TATA: ಲಕ್ಷುರಿ ಫೀಚರ್ಸ್! ಹೊಸ ಟಾಟಾ SUV ಬಿಡುಗಡೆಗೂ ಮೊದಲೇ ಕಾಣಿಸಿಕೊಂಡೆ ಬಿಡ್ತು.. ಬೆಲೆಯೂ ಅಗ್ಗ?

ಬಹುನಿರೀಕ್ಷಿತ ಟಾಟಾ ಸಿಯೆರಾ (Tata Sierra) ಕಾರಿನ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೊಂದು ಎಸ್‌ಯುವಿಯಾಗಿದೆ. ಈ ಕಾರಿನ ಬರುವಿಕೆಗಾಗಿ ಗ್ರಾಹಕರು ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ನೂತನ 'ಸಿಯೆರಾ' ನೋಡಲು ತುಂಬಾ ಚೆನ್ನಾಗಿದೆ. ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಶನಿವಾರ ಇದೇ ಕಾರಿನ ಪ್ರಪ್ರಥಮ ಟೀಸರ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲೂ ಪೋಸ್ಟ್ ಮಾಡಲಾಗಿದೆ.

ಈ ವಿಡಿಯೋದ ಆರಂಭದಲ್ಲಿ ಕುದುರೆಗಳ ದಂಡು ಓಡುತ್ತಿವೆ. ಅದರ ಪಕ್ಕದಲ್ಲಿ ಕಡು ಹಳದಿ ಬಣ್ಣದ ಹೊಚ್ಚ ಹೊಸ 'ಟಾಟಾ ಸಿಯೆರಾ' ಬಹಳ ವೇಗದಲ್ಲಿ ಚಲಿಸುವುದನ್ನು ನೋಡಬಹುದು. ಇದು ನವೆಂಬರ್ 25 ರಂದು ಅದ್ದೂರಿಯಾಗಿಯೂ ಮಾರಾಟಕ್ಕೆ ಬರಲಿದೆ.

Tata Sierra Suv First Teaser Out Details

ನೂತನ 'ಟಾಟಾ ಸಿಯೆರಾ' ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಈಗಾಗಲೇ, 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲೂ ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿತ್ತು.

ಇದು 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 4,300 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,600 ಎಂಎಂ ಎತ್ತರ ಕೂಡ ಇರಲಿದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,650 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ.

ಹೊಸ 'ಟಾಟಾ ಸಿಯೆರಾ' ಐಸಿಇ (ಪೆಟ್ರೋಲ್/ ಡೀಸೆಲ್) ಹಾಗೂ ಎಲೆಕ್ಟ್ರಿಕ್ ಚಾಲಿತ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಮಾರಾಟಕ್ಕೆ ಬರಲಿದೆ. ಐಸಿಇ ಮಾಡೆಲ್‌ನ 1.5-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 170 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ ಎಂದು ಹೇಳಲಾಗಿದೆ.

ಮತ್ತೊಂದು 2.0-ಲೀ. ಡೀಸೆಲ್ ಎಂಜಿನ್, 170 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. ಈ ಕಾರು 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20 ಕಿ.ಮೀವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ಎಲೆಕ್ಟ್ರಿಕ್ ಮಾಡೆಲ್, ಸ್ಟ್ಯಾಂಡರ್ಡ್ 'ಟಾಟಾ ಹ್ಯಾರಿಯರ್ ಇವಿ'ಯಂತೆ 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ.

ಇದು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. 14.5 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪವರ್ ವಿಂಡೋಗಳು, 10 ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ರೇರ್ ಎಸಿ ವೆಂಟ್‌ಗಳು, ಕೀಲೆಸ್ ಎಂಟ್ರಿ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್ ವೀಲ್ ಡಿಸ್ಕ್ ಬ್ರೇಕ್ ಮತ್ತು 360 ಡಿಗ್ರಿ ಕ್ಯಾಮೆರಾ ಹೊಂದಿದೆ.

ನೂತನ 'ಟಾಟಾ ಸಿಯೆರಾ' ಎಸ್‌ಯುವಿಯು ಕನಿಷ್ಠ ರೂ.11 ಲಕ್ಷ ಹಾಗೂ ಗರಿಷ್ಠ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ನಿರೀಕ್ಷೆಯಿದೆ. ಇದಕ್ಕೆ ಮಾರುತಿ ಸುಜುಕಿ ವಿಕ್ಟೋರಿಸ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಹೋಂಡಾ ಎಲಿವೇಟ್‌, ಫೋಕ್ಸ್‌ವ್ಯಾಗನ್ ಟೈಗುನ್, ಸ್ಕೋಡಾ ಕುಶಾಕ್ ಮತ್ತು ಎಂಜಿ ಆಸ್ಟರ್‌ಗಳು ಪ್ರಬಲವಾದ ಎದುರಾಳಿಯಾಗಲಿವೆ.

More from DriveSpark

Article Published On: Sunday, November 2, 2025, 8:30 [IST]
English summary
Tata sierra suv first teaser out details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+