Tata Sumo & Nano: ಲಕ್ಸುರಿ ಫೀಚರ್ಸ್.. ಕಡಿಮೆ ಬೆಲೆಗೆ ನೂತನ ಟಾಟಾ ಸುಮೋ & ನ್ಯಾನೋ ಕಾರುಗಳು ಮಾರಾಟಕ್ಕೆ?
ಟಾಟಾ ಮೋಟಾರ್ಸ್ (Tata Motors), ಜನಪ್ರಿಯ ಸ್ವದೇಶಿ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ರಸ್ತೆಯಲ್ಲಿ ವರ್ಷಗಳ ಹಿಂದೆ, ಕಂಪನಿಯ ಸುಮೋ ಹಾಗೂ ನ್ಯಾನೋ ಕಾರುಗಳು ಪಾರುಪತ್ಯ ಮೆರೆದಿದ್ದವು. ಅದರಲ್ಲೂ ಈ ಕಾರುಗಳು ಮಧ್ಯಮ ವರ್ಗದ ಜನರ ಹಾಟ್ ಫೇವರಿಟ್ ಆಗಿ ಹೊರಹೊಮ್ಮಿದ್ದವು. ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದ್ದವು. ಆದರೆ, ನಾನಾ ಕಾರಣಗಳಿಗೆ ಸುಮೋ ಮತ್ತು ನ್ಯಾನೋ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ, ಇವೆರೆಡು ಕಾರುಗಳು ಮತ್ತೆ ಹೊಸ ರೂಪದಲ್ಲಿ ಬಿಡುಗಡೆಯಾಗಲಿವೆ ಎಂದು ಆಗಾಗ್ಗೆ ಗಾಳಿಸುದ್ದಿಗಳು ಹರಿದಾಡುತ್ತಿರುತ್ತವೆ. ಒಂದೊಮ್ಮೆ ಈ ಸುಮೋ & ನ್ಯಾನೋ ಕಾರುಗಳನ್ನು ಪರಿಚಯಿಸಿದರೆ ನಿರೀಕ್ಷಿತ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳು ಏನಿರಲಿದೆ ಎಂಬುದನ್ನು ತಿಳಿಯೋಣ.
ಮೊದಲಿಗೆ ಟಾಟಾ ಸುಮೋ (Tata Sumo) ಎಂಪಿವಿ ಬಗ್ಗೆ ಮಾತನಾಡೋಣ. ಈ ಕಾರು ರೂ.8 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ. 7 ಅಥವಾ 9 ಆಸನಗಳನ್ನು ಹೊಂದಿರುವ ಸಾಧ್ಯತೆಯೂ ಇದೆ. ಆದರೆ, ನೂತನ ಸುಮೋ ಎಂಪಿವಿ ಬಿಡುಗಡೆಗೊಳಿಸುವ ಕುರಿತಂತೆ ಟಾಟಾ ಮೋಟಾರ್ಸ್ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

ನೂತನ ಟಾಟಾ ಸುಮೋ ಕಾರು, ಎರಡು ಪವರ್‌ಟ್ರೇನ್‌ನೊಂದಿಗೆ ಸಿಗಬಹುದು ಎಂದು ಹೇಳಲಾಗಿದೆ. ಈ ಕಾರು 1.2-ಲೀ. ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದರೊಟ್ಟಿಗೆ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಸರಾಸರಿ 18 ರಿಂದ 20 ಕೆಎಂಪಿಎಲ್‌ವರೆಗೂ ಮೈಲೇಜ್ ನೋಡಬಹುದು ಎಂದು ಅಂದಾಜಿಸಲಾಗಿದೆ.
ಈ ಎಂಪಿವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಸನ್‌ರೂಫ್ ಸೇರಿದಂತೆ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ಟಾಟಾ ನ್ಯಾನೋ ಕೂಡ ಹೊಸ ರೂಪದಲ್ಲಿ ಮಾರಾಟಕ್ಕೆ ಬರಲಿದೆ ಎಂಬ ಊಹಾಪೋಹಗಳನ್ನು ಒಳಗೊಂಡ ಸುದ್ದಿಗಳು ಕೆಲವೊಮ್ಮೆ ಮಾಧ್ಯಮಗಳಲ್ಲಿ ಬರುತ್ತಿರುತ್ತವೆ. ಆದರೆ ಈ ಬಗ್ಗೆಯೂ ಯಾವುದೇ ಖಚಿತ ಮಾಹಿತಿ ದೊರೆತ್ತಿಲ್ಲ. ಈ ಕಾರು 3 ರಿಂದ 4 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ. ಜೊತೆಗೆ 4 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರುವ ಸಾಧ್ಯತೆಯಿದೆ.
ನೂತನ ಟಾಟಾ ನ್ಯಾನೋ ಕಾರು ಹೆಚ್ಚಿನ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದುಕೊಂಡಿರಲಿದೆ ಎನ್ನಲಾಗಿದೆ. ಇದು ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ ನ್ಯೂಟನ್ ಮೀಟರ್ ಪೀಕ್ ಟಾರ್ಕ್ ಹೊರಹಾಕುವ ನಿರೀಕ್ಷೆಯಿದೆ. ಬರೋಬ್ಬರಿ 30 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.
ಈ ನ್ಯಾನೋ ಕಾರು ಹೊರಭಾಗದಲ್ಲಿ ಕೂಡ ಹೆಚ್ಚು ಅತ್ಯಾಧುನಿಕ ವಿನ್ಯಾಸ ಹೊಂದಿರಬಹುದು ಎಂದು ಹೇಳಲಾಗಿದೆ. ಬಹುಮುಖ್ಯವಾಗಿ ಹೊಸ ಬಣ್ಣದೊಂದಿಗೂ ಸಿಗಬಹುದು ಎನ್ನಲಾಗಿದೆ. ಇದರೊಟ್ಟಿಗೆ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್ ಹಾಗೂ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯೂ ಹೆಚ್ಚಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications