TATA: 6-ಸೀಟರ್, ಬಲಭೀಮ ಕಾರಿದು.. ಈ ಜನಪ್ರಿಯ ಟಾಟಾ ಎಸ್‌ಯುವಿ ಖರೀದಿಸಲು ಮುಗಿಬಿದ್ದ ಗ್ರಾಹಕರು!

ಟಾಟಾ ಸಫಾರಿ (Tata Safari) ಜನಮೆಚ್ಚಿದ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೂ ಈ ಕಾರಿನ ಮಾರಾಟವು ದಿನದಿಂದ ದಿನಕ್ಕೆ ಕುಸಿತವಾಗುತ್ತಿತ್ತು. ಜಿಎಸ್‌ಟಿ ಪರಿಷ್ಕರಣೆ ನಂತರ 'ಸಫಾರಿ' ಬೆಲೆಯೂ ರೂ.1.45 ಲಕ್ಷವರೆಗೆ ಇಳಿಕೆಯಾಗಿದ್ದು, ಈ ಸೆಪ್ಟೆಂಬರ್ ತಿಂಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬರೋಬ್ಬರಿ 2,000 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 1,644 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 22% ಪ್ರಗತಿಯಾಗಿದೆ.

ಹೊಸ ಟಾಟಾ ಸಫಾರಿ ವಿಶೇಷತೆಗಳೇನು:

ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.14.66 ಲಕ್ಷದಿಂದ ರೂ.25.96 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಸ್ಮಾರ್ಟ್, ಸ್ಮಾರ್ಟ್ (ಒ), ಅಡ್ವೆಂಚರ್ ಎಕ್ಸ್ ಪ್ಲಸ್, ಅಡ್ವೆಂಚರ್ ಎಕ್ಸ್ ಪ್ಲಸ್ ಡಾರ್ಕ್, ಅಕಂಪ್ಲಿಶ್ಡ್ ಎಕ್ಸ್ ಹಾಗೂ ಅಕಂಪ್ಲಿಶ್ಡ್ ಎಕ್ಸ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ.

Tata Safari Suv September 2025 Sales Details

ನೂತನ 'ಸಫಾರಿ' ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿದೆ. ಅತ್ಯಾಧುನಿಕವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಕಾಸ್ಮಿಕ್ ಗೋಲ್ಡ್, ಸೂಪರ್ನೋವಾ ಕಾಪರ್, ಫ್ರಾಸ್ಟ್ ವೈಟ್, ಫ್ರಾಸ್ಟ್ ರಾಯಲ್ ಬ್ಲೂ, ಪ್ಯೂರ್ ಗ್ರೇ, ಡೇಟೋನಾ ಗ್ರೇ, ಕಾರ್ಬನ್ ಬ್ಲ್ಯಾಕ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಇದು ದೊಡ್ಡ ಗಾತ್ರದ ಫ್ಯಾಮಿಲಿ ಕಾರಾಗಿದೆ. 4,668 ಮಿ.ಮೀ ಉದ್ದ, 1,922 ಮಿ.ಮೀ ಅಗಲ ಹಾಗೂ 1,795 ಎಂಎಂ ಎತ್ತರವಿದೆ. ಹಾಗೆಯೇ 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,741 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,825 ಕೆಜಿ ತೂಕವಿದೆ.

Tata Safari Suv September 2025 Sales Details

ಈ ಕಾರು 6/ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯಲಿದ್ದು, 2 ತುಂಬು ಕುಟುಂಬ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಜಾಸ್ತಿ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 420 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ 'ಟಾಟಾ' ಸಫಾರಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 3,750 ಆರ್‌ಪಿಎಂನಲ್ಲಿ 170 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 2,500 ಆರ್‌ಪಿಎಂನಲ್ಲಿ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

Tata Safari Suv September 2025 Sales Details

ಇದರ ಇಂಧನ ದಕ್ಷತೆಯೂ ಉತ್ತಮವಾಗಿದ್ದು, 14 ರಿಂದ 16 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 4.1 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 ಇಂಚಿನ ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಜೆಬಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಟೋಮೆಟಿಕ್ ಎಸಿ ಮತ್ತು ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ನೂತನ 'ಸಫಾರಿ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್​​ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Friday, October 10, 2025, 15:30 [IST]
English summary
Tata safari suv september 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+