Tata: ಇತಿಹಾಸ ಮರುಸೃಷ್ಟಿಸಲು ಟಾಟಾ ರೆಡಿ.. ಹೊಸ ರೂಪದಲ್ಲಿ ಬರಲಿದೆ 'ಹಳೆ ಹುಲಿ'.. ಬೆಲೆ ಎಷ್ಟಿರಲಿದೆ, ವಿಶೇಷತೆಗಳೇನು?
ಟಾಟಾ ಸಿಯೆರಾ (Tata Sierra) ಜನಪ್ರಿಯ ಎಸ್‌ಯುವಿಯಾಗಿದೆ. ದೇಶೀಯ ರಸ್ತೆಗಳಲ್ಲಿ ಈ ಕಾರು 1991 ರಿಂದ 2003 ವರೆಗೆ ಅಬ್ಬರಿಸಿತ್ತು. ಸದ್ಯ, ಕಂಪನಿಯು ಇದೇ 'ಸಿಯೆರಾ' ಎಸ್‌ಯುವಿಯನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲು ಭರದಿಂದ ಸಿದ್ಧತೆಯನ್ನು ನಡೆಸುತ್ತಿದೆ. ಅದಕ್ಕೆ ಪುಷ್ಟಿ ನೀಡುವಂತೆ ಕಳೆದ ತಿಂಗಳು (ಜನವರಿ - 2025) ನವದೆಹಲಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ತಯಾರಿಕೆ ಹಂತದಲ್ಲಿರುವ ಸಿಯೆರಾ ಕಾರನ್ನು ಪ್ರದರ್ಶಿಸಲಾಗಿತ್ತು. ಬನ್ನಿ.. ಈ ಎಸ್‌ಯುವಿಯ ನಿರೀಕ್ಷಿತ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ವಿನ್ಯಾಸ (Design): ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಬಹಿರಂಗಗೊಳಿಸಲಾದ ಟಾಟಾ ಸಿಯೆರಾ ಎಸ್‌ಯುವಿ, ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, ಡುಯಲ್ ಟೋನ್ ಅಲಾಯ್ ವೀಲ್‌ಗಳು, ಬಾಡಿ ಕಲರ್ ಬಿ-ಪಿಲ್ಲರ್‌ಗಳು ಹಾಗೂ ಕನೆಕ್ಟ್ಡ್ ಎಲ್ಇಡಿ ಲೈಟ್ ಸೆಟಪ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance): ನೂತನ ಟಾಟಾ ಸಿಯೆರಾ ಕಾರು ಇಂಧನ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ಆಯ್ಕೆಯಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಇಂಧನ ಚಾಲಿತ ಮಾದರಿ (ಮಾಡೆಲ್), 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 18 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.
ಎಲೆಕ್ಟ್ರಿಕ್ ಚಾಲಿತ ಮಾದರಿ, ಬೃಹತ್ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ. ಇದರೊಟ್ಟಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.
ವೈಶಿಷ್ಟ್ಯಗಳು (Features): ನೂತನ ಟಾಟಾ ಸಿಯೆರಾ ಎಸ್‌ಯುವಿ, 3 ಸ್ಕ್ರೀನ್ ಸೆಟಪ್ & 4 ಸ್ಪೋಕ್ ಸ್ಟೀರಿಂಗ್ ವೀಲ್‌ನ್ನು ಹೊಂದಿರಲಿದೆ ಎಂಬುದು ಬಹುತೇಕ ದೃಢಪಟ್ಟಿದೆ. ಪನೋರಮಿಕ್ ಸನ್‌ರೂಫ್, ಪ್ರೀಮಿಯಂ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ವೈರ್‌ಲೆಸ್ ಚಾರ್ಜರ್ ಸೇರಿದಂತೆ ಹಲವಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety features): ಈ ಸಿಯೆರಾ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.
ಬೆಲೆ & ಪ್ರತಿಸ್ಪರ್ಧಿ ಕಾರುಗಳು (Price & Competitor Cars): ಹೊಚ್ಚ ಹೊಸ ಟಾಟಾ ಸಿಯೆರಾ ಎಸ್‌ಯುವಿಯ ಇಂಧನ ಚಾಲಿತ ಮಾದರಿ, ರೂ.10.50 ಲಕ್ಷ ಹಾಗೂ ಎಲೆಕ್ಟ್ರಿಕ್ ಚಾಲಿತ ಮಾದರಿ, ರೂ.25 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಬಹುತೇಕ ಇದೇ ವರ್ಷ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಸಿಯೆರಾ ಮಾದರಿಗಳಿಗೆ ಮಹೀಂದ್ರಾ ಥಾರ್ ರಾಕ್ಸ್, ಟಾಟಾ ಹ್ಯಾರಿಯರ್ ಹಾಗೂ ಟಾಟಾ ಕರ್ವ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications