TATA: 5-ಸೀಟರ್, ಬಹುನಿರೀಕ್ಷಿತ 'ಟಾಟಾ ಸಿಯೆರಾ' ಎಸ್‌ಯುವಿ ಕುರಿತ ವಿಶೇಷ ವಿವರ.. ಬೆಲೆ 10 ಲಕ್ಷವೇ?

ಟಾಟಾ ಸಿಯೆರಾ (Tata Sierra) ಎಂಬ ಹೆಸರು ದಶಕಗಳ ಹಿಂದೆ, ಹೆಚ್ಚು ಜನಜನಿತವಾಗಿತ್ತು. ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದ್ದು, 1991 ರಿಂದ 2003ರವರೆಗೆ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿತ್ತು. ಆದರೆ, ವಿವಿಧ ಮಾರುಕಟ್ಟೆ ಕಾರಣಗಳಿಗೆ ಸಿಯೆರಾ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ ಇದೇ ಕಾರನ್ನು ಹೊಸ ಅವತಾರದಲ್ಲಿ ಬಿಡುಗಡೆಗೊಳಿಸಲು ಕಂಪನಿ ಕೂಡ ಶರವೇಗದಲ್ಲಿ ತಯಾರಿಯನ್ನು ನಡೆಸುತ್ತಿದೆ. ಅದಕ್ಕೆ ಪುಷ್ಟಿ ನೀಡುವಂತೆ ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಉತ್ಪಾದನೆಗೆ ಸಿದ್ಧಗೊಳ್ಳುತ್ತಿರುವ ನೂತನ 'ಸಿಯೆರಾ' ಎಸ್‌ಯುವಿಯನ್ನು ಪ್ರದರ್ಶನ ಮಾಡಲಾಗಿತ್ತು.

ಹೊಸ ಟಾಟಾ ಸಿಯೆರಾ ಎಸ್‌ಯುವಿ ಇಂಧನ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ಚಾಲಿತ ರೂಪದಲ್ಲೂ ಮಾರಾಟಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿರಲಿದೆ. ಜೊತೆಗೆ ಹಲವು ನವೀನ ಶೈಲಿಯ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

Tata Sierra Suv Launch Soon You Should Must Know Expected Price And Features Details

ನೂತನ ಟಾಟಾ ಸಿಯೆರಾ ಎಸ್‌ಯುವಿಯ ಇಂಧನ ಚಾಲಿತ ಮಾಡೆಲ್, ಸಾಕಷ್ಟು ಶಕ್ತಿಯತವಾದ ಪವರ್‌ಟ್ರೇನ್‌ನ್ನು ಪಡೆದುಕೊಂಡಿರಲಿದೆ. ಅದಕ್ಕೆ ತಕ್ಕಂತೆ 1.5 - ಲೀಟರ್ ಟರ್ಬೊ ಪೆಟ್ರೋಲ್ & 2 - ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿರಲಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 18 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.

ಎಲೆಕ್ಟ್ರಿಕ್ ಟಾಟಾ ಸಿಯೆರಾ ಕಾರು ದೊಡ್ಡದಾಗಿರುವ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ. ರೇಂಜ್ ವಿಷಯದಲ್ಲಿ ಈ ಕಾರು, ಮಾರುತಿ ಸುಜುಕಿ ಇ-ವಿಟಾರಾ ಹಾಗೂ ಹ್ಯುಂಡೈ ಎಲೆಕ್ಟ್ರಿಕ್ ಎಸ್‌ಯುವಿಗೆ ಗಟ್ಟಿಯಾದ ಪೈಪೋಟಿಯನ್ನು ನೀಡಲಿದೆ.

Tata Sierra Suv Launch Soon You Should Must Know Expected Price And Features Details

ಹೊಸ ಸಿಯೆರಾ ಎಸ್‌ಯುವಿ 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಸಂಚಾರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 450 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಒಳಗೊಂಡಿರಲಿದೆ.

ಈ ಕಾರು ಬೃಹತ್ ಗಾತ್ರದ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪ್ರೀಮಿಯಂ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. ಇದರೊಂದಿಗೆ ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.

Tata Sierra Suv Launch Soon You Should Must Know Expected Price And Features Details

ಇದೇ ವರ್ಷದ ದ್ವಿತೀಯಾರ್ಧದಲ್ಲಿ ಎಲೆಕ್ಟ್ರಿಕ್ ಚಾಲಿತ ಟಾಟಾ ಸಿಯೆರಾ ಎಸ್‌ಯುವಿ ಬಿಡುಗಡೆಯಾಗಲಿದೆ. ಆ ಬಳಿಕ, ಇಂಧನ ಚಾಲಿತ ಮಾಡೆಲ್‌ನ್ನು ಪರಿಚಯಿಸುವ ನಿರೀಕ್ಷೆಯಿದೆ. ಎಲೆಕ್ಟ್ರಿಕ್ ಸಿಯೆರಾ ಕಾರು ರೂ.25 ಲಕ್ಷ ಬೆಲೆಯನ್ನು ಹೊಂದಿದ್ದರೆ, ಇಂಧನ ಚಾಲಿತ ಮಾಡೆಲ್ ರೂ.10 ಲಕ್ಷ ಆರಂಭಿಕ ದರವನ್ನು (ಎಕ್ಸ್-ಶೋರೂಂ) ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟವಾದ ವಿವರಗಳು ಲಭ್ಯವಾಗಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 22, 2025, 16:13 [IST]
English summary
Tata sierra suv launch soon you should must know expected price and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+