Tata: ಈ ವರ್ಷವೇ ಬಿಡುಗಡೆಯಾಗಲಿವೆ ಎರಡು ಜಬರ್ದಸ್ತ್ ಟಾಟಾ ಎಲೆಕ್ಟ್ರಿಕ್ ಕಾರುಗಳು.. ಯಾವುವು?
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಕಂಪನಿಯೂ ತನ್ನದೇಯಾದ ಛಾಪನ್ನು ಮೂಡಿಸಿದ್ದು, ಟಿಯಾಗೊ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಹಾಗೂ ಕರ್ವ್ ಇವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಇದೇ ವರ್ಷ ಕಂಪನಿಯು ಹೊಚ್ಚ ಹೊಸ ಹ್ಯಾರಿಯರ್ ಇವಿ (Harrier EV) ಹಾಗೂ ಸಿಯೆರಾ ಇವಿಯನ್ನು (Sierra EV) ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಟಾಟಾ ಹ್ಯಾರಿಯರ್ ಇವಿ (Tata Harrier EV): ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಬಹುತೇಕ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಜನವರಿಯಲ್ಲಿ ನವದೆಹಲಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಹ್ಯಾರಿಯರ್ ಇವಿಯನ್ನು ಪ್ರದರ್ಶಿಸಲಾಗಿತ್ತು. ಇದು ಹೊರಭಾಗದಲ್ಲಿ ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದ್ದು, ಆಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ.

ಈ ಟಾಟಾ ಹ್ಯಾರಿಯರ್ ಇವಿ ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರುವ ಸಾಧ್ಯತೆಯಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡಬಹುದು ಎಂದು ತಿಳಿದುಬಂದಿದೆ. ಜೊತೆಗೆ ಡುಯಲ್ - ಮೋಟಾರ್ ಸೆಟಪ್ ಹಾಗೂ ಆಲ್ - ವೀಲ್ ಡ್ರೈವ್ ಟೆಕ್ನಾಲಜಿಯನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ನೂತನ ಟಾಟಾ ಹ್ಯಾರಿಯರ್ ಇವಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಎಸಿ, 6-ವೇ ಪವರ್ ಡ್ರೈವರ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ರೂ.30 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ.

ಟಾಟಾ ಸಿಯೆರಾ ಇವಿ (Tata Sierra EV): ಇದು ಕೂಡ ಎಸ್‌ಯುವಿಯಾಗಿದೆ. ಮೊದಲಿಗೆ ಇದೇ ಅಕ್ಟೋಬರ್‌ನಲ್ಲಿ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆ ಬಳಿಕ ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಆಯ್ಕೆಯಲ್ಲಿ ಮಾರಾಟಕ್ಕೆ ಬರಬಹುದು ಎಂದು ಅಂದಾಜಿಸಲಾಗಿದೆ. ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿಯೂ ಉತ್ಪಾದನೆಗೆ ಸಿದ್ದಗೊಂಡ ಸಿಯೆರಾ ಕಾರನ್ನು ಪ್ರದರ್ಶಿಸಲಾಗಿತ್ತು. ಇದು ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿತ್ತು.
ಈ ಸಿಯೆರಾ ಇವಿಯು 3 ಸ್ಕ್ರೀನ್ ಸೆಟಪ್ ಮತ್ತು 4 ಸ್ಪೋಕ್ ಸ್ಟೀರಿಂಗ್ ವೀಲ್‌ನ್ನು ಒಳಗೊಂಡಿರಲಿದೆ ಎಂಬುದು ಈಗಾಗಲೇ ದೃಢಪಟ್ಟಿದೆ. ಇದರೊಟ್ಟಿಗೆ ಪನೋರಮಿಕ್ ಸನ್‌ರೂಫ್, ಪ್ರೀಮಿಯಂ-ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದುಕೊಂಡಿರುವ ಸಾಧ್ಯತೆಯೂ ಇದೆ.
ನೂತನ ಎಲೆಕ್ಟ್ರಿಕ್ ಕಾರು ಬೃಹತ್ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡಬಹುದು ಎನ್ನಲಾಗಿದೆ. ಈ ಕಾರು ಕೊಂಚ ಹೆಚ್ಚಿನ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ರೂ.25 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications