TATA: ಮಾರುತಿ ಸುಜುಕಿ & ಹ್ಯುಂಡೈ ಕನಸಿಗೆ ಹೊಡೆತ.. ಹುಲಿಯಂತ ಹೊಸ ಟಾಟಾ ಎಲೆಕ್ಟ್ರಿಕ್ ಎಸ್‌ಯುವಿ ರೆಡಿ!

ಟಾಟಾ ಮೋಟಾರ್ಸ್ (Tata Motors) ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ಹೊಚ್ಚ ಹೊಸ ಎಲೆಕ್ಟ್ರಿಕ್ ಎಸ್‌ಯುವಿವೊಂದನ್ನು ಮಾರಾಟಕ್ಕೆ ತರಲು ಭರ್ಜರಿಯಾಗಿ ತಯಾರಿ ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ 'ಸಿಯೆರಾ ಇವಿ' ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ಹಾಗೂ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

ಮೊದಲಿಗೆ ಎಲೆಕ್ಟ್ರಿಕ್ ಚಾಲಿತ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಪರಿಚಯಿಸಲಾಗುತ್ತದೆ. ಆ ಬಳಿಕ, ಇದೇ ಕಾರನ್ನು ಪೆಟ್ರೋಲ್/ಡೀಸೆಲ್ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಮಾರಾಟಕ್ಕೆ ತರಲಾಗುತ್ತದೆ ಎನ್ನಲಾಗದೆ. ನೂತನ ಸಿಯೆರಾ ಇವಿ ರೂ.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

Tata Sierra EV Launch Soon Best Design And Features Competition With Creta Electric And e Vitara

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿರಲಿದೆ. ಅದು 'ಟಾಟಾ ಹ್ಯಾರಿಯರ್ ಇವಿ'ಗೆ ಹೋಲಿಕೆಯಾಗುತ್ತದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯವಿರುವ ಎರಡು ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ.

ಉತ್ಪಾದನೆ ಸಿದ್ದಗೊಂಡ ಹೊಸ 'ಟಾಟಾ ಸಿಯೆರಾ ಇವಿ'ಯನ್ನು ಈ ವರ್ಷಾರಂಭದಲ್ಲಿ ಕೊನೆಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿಯೂ ಪ್ರದರ್ಶಿಸಲಾಗಿತ್ತು. ಈ ಕಾರು ಹೊರಭಾಗದಲ್ಲಿ ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ನೂತನ ಸಿಯೆರಾ ಎಲೆಕ್ಟ್ರಿಕ್ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿರಲಿದೆ. 5 ಆಸನಗಳನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 450 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಇದು ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. ಬಹುಮುಖ್ಯವಾಗಿ 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿರಬಹುದು ಹೊಂದಿರಬಹುದು ಎಂದು ಹೇಳಲಾಗಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಲಿದೆ ಎನ್ನಲಾಗಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಆಲ್ ವೀಲ್ ಡಿಸ್ಕ್ ಬ್ರೇಕ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ವಿಶೇಷತೆಗಳೇನು:

ಇದು ರೂ.17.99 ಲಕ್ಷದಿಂದ ರೂ.24.38 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ಓಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್, ಪನೋರಮಿಕ್ ಸನ್‌ರೂಫ್, ಡುಯಲ್-ಜೋನ್ ಆಟೋ ಮತ್ತು 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಹೇಗಿದೆ:

ಈ ಎಲೆಕ್ಟ್ರಿಕ್ ಎಸ್‌ಯುವಿಯು ಸೆಪ್ಟೆಂಬರ್ 3 ರಂದು ಮಾರಾಟಕ್ಕೆ ಬರಲಿದೆ. ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್ ಕ್ರಮಿಸಲಿದೆ ಎನ್ನಲಾಗಿದೆ. 5 ಆಸನಗಳು ಮತ್ತು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯೂ ಇದೆ.

Article Published On: Monday, September 1, 2025, 13:16 [IST]
English summary
Tata sierra ev launch soon best design and features competition with creta electric and e vitara
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+