Tata: ಜಾಸ್ತಿ ಗಟ್ಟಿಮುಟ್ಟು.. ಟಾಟಾದ ಜನಪ್ರಿಯ ಫ್ಯಾಮಿಲಿ ಕಾರಿನ ಬೆಲೆ ಏರಿಕೆ, ಎಷ್ಟಾಗಿದೆ ಗೊತ್ತಾ?
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತವೆ. ಸದ್ಯ, ಕಂಪನಿಯು ಪ್ರಖ್ಯಾತ ಫ್ಯಾಮಿಲಿ ಎಸ್‌ಯುವಿ ಸಫಾರಿ (Safari) ದರವನ್ನು ಸ್ವಲ್ಪ ಮಟ್ಟಿಗೆ ಏರಿಕೆ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಟಾಟಾ ಸಫಾರಿ (Tata Safari) ಎಸ್‌ಯುವಿಯ ವಿವಿಧ ರೂಪಾಂತರಗಳ (ವೇರಿಯೆಂಟ್) ಬೆಲೆ ಸರಿ ಸುಮಾರು ರೂ.36,000 ವರೆಗೆ ಏರಿಕೆಯಾಗಿದೆ. ದರ ಏರಿಕೆ ನಂತರ, ನೂತನ ಸಫಾರಿ ಕಾರು, ಕನಿಷ್ಠ ರೂ.15.50 ಲಕ್ಷ ಮತ್ತು ಗರಿಷ್ಠ ರೂ.27 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ.

ಈ ಸಫಾರಿ ಎಸ್‌ಯುವಿ ಸ್ಮಾರ್ಟ್, ಸ್ಮಾರ್ಟ್ (ಒ), ಅಡ್ವೆಂಚರ್ ಮತ್ತು ಅಕಂಪ್ಲಿಶ್ಡ್ ಪ್ಲಸ್ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಜೊತೆಗೆ ಕಾಸ್ಮಿಕ್ ಗೋಲ್ಡ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್, ಸೂಪರ್‌ನೋವಾ ಕಾಪರ್ ಹಾಗೂ ಲೂನಾರ್ ಸ್ಟೇಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಟಾಟಾ ಸಫಾರಿ ಕಾರು ವಿಶಾಲವಾದ 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 420 ಲೀಟರ್ ಸಾಮರ್ಥ್ಯಾದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹೊಸ ಟಾಟಾ ಸಫಾರಿ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 14.50 ರಿಂದ 16.30 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಡುಯಲ್-ಜೋನ್ ಆಟೋಮೆಟಿಕ್ ಎಸಿ, ಆಂಬಿಯೆಂಟ್ ಲೈಟಿಂಗ್ ಮತ್ತು ಸನ್‌ರೂಫ್‌ನ್ನು ಒಳಗೊಂಡಿದೆ.

ನೂತನ ಟಾಟಾ ಸಫಾರಿ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಟಾಟಾ ಹ್ಯಾರಿಯರ್ ಎಸ್‌ಯುವಿಯ ಬೆಲೆಯೂ ಏರಿಕೆ: ಈ ಕಾರಿನ ವಿವಿಧ ರೂಪಾಂತರಗಳು ರೂ.1,000 ದಿಂದ ರೂ.36,000 ವರೆಗೆ ದರ ಏರಿಕೆಯನ್ನು ಪಡೆದುಕೊಂಡಿವೆ. ಇದು ರೂ.15 ಲಕ್ಷದಿಂದ ರೂ.26.25 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 14.60 ರಿಂದ 16.8 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications