5-ಸೀಟರ್.. ಲಕ್ಸುರಿ ಫೀಚರ್ಸ್, ಆನೆ ಗಾತ್ರದ ಹೊಸ 'TATA Suv' ಈ ಅವಧಿಯಲ್ಲಿ ಬಿಡುಗಡೆ, ರೂ.10 ಲಕ್ಷ?

ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿರುವ ವಾಹನ ತಯಾರಕ ಕಂಪನಿಯಾಗಿದೆ. ಇತ್ತೀಚೆಗೆ ದಿನಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಎಸ್‌ಯುವಿಗಳು, ವಿದೇಶಿ ಕಂಪನಿ ಕಾರುಗಳಿಗೆ ಸವಾಲೆಸೆಯುವ ರೀತಿಯಲ್ಲಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಟಾಟಾ ಕಂಪನಿಯು ಒಂದಿಲ್ಲೊಂದು ಹೊಚ್ಚ ಹೊಸ ಕಾರನ್ನು ಬಿಡುಗಡೆಗೊಳಿಸುತ್ತಲೇ ಇರುತ್ತದೆ. ಇದೀಗ ಮುಂಬರುವ ಕೆಲವೇ ತಿಂಗಳಲ್ಲಿ ನೂತನ ಎಸ್‌ಯುವಿವೊಂದನ್ನು ಅದ್ದೂರಿಯಾಗಿಯೂ ಮಾರಾಟಕ್ಕೂ ತರಲಿದೆ.

ಟಾಟಾ ಕಂಪನಿಯು 2026ರ ಆರ್ಥಿಕ ವರ್ಷದಲ್ಲಿ ಹೊಚ್ಚ ಹೊಸ 'ಸಿಯೆರಾ' ಕಾರನ್ನು ಪರಿಚಯಿಸಲಾಗುವುದು ಎಂದು ಅಧಿಕೃತವಾಗಿ ದೃಢಪಡಿಸಿದೆ ಎಂದು ವರದಿಯಾಗಿದೆ. ಮೊದಲಿಗೆ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಲಿದೆ. ಆ ಬಳಿಕ, ಇಂಧನ (ಪೆಟ್ರೋಲ್/ಡಿಸೇಲ್) ಚಾಲಿತ ಆಯ್ಕೆಯಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ.

Tata Sierra Suv Launch Details Revealed

ಇದೇ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ತಯಾರಿಕೆ ಹಂತದಲ್ಲಿದ್ದ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಅನಾವರಣಗೊಳಿಸಲಾಗಿತ್ತು. ಇದು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದ್ದು, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು ಹಾಗೂ ಬಾಡಿ ಕಲರ್ ಬಿ-ಪಿಲ್ಲರ್‌ಗಳನ್ನು ಪಡೆದಿದೆ.

ಎಲೆಕ್ಟ್ರಿಕ್ ಚಾಲಿತ ಟಾಟಾ ಸಿಯೆರಾ ಮಾಡೆಲ್, ಬೃಹತ್ ಗಾತ್ರದ ಹೆಚ್ಚಿನ ದೂರ ಕ್ರಮಿಸಲು ಸಾಧ್ಯವಾಗುವಂತೆ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಬಹುದು. ಭರ್ತಿ ಚಾರ್ಜ್‌ ಮಾಡಿದರೆ, 500 ಕಿಲೋಮೀಟರ್‌‌ವರೆಗೂ ಅಧಿಕ ರೇಂಜ್ (ಮೈಲೇಜ್) ಕೊಡಬಹುದು ಅಂದಾಜಿಸಲಾಗಿದೆ.

Tata Sierra Suv Launch Details Revealed

ಇಂಧನ ಚಾಲಿತ ಸಿಯೆರಾ ಮಾಡೆಲ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. 1.5-ಲೀ. ಟರ್ಬೊ ಪೆಟ್ರೋಲ್ & 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿರಬಹುದು ಎನ್ನಲಾಗಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ. 18 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.

ನೂತನ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಬಹುಮುಖ್ಯವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಫೋರ್ಟ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.

Tata Sierra Suv Launch Details Revealed

ಹೊಸ ಟಾಟಾ ಸಿಯೆರಾ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿರಲಿದೆ. ಪ್ರಯಾಣಿಕರ ರಕ್ಷಣೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಈ ಸಿಯೆರಾ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಇದರ ಇಂಧನ ಚಾಲಿತ ಮಾಡೆಲ್ ಅತಿ ಕಡಿಮೆ ದರದಲ್ಲಿ ಸಿಗಲಿದ್ದು, ರೂ.10 ಆರಂಭಿಕ ಬೆಲೆಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಹಾಗೆಯೇ ಎಲೆಕ್ಟ್ರಿಕ್ ಮಾಡೆಲ್, ದುಬಾರಿ ದರವನ್ನು ಹೊಂದಿರಲಿದ್ದು, ರೂ.25 ಲಕ್ಷ ಬೆಲೆಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

Take a Poll

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 20, 2025, 22:48 [IST]
English summary
Tata sierra suv launch details revealed
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+