Tata Sierra: ಹೊಸ ಟಾಟಾ ಸಿಯೆರಾ ಕಾರಿಗೆ ಪ್ರಿ-ಬುಕ್ಕಿಂಗ್ ಶುರು.. ಬೆಲೆ ಎಷ್ಟು, ವಿಶೇಷತೆಗಳೇನು?
ಇತ್ತೀಚೆಗೆ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಯಿತು. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ನವೀನ ವೈಶಿಷ್ಟ್ಯಗಳನ್ನು ಪಡೆದಿದೆ. ಈಗಾಗಲೇ ಬೆಲೆಯನ್ನು ಘೋಷಣೆ ಮಾಡಲಾಗಿದೆ. ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಡಿಸೆಂಬರ್ 15ರಂದು ಅಧಿಕೃತವಾಗಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ. ಅದರ ಹೊರತಾಗಿಯೂ ಈ ಕಾರಿಗಾಗಿ ಕಂಪನಿಯ ಆಯ್ದ ಡೀಲರ್‌ಶಿಪ್‌ಗಳು ರೂ.21,000 ಟೋಕನ್ ಮೊತ್ತಕ್ಕೆ ಆರ್ಡರ್‌ನ್ನು ತೆಗೆದುಕೊಳ್ಳುವುದಕ್ಕೆ ಪ್ರಾರಂಭಿಸಿವೆ.
ಸದ್ಯ, ಹೊಚ್ಚ ಹೊಸ 'ಟಾಟಾ ಸಿಯೆರಾ'ಗಾಗಿ ಪ್ರಿ-ಬುಕ್ಕಿಂಗ್‌ನ್ನು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕವು ಮಾಡಬಹುದಾಗಿದೆ. ಆದರೆ ಯಾವುದೇ ಮುಂಗಡ ಹಣವನ್ನು ಪಾವತಿಸುವ ಅಗತ್ಯವಿಲ್ಲ. ಪ್ರಿ-ಬುಕ್ಕಿಂಗ್ ವಿಂಡೋ ತೆರೆದ ಕೊಡಲೇ ಹೆಸರು, ಮೊಬೈಲ್ ಸಂಖ್ಯೆ, ಇಮೇಲ್, ಪಿನ್‌ಕೋಡ್, ಪವರ್‌ಟ್ರೇನ್, ನಗರ ಹಾಗೂ ರಾಜ್ಯದ ಕುರಿತ ವಿವರಗಳನ್ನು ನಮೂದಿಸಬೇಕು. ಆ ಬಳಿಕ ಟಾಟಾ ಮಾರಾಟ ಪ್ರತಿನಿಧಿ ಗ್ರಾಹಕರನ್ನು ಸಂಪರ್ಕಿಸಿ, ಹೆಚ್ಚಿನ ಮಾಹಿತಿಯನ್ನು ಒದಗಿಸಲಿದ್ದಾರೆ.

'ಟಾಟಾ ಸಿಯೆರಾ' ವಿಶೇಷತೆಗಳೇನು:
ಇದು ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೆಚ್ಚು ಅತ್ಯಾಧುನಿಕವಾಗಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಈ ಎಸ್‌ಯುವಿಯು ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಜೊತೆಗಿದು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,340 ಎಂಎಂ ಉದ್ದ, 1,841 ಎಂಎಂ ಅಗಲ ಮತ್ತು 1,715 ಎಂಎಂ ಎತ್ತರವಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಟಾಟಾ ಸಿಯೆರಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 622 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ & 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಟ್ರಿಪಲ್-ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್-ಸೈಡ್ ಡಿಸ್ಪ್ಲೇ), ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್, 12-ಸ್ಪೀಕರ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ರೇರ್-ಎಸಿ ವೆಂಟ್‌ಗಳು, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ.
ಹೊಸ 'ಟಾಟಾ ಸಿಯೆರಾ' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್, ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








