Tata: ದೇಶವೇ ಎದುರು ನೋಡುತ್ತಿದೆ.. ಟೈಮ್ ಕಮ್ಮಿಯಿದೆ! ಅತಿ ಶೀಘ್ರದಲ್ಲೇ ಹೊಸ ಟಾಟಾ ಕಾರು ಬಿಡುಗಡೆ.. ಬೆಲೆ ಎಷ್ಟು?

ನವೆಂಬರ್ 25ರಂದು ಐಸಿಇ (ಪೆಟ್ರೋಲ್/ಡೀಸೆಲ್) ಚಾಲಿತ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಈ ಕಾರು ರೂ.11.49 ಲಕ್ಷದಿಂದ ರೂ.21.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಮಂಗಳವಾರದಂದು ಬುಕ್ಕಿಂಗ್ ಶುರುವಾಗಿದ್ದು, ಮೊದಲ ದಿನವೇ 70,000ಕ್ಕೂ ಅಧಿಕ ಸಂಖ್ಯೆಯಲ್ಲಿ ಆರ್ಡರ್‌ಗಳಾಗಿವೆ. ಇದೇ ಎಸ್‌ಯುವಿಯು ಎಲೆಕ್ಟ್ರಿಕ್ ರೂಪದಲ್ಲೂ ಅತಿ ಶೀಘ್ರದಲ್ಲೇ ಮಾರಾಟಕ್ಕೆ ಬರಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ನೂತನ 'ಟಾಟಾ ಸಿಯೆರಾ ಇವಿ' 2026ರ ಮೊದಲ ತ್ರೈಮಾಸಿಕದಲ್ಲಿ (ಜನವರಿ - ಮಾರ್ಚ್) ಪರಿಚಯಗೊಳ್ಳುವ ಎಲ್ಲ ಸಾಧ್ಯತೆಯಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಇದು ಕನಿಷ್ಠ ರೂ.16 ಹಾಗೂ ಗರಿಷ್ಠ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರುವ ನಿರೀಕ್ಷೆಯಿದೆ.

Tata Sierra Electric SUV Launch Soon Expected Price Design Colour Range And Features Details

ಈ ಕಾರು ಸಹ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಸ್ಟ್ಯಾಂಡರ್ಡ್ 'ಸಿಯೆರಾ'ದಂತೆ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿರಲಿದೆ.

ಇದು ಹೆಚ್ಚು ವಿಶಾಲವಾಗಿದೆ. ಗಾತ್ರದಲ್ಲೂ ಬದಲಾವಣೆಯಿರುವುದಿಲ್ಲ. 4,340 ಎಂಎಂ ಉದ್ದ, 1,841 ಎಂಎಂ ಅಗಲ ಹಾಗೂ 1,715 ಎಂಎಂ ಎತ್ತರವಿರಲಿದೆ. ಜೊತೆಗಿದು 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,730 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ.

ಹೊಸ 'ಟಾಟಾ ಸಿಯೆರಾ ಇವಿ' ಕೂಡ 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಹಾಗೆಯೇ ಈಗಿರುವ 'ಸಿಯೆರಾ'ದಂತೆ ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗಲಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿರಬಹುದು. ವಿಶೇಷವಾಗಿ 'ಟಾಟಾ ಹ್ಯಾರಿಯರ್ ಇವಿ'ಯ ಪ್ರತಿರೂಪವಾಗಿರಲಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ.

ನೂತನ 'ಟಾಟಾ ಸಿಯೆರಾ' ಎಲೆಕ್ಟ್ರಿಕ್ ಎಸ್‌ಯುವಿಯು ಸ್ಟ್ಯಾಂಡರ್ಡ್ 'ಸಿಯೆರಾ'ದಂತೆಯೇ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಬಹುಮುಖ್ಯವಾಗಿ ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇ), ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ವೈಪರ್‌ಗಳು, ರೇರ್ ಎಸಿ ವೆಂಟ್‌ಗಳು, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿರಲಿದೆ.

ಈ ಕಾರಿನ ಸುರಕ್ಷತಾ ವೈಶಿಷ್ಟ್ಯಗಳಲ್ಲೂ ಯಾವುದೇ ಮಾರ್ಪಾಡುಗಳಿರುವುದಿಲ್ಲ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಲಿದೆ.

ಒಟ್ಟಾರೆಯಾಗಿ, 'ಟಾಟಾ ಸಿಯೆರಾ ಇವಿ'ಯು ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರೊಂದನ್ನು ಖರೀದಿಸಲು ಎದುರು ನೋಡುತ್ತಿರುವವರಿಗೆ ಬೆಸ್ಟ್ ಚಾಯ್ಸ್ ಆಗಲಿದೆ. ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್, ಮಹೀಂದ್ರಾ ಬಿಇ 6 ಹಾಗೂ ವಿನ್‌ಫಾಸ್ಟ್ ವಿಎಫ್6 ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, December 18, 2025, 8:30 [IST]
English summary
Tata sierra electric suv launch soon expected price design colour range and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+