TATA: ಟಾಟಾ ಕಾರುಗಳಿಗೆ ಮನಸೋತ ಗ್ರಾಹಕರು.. 24 ಕಿ.ಮೀ ಮೈಲೇಜ್, 7 ಲಕ್ಷ.. ಈ SUVಗೆ ಫುಲ್ ಡಿಮ್ಯಾಂಡ್!
ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿದೆ. ಈಗಾಗಲೇ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಕಂಪನಿಯ ಕಾರುಗಳಿಗೆ ಶುಕ್ರದೆಸೆ ಶುರುವಾಗಿದ್ದು, ಈ ಸೆಪ್ಟೆಂಬರ್ ತಿಂಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಸರಿ ಸುಮಾರು 60,907 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಸೆಪ್ಟೆಂಬರ್‌ನಲ್ಲಿ 41,313 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 47% ಬೆಳವಣಿಗೆಯಾಗಿದೆ.
ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಟಾಟಾ ಕಂಪನಿಯು ದೊಡ್ಡ ಮಟ್ಟದಲ್ಲಿ ಪ್ರಗತಿ ಸಾಧಿಸಿದೆ. ಒಟ್ಟು 9,191 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದ್ದು, ಶೇಕಡ 96% ಅಧಿವೃದ್ದಿಯಾಗಿದೆ. ವಿಶೇಷವಾಗಿ ನೆಕ್ಸಾನ್ (Nexon) ಎಸ್‌ಯುವಿಯು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬರೋಬ್ಬರಿ 22,500ಕ್ಕೂ ಅಧಿಕ ಕಾರುಗಳನ್ನು ಖರೀದಿದಾರರು ಕೊಂಡುಕೊಂಡಿದ್ದಾರೆ.

ಸ್ಟ್ಯಾಂಡರ್ಡ್ ಟಾಟಾ ನೆಕ್ಸಾನ್ ವಿಶೇಷತೆಗಳೇನು:
ಇದೊಂದು ಎಸ್‌ಯುವಿಯಾಗಿದೆ. ಕನಿಷ್ಠ ರೂ.7.32 ಲಕ್ಷ ಹಾಗೂ ಗರಿಷ್ಠ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಪ್ಯೂರ್ ಪ್ಲಸ್, ಪ್ಯೂರ್ ಪ್ಲಸ್ ಎಸ್, ಕ್ರಿಯೇಟಿವ್ ಹಾಗೂ ಫಿಯರ್‌ಲೆಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಕೂಡ ಸಿಗುತ್ತದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಪ್ಯೂರ್ ಗ್ರೇ, ಪ್ರಿಸ್ಟೈನ್ ವೈಟ್, ಕಾರ್ಬನ್ ಬ್ಲ್ಯಾಕ್, ಗ್ರಾಸ್‌ಲ್ಯಾಂಡ್ ಬೀಜ್ ಹಾಗೂ ಓಷನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಕಾರು 3,995 ಎಂಎಂ ಉದ್ದ, 1,804 ಎಂಎಂ ಅಗಲ ಹಾಗೂ 1,620 ಎಂಎಂ ಎತ್ತರವಿದೆ. 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,498 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಜಾಸ್ತಿ ಲಗೇಜ್ ತೆಗೆದುಕೊಂಡು ಹೋಗಲು 382 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ನೂತನ ನೆಕ್ಸಾನ್ 1.2-ಲೀ. ಟರ್ಬೊ ಪೆಟ್ರೋಲ್, 1.5-ಲೀ. ಡೀಸೆಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಟಾಟಾ ನೆಕ್ಸಾನ್ ಇವಿಯೂ ಲಭ್ಯ:
ಇದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 30 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 45 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 275 ರಿಂದ 489 ರೇಂಜ್ (ಮೈಲೇಜ್) ಕೊಡುತ್ತದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಂಪವರ್ಡ್ ಆಕ್ಸೈಡ್, ಫ್ಲೇಮ್ ರೆಡ್, ಡೇಟೋನಾ ಗ್ರೇ, ಫಿಯರ್‌ಲೆಸ್ ಪರ್ಪಲ್, ಕ್ರಿಯೇಟಿವ್ ಓಷನ್ ಹಾಗೂ ಕಾರ್ಬನ್ ಬ್ಲ್ಯಾಕ್ ಬಣ್ಣಗಳೊಂದಿಗೂ ಲಭ್ಯವಿದೆ.
ಈ ಕಾರು 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 350 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಜಿಎಸ್‌ಟಿ ಪರಿಷ್ಕರಣೆ ಬಳಿಕ ಟಾಟಾ ಕಾರುಗಳ ಹೊಸ ದರವೆಷ್ಟು:
ಜಿಎಸ್‌ಟಿ ಪರಿಷ್ಕರಿಸಿದ ನಂತರ ಟಾಟಾ ಕಾರುಗಳ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಟಿಯಾಗೊ ರೂ.4.57 ಲಕ್ಷದಿಂದ ರೂ.8.09 ಲಕ್ಷ, ಟಿಗೊರ್ ರೂ.5.49 ಲಕ್ಷದಿಂದ ರೂ.8.74 ಲಕ್ಷ, ಆಲ್ಟ್ರೋಜ್ ರೂ.6.30 ಲಕ್ಷದಿಂದ ರೂ.10.51 ಲಕ್ಷ, ಪಂಚ್ ರೂ.5.50 ಲಕ್ಷದಿಂದ ರೂ.9.30 ಲಕ್ಷ, ಕರ್ವ್ ರೂ.9.66 ಲಕ್ಷದಿಂದ ರೂ.19.52 ಲಕ್ಷ, ಹ್ಯಾರಿಯರ್ ರೂ.14 ಲಕ್ಷದಿಂದ ರೂ.25.25 ಲಕ್ಷ ಹಾಗೂ ಸಫಾರಿ ರೂ.14.66 ಲಕ್ಷದಿಂದ ರೂ.25.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.


Click it and Unblock the Notifications








