Tata: ಹೊಸ ಟಾಟಾ ಸಿಯೆರಾ ಕಾರಿನ ಟಾಪ್ ಎಂಡ್ ವೇರಿಯೆಂಟ್‌ಗಳ ಬೆಲೆ ಘೋಷಣೆ.. ಯಾವುದಕ್ಕೆ ಎಷ್ಟು?

ಇತ್ತೀಚೆಗೆ ಟಾಟಾ ಸಿಯೆರಾ (Tata Sierra) ಕಾರನ್ನು ಬಿಡುಗಡೆಗೊಳಿಸಲಾಗಿತ್ತು. ಇದೊಂದು ಎಸ್‌ಯುವಿಯಾಗಿದೆ. ಕೆಲವೇ ದಿನಗಳ ಹಿಂದೆ, ಈ ಕಾರಿನ ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್ ಹಾಗೂ ಅಡ್ವೆಂಚರ್ ಪ್ಲಸ್ ರೂಪಾಂತರಗಳ (ವೇರಿಯೆಂಟ್) ಬೆಲೆಯನ್ನು ಪ್ರಕಟಿಸಲಾಗಿತ್ತು. ಇವುಗಳು ರೂ.11.49 ಲಕ್ಷದಿಂದ ರೂ.17.19 ಲಕ್ಷ ದರವನ್ನು ಪಡೆದಿವೆ. ಸದ್ಯ ಗರಿಷ್ಠ ಶ್ರೇಣಿ ರೂಪಾಂತರಗಳಾದ (ಟಾಪ್ ಎಂಡ್ ವೇರಿಯೆಂಟ್) ಅಕಾಂಪ್ಲಿಶ್ಡ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಂಬ ರೂಪಾಂತರಗಳ ಬೆಲೆಯನ್ನು ಘೋಷಣೆ ಮಾಡಲಾಗಿದೆ.

ಅಕಂಪ್ಲಿಶ್ಡ್ (Accomplished) ರೂಪಾಂತರದ ಬೆಲೆ ಎಷ್ಟು?

ಇದು 4 ಪವರ್‌ಟ್ರೇನ್ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಪೆಟ್ರೋಲ್ - ಮ್ಯಾನುವಲ್ ಟ್ರಾಸ್ಮಿಷನ್ ಮಾಡೆಲ್ ರೂ.17.99 ಲಕ್ಷ, ಟರ್ಬೊ ಪೆಟ್ರೋಲ್ - ಆಟೋಮೆಟಿಕ್ ಟ್ರಾಸ್ಮಿಷನ್ ಮಾಡೆಲ್ ರೂ.19.99 ಲಕ್ಷ, ಡೀಸೆಲ್ - ಮ್ಯಾನುವಲ್ ಟ್ರಾಸ್ಮಿಷನ್ ಮಾಡೆಲ್ ರೂ.18.99 ಲಕ್ಷ ಹಾಗೂ ಡೀಸೆಲ್ - ಆಟೋಮೆಟಿಕ್ ಟ್ರಾಸ್ಮಿಷನ್ ಮಾಡೆಲ್ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Tata Sierra Accomplished and Accomplished Plus Variant Prices Announced Details

ಅಡ್ವೆಂಚರ್ ಪ್ಲಸ್ (Accomplished Plus): ರೂಪಾಂತರದ ದರವೆಷ್ಟು?

ಈ ಕಾರು 3 ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಟರ್ಬೊ ಪೆಟ್ರೋಲ್ - ಆಟೋಮೆಟಿಕ್ ಟ್ರಾಸ್ಮಿಷನ್ ಮಾಡೆಲ್ ರೂ.20.99 ಲಕ್ಷ, ಡೀಸೆಲ್ - ಮ್ಯಾನುವಲ್ ಟ್ರಾಸ್ಮಿಷನ್ ಮಾಡೆಲ್ ರೂ.20.29 ಲಕ್ಷ ಮತ್ತು ಡೀಸೆಲ್ - ಆಟೋಮೆಟಿಕ್ ಟ್ರಾಸ್ಮಿಷನ್ ರೂ.21.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಟಾಟಾ ಸಿಯೆರಾ ವಿಶೇಷತೆಗಳೇನು:

ನೂತನ 'ಸಿಯೆರಾ' ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಹೆಚ್ಚು ವಿಶಾಲವಾಗಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2730 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಇದು ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 622 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಬೆಲೆಗೆ ತಕ್ಕಂತೆ ಸಾಕಷ್ಟು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್‌ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ. 6-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್, 6-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

ಹೊಸ 'ಸಿಯೆರಾ' ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇ), ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12 ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಆಟೋಮೆಟಿಕ್ ವೈಪರ್‌ಗಳನ್ನು ಹೊಂದಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Monday, December 15, 2025, 8:29 [IST]
English summary
Tata sierra accomplished and accomplished plus variant prices announced details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+