ಹೊಸ ಟಾಟಾ ಸಿಯೆರಾ vs ಹ್ಯುಂಡೈ ಕ್ರೆಟಾ: ಬೆಲೆ & ವಿಶೇಷತೆಗಳ ನಡುವೆ ಹೋಲಿಕೆ.. ಯಾವುದು ಬೆಸ್ಟ್, ನೀವೇ ಹೇಳಿ!

ನಿನ್ನೆಯಷ್ಟೇ ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಇದಕ್ಕೆ ಹ್ಯುಂಡೈ ಕ್ರೆಟಾ (Hyundai Creta) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇಲ್ಲಿ ಈ ಕಾರುಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಸಮಗ್ರವಾದ ಹೋಲಿಕೆ ಮಾಡಿದ್ದೇವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಬೆಲೆ (Price):

ನೂತನ 'ಟಾಟಾ ಸಿಯೆರಾ' ಎಸ್‌ಯುವಿಯನ್ನು ರೂ.11.49 ಲಕ್ಷ ಪರಿಚಯಾತ್ಮಕ ದರವನ್ನು ಪಡೆದಿದೆ. ಅದೇ ರೀತಿಯಲ್ಲಿ 'ಹ್ಯುಂಡೈ ಕ್ರೆಟಾ' ಕನಿಷ್ಠ ರೂ.11.11 ಲಕ್ಷ ಮತ್ತು ಗರಿಷ್ಠ ರೂ.20.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರ ವಿಚಾರದಲ್ಲಿ 'ಕ್ರೆಟಾ' ಎಸ್‌ಯುವಿ ಸ್ವಲ್ಪ ಮಟ್ಟಿಗೆ ಅಗ್ಗವಾಗಿದೆ.

Tata Sierra vs Hyundai Creta Suv Price Specs And Features Comparison Details

ವಿನ್ಯಾಸ (Design):

ಇವೆರೆಡು ಕಾರುಗಳು ಒಂದಕ್ಕಿಂತ ಒಂದು ಅದ್ಬುತವಾದ ವಿನ್ಯಾಸವನ್ನು ಒಳಗೊಂಡಿವೆ. 'ಸಿಯೆರಾ' ಕಾರು ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು 19 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. 'ಕ್ರೆಟಾ' ಎಸ್‌ಯುವಿಯು ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್ ಹಾಗೂ 17 ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಸುತ್ತಳತೆ (Dimensions):

ಈ ಕಾರುಗಳು ಸಾಕಷ್ಟು ವಿಶಾಲ ಗಾತ್ರದಲ್ಲಿವೆ. 'ಟಾಟಾ ಸಿಯೆರಾ' ಎಸ್‌ಯುವಿಯು 4,340 ಮಿ.ಮೀ ಉದ್ದ, 1,841 ಮಿ.ಮೀ ಅಗಲ ಮತ್ತು 1,715 ಮಿ.ಮೀ ಎತ್ತರವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2730 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಹಾಗೆಯೇ 'ಹ್ಯುಂಡೈ ಕ್ರೆಟಾ' 4,330 ಮಿ.ಮೀ ಉದ್ದ,1,790 ಮಿ.ಮೀ ಅಗಲ ಹಾಗೂ 1,635 ಮಿ.ಮೀ ಎತ್ತರವಿದೆ. ಜೊತೆಗಿದು 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,610 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇವೆರೆಡು ಎಸ್‌ಯುವಿಗಳು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 'ಟಾಟಾ ಸಿಯೆರಾ' ವಿಶಾಲವಾಗಿರುವ 622 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 'ಹ್ಯುಂಡೈ ಕ್ರೆಟಾ' ಕೊಂಚ ಸಣ್ಣದಾದ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance):

ಟಾಟಾ ಸಿಯೆರಾ ಹಾಗೂ ಹ್ಯುಂಡೈ ಕ್ರೆಟಾ ಎಸ್‌ಯುವಿಗಳೆರಡು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಸಿಯೆರಾ' ಕಾರು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ & 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20 ಕಿ.ಮೀವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.

ಬಹುಮುಖ್ಯವಾಗಿ 'ಕ್ರೆಟಾ' ಕಾರು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17 ರಿಂದ 21.8 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು (Features):

ಈ ಕಾರುಗಳು ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. 'ಟಾಟಾ ಸಿಯೆರಾ' ಎಸ್‌ಯುವಿಯು ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇ), ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

'ಹ್ಯುಂಡೈ ಕ್ರೆಟಾ' ಕಾರು 10.25 ಇಂಚಿನ ಡುಯಲ್ ಡಿಸ್‌ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) & ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, November 26, 2025, 10:59 [IST]
English summary
Tata sierra vs hyundai creta suv price specs and features comparison details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+