ ಸ್ಲೇಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ 4,668 ಎಂಎಂ ಉದ್ದ, 1,922 ಎಂಎಂ ಅಗಲ ಮತ್ತು 1,795 ಎಂಎಂ ಎತ್ತರವು ಇದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Tata Safari Suv June 2025 Sales Details

ನೂತನ ಸಫಾರಿ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಡೀಸೆಲ್ ಎಂಜಿನ್ ಒಳಗೊಂಡಿದ್ದು, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಇದು ಬೃಹದಾಕಾರದ ಕಾರಾಗಿದ್ದರೂ ಸಾಮಾನ್ಯ ಕಾರುಗಳಂತೆ 14 ರಿಂದ 16.30 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಇದರಲ್ಲಿ 6/ 7 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 420 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 50 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.

Tata Safari Suv June 2025 Sales Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದ್ದು, ಪ್ರತಿಯೊಬ್ಬರನ್ನು ಆಕರ್ಷಿಸುತ್ತದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ - ಡ್ರೈವರ್ ಡಿಸ್​ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಹಾಗೂ ಡುಯಲ್ - ಜೋನ್ ಆಟೋಮೆಟಿಕ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ ಸಫಾರಿ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್​​ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 - ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Article Published On: Wednesday, July 9, 2025, 19:57 [IST]
English summary
Tata safari suv june 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+