6-ಸೀಟರ್, ಕಲ್ಲು ಬಂಡೆಯಂತಹ ಕಾರಿದು.. ಆದರೂ ಈ Tata SUV ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ, ಕಾರಣವೇನು?

ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದ್ದು, ದೇಶೀಯ ಕಾರು ಮಾರುಕಟ್ಟೆಯಲ್ಲಿ 4ನೇ ಸ್ಥಾನದಲ್ಲಿದೆ. ಕಂಪನಿಯು ಮಾರಾಟಗೊಳಿಸುವ 'ಸಫಾರಿ' ಜನಪ್ರಿಯ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ಈ ಕಾರನ್ನು 'ಭಾರತ್ ಎನ್‌ಸಿಎಪಿ' ಕೂಡ ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಅದರ ಹೊರತಾಗಿಯೂ ಇದೇ ಸಫಾರಿ ಎಸ್‌ಯುವಿ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಈ 'ಮೇ'ನಲ್ಲೂ ಮುಂದುವರಿದಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಮೇ-2025) ಟಾಟಾ ಕಂಪನಿಯು ಒಟ್ಟು 1,109 ಯುನಿಟ್ ಸಫಾರಿ (Safari) ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರ 'ಮೇ'ನಲ್ಲಿ 1,661 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) -33.23% ಇಳಿಕೆಯಾಗಿದೆ.

Tata Safari Suv May Sales 2025 Details

ಇದೇ ವರ್ಷದ ಮೊದಲ 4 ತಿಂಗಳಲ್ಲೂ 'ಟಾಟಾ ಸಫಾರಿ' ಎಸ್‌ಯುವಿ ಮಾರಾಟ ಸಂಖ್ಯೆಯು ಅಷ್ಟೇನು ಉತ್ತಮವಾಗಿರಲ್ಲ. ಏಪ್ರಿಲ್‌ನಲ್ಲಿ 1,340 ಯುನಿಟ್, ಮಾರ್ಚ್‌ನಲ್ಲಿ 1,415 ಯುನಿಟ್, ಫೆಬ್ರವರಿಯಲ್ಲಿ 1,562 ಯುನಿಟ್ ಹಾಗೂ ಜನವರಿಯಲ್ಲಿ 1,548 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿತ್ತು.

'ಟಾಟಾ ಸಫಾರಿ' ಕಾರಿನ ಮಾರಾಟ ಸಂಖ್ಯೆ ಕುಸಿತವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಈ ಎಸ್‌ಯುವಿಯು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆ ಹೊಂದಿದ್ದು, ಬೇರೆ ಕಂಪನಿ ಕಾರುಗಳನ್ನು ತೆಗೆದುಕೊಳ್ಳಲು ಗ್ರಾಹಕರು ಮುಂದಾಗುತ್ತಿದ್ದಾರೆ. ಜೊತೆಗೆ ಸಣ್ಣ ಎಸ್‌ಯುವಿಗಳೇ ಸಾಕಷ್ಟು ಅತ್ಯುತ್ತಮ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಖರೀದಿದಾರರು ಸಹ ಅವುಗಳನ್ನೇ ಕೊಂಡುಕೊಳ್ಳುತ್ತಿದ್ದಾರೆ. ಹೀಗಾಗಿ 'ಸಫಾರಿ' ಮಾರಾಟ ಪ್ರಮಾಣ ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Tata Safari Suv May Sales 2025 Details

ಟಾಟಾ ಸಫಾರಿ (Tata Safari) ವಿಶೇಷತೆಗಳೇನು:

ಇದೊಂದು ಎಸ್‌ಯುವಿಯಾಗಿದ್ದು, ಕನಿಷ್ಠ ರೂ.15.50 ಲಕ್ಷ ಮತ್ತು ಗರಿಷ್ಠ ರೂ.27.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಕಾಸ್ಮಿಕ್ ಗೋಲ್ಡ್, ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್, ಸೂಪರ್‌ನೋವಾ ಕಾಪರ್ ಮತ್ತು ಲೂನಾರ್ ಸ್ಲೇಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 2-ಲೀ. ಡೀಸೆಲ್ ಎಂಜಿನ್‌ನ್ನು ಮಾತ್ರ ಹೊಂದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 14.50 ರಿಂದ 16.30 ಕೆಎಂಪಿಎಲ್‌ಗೂ ಅಧಿಕ ಮೈಲೇಜ್ ನೀಡುತ್ತದೆ.

Tata Safari Suv May Sales 2025 Details

ಇದರಲ್ಲಿ 6/ 7 ಆಸನ ಆಯ್ಕೆ ವ್ಯವಸ್ಥೆ ಹೊಂದಿದ್ದು, ಒಂದು ತುಂಬು ಕುಟುಂಬ ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 420 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಅದನ್ನು ಮೂರನೇ ಸಾಲಿನ ಆಸನಗಳನ್ನು ಮಡಚಿದರೆ, 827 ಲೀ. ವರೆಗೆ ವಿಸ್ತರಿಸಬಹುದು.

ನೂತನ ಎಸ್‌ಯುವಿಯು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಡುಯಲ್-ಜೋನ್ ಆಟೋಮೆಟಿಕ್ ಎಸಿ ಮತ್ತು ಸನ್‌ರೂಫ್‌ನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Article Published On: Thursday, June 12, 2025, 14:37 [IST]
English summary
Tata safari suv may sales 2025 details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+