TATA: ಸದ್ದಿಲ್ಲದೇ ಹೊಸ ಟಾಟಾದ ಕಾರಿನ ಬೆಲೆ ಘೋಷಣೆ.. ಯಾವ ವೇರಿಯೆಂಟ್‌ಗೆ ಎಷ್ಟು?
ಇತ್ತೀಚೆಗೆ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತು. ಇದು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ರೂ.11.49 ಲಕ್ಷ (ಎಕ್ಸ್-ಶೋರೂಂ) ಪರಿಚಯಾತ್ಮಕ ಬೆಲೆಯಲ್ಲಿ ಬಿಡುಗಡೆಗೊಂಡಿದೆ. ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಶನಿವಾರ ಈ ಕಾರಿನ ಎಲ್ಲ ರೂಪಾಂತರಗಳ (ವೇರಿಯೆಂಟ್) ದರವನ್ನು ಘೋಷಣೆ ಮಾಡಲಾಗಿದೆ. ಆದರೂ ಅಕಂಪ್ಲಿಶ್ಡ್ & ಅಕಂಪ್ಲಿಶ್ಡ್ ಪ್ಲಸ್ ರೂಪಾಂತರಗಳ ಬೆಲೆಯನ್ನು ಇನ್ನೂ ಬಹಿರಂಗಪಡಿಸಿಲ್ಲ.
ಪೆಟ್ರೋಲ್ ರೂಪಾಂತರಗಳ 'ಎಕ್ಸ್-ಶೋರೂಂ' ದರವೆಷ್ಟು?
ನೂತನ 'ಟಾಟಾ ಸಿಯೆರಾ'ದ 'ಪೆಟ್ರೋಲ್' ರೂಪಾಂತರಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿವೆ. ಸ್ಮಾರ್ಟ್ ಪ್ಲಸ್ ರೂ.11.49 ಲಕ್ಷ, ಪ್ಯೂರ್ ರೂ.12.99 ಲಕ್ಷ, ಪ್ಯೂರ್ ಪ್ಲಸ್ ರೂ.14.49 ಲಕ್ಷ, ಅಡ್ವೆಂಚರ್ ರೂ.5.29 ಲಕ್ಷ ಮತ್ತು ಅಡ್ವೆಂಚರ್ ಪ್ಲಸ್ ರೂ.15.99 ಲಕ್ಷ ದರವನ್ನು ಪಡೆದಿದೆ.

ಡೀಸೆಲ್ ರೂಪಾಂತರಗಳ 'ಎಕ್ಸ್-ಶೋರೂಂ' ಬೆಲೆ ಎಷ್ಟು?
ಹೊಸ ಸಿಯೆರಾ'ದ ಡೀಸೆಲ್ ರೂಪಾಂತರಗಳು ಸ್ಪರ್ಧಾತ್ಮಕ ದರದಲ್ಲೂ ದೊರೆಯುತ್ತವೆ. ಸ್ಮಾರ್ಟ್ ಪ್ಲಸ್ ರೂ.12.99 ಲಕ್ಷ, ಪ್ಯೂರ್ ರೂ.14.49 ಲಕ್ಷ, ಪ್ಯೂರ್ ಪ್ಲಸ್ ರೂ.15.99 ಲಕ್ಷ, ಅಡ್ವೆಂಚರ್ ರೂ.16.49 ಹಾಗೂ ಅಡ್ವೆಂಚರ್ ಪ್ಲಸ್ ರೂ.17.19 ಲಕ್ಷ ಬೆಲೆಯನ್ನು ಒಳಗೊಂಡಿದೆ.
'ಟಾಟಾ ಸಿಯೆರಾ' ವಿಶೇಷತೆಗಳೇನು:
ಇದು ನೋಡುಗುರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ 6 ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,340 ಮಿ.ಮೀ ಉದ್ದ, 1,841 ಮಿ.ಮೀ ಅಗಲ ಹಾಗೂ 1715 ಮಿ.ಮೀ ಎತ್ತರವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2730 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 622 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ 'ಸಿಯೆರಾ' ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್ಪ್ಲೇ), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ವೈಪರ್‌ಗಳು ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








