TATA: ಶೋರೂಂಗಳು ತುಂಬಿ ತುಳುಕಲಿವೆ.. ಅತಿ ಶೀಘ್ರದಲ್ಲೇ ಹೊಸ ಟಾಟಾ ಕಾರಿನ ಬೆಲೆ ಘೋಷಣೆ!

ಈಚೆಗೆ ನೂತನ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಇದು ನೋಡುಗರನ್ನು ಸೆಳೆಯುವಂತಿದೆ. ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ರೂ.11.49 ಲಕ್ಷ (ಎಕ್ಸ್-ಶೋರೂಂ) ಪರಿಚಯಾತ್ಮಕ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಂಬ ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಚ್ಚ ಹೊಸ 'ಟಾಟಾ ಸಿಯೆರಾ'ದ ಎಲ್ಲ ರೂಪಾಂತರಗಳ ಬೆಲೆ ಪಟ್ಟಿಯನ್ನು ಈ ತಿಂಗಳು 2ನೇ ಅಥವಾ 3ನೇ ವಾರದಲ್ಲಿ ಬಹಿರಂಗಪಡಿಸುವ ಸಾಧ್ಯತೆಯಿದೆ. ಇದೇ 16 ರಿಂದ ಬುಕ್ಕಿಂಗ್‌ನ್ನು ಶುರು ಮಾಡಲಾಗುತ್ತದೆ. 2026ರ ಜನವರಿ 15 ರಿಂದ ವಿತರಣಾ ಕಾರ್ಯಕ್ಕೂ ಚಾಲನೆ ನೀಡಲಾಗುತ್ತದೆ.

Tata Sierra Suv All Price Likely Revealed This Month Details

ಈ ಎಸ್‌ಯುವಿ ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ & ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 622 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 4,340 ಎಂಎಂ ಉದ್ದ, 1,841 ಎಂಎಂ ಅಗಲ ಮತ್ತು 1715 ಎಂಎಂ ಎತ್ತರವಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2730 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಸಿಯೆರಾ' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 106 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 145 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1.5-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 160 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 255 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಇನ್ನೊಂದು 1.5-ಲೀ. ಡೀಸೆಲ್ ಎಂಜಿನ್, 118 0 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು 17 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ಹೊಸ 'ಸಿಯೆರಾ' ತುಂಬಾ ಚೆನ್ನಾಗಿರುವ ಕ್ಯಾಬಿನ್ ವಿನ್ಯಾಸವನ್ನು ಪಡೆದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇ), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಟೋಮೆಟಿಕ್ ವೈಪರ್‌ಗಳು, ರೇರ್ ಎಸಿ ವೆಂಟ್‌ಗಳು ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Wednesday, December 3, 2025, 19:33 [IST]
English summary
Tata sierra suv all price likely revealed this month details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+