5-ಸೀಟರ್.. 5 ಲಕ್ಷದ TATA ಕಾರಿಗೆ ಮುಗಿಬಿದ್ದ ಗ್ರಾಹಕರು.. ಭಾರೀ ಸಂಖ್ಯೆಯಲ್ಲಿ ಮಾರಾಟ!
ಟಾಟಾ ಟಿಯಾಗೊ (Tata Tiago) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಇದು ಸಾಕಷ್ಟು ಆಕರ್ಷಕವಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಏಪ್ರಿಲ್ ತಿಂಗಳ ಟಾಟಾದ ಎಲ್ಲ ಕಾರುಗಳ ಮಾರಾಟದ ಅಂಕಿಅಂಶಗಳ ವರದಿ ಪ್ರಕಟಗೊಂಡಿದೆ. ಅದರಲ್ಲೂ ಇದೇ 'ಟಿಯಾಗೊ' ಹ್ಯಾಚ್‌ಬ್ಯಾಕ್ ಕಂಪನಿಯು ನಿರೀಕ್ಷೆ ಮಾಡಿದ್ದಕ್ಕಿಂತ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಳೆದ ತಿಂಗಳು (ಏಪ್ರಿಲ್-2025) ಟಾಟಾ ಮೋಟಾರ್ಸ್ ಸರಿ ಸುಮಾರು 8,277 ಯುನಿಟ್ 'ಟಿಯಾಗೊ' ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 6,796 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ 22% ಅಧಿಕಗೊಂಡಿದೆ.

ಈ ವರ್ಷದ ಮೊದಲ ತಿಂಗಳು 'ಟಾಟಾ ಟಿಯಾಗೊ' ಹ್ಯಾಚ್‌ಬ್ಯಾಕ್‌ಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಮಾರ್ಚ್‌ನಲ್ಲಿ 7,946 ಯುನಿಟ್, ಫೆಬ್ರವರಿಯಲ್ಲಿ 6,954 ಯುನಿಟ್ ಮತ್ತು ಜನವರಿಯಲ್ಲಿ 6,807 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ನೂತನ ಟಿಯಾಗೊ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತಿದ್ದು, ಸುರಕ್ಷತೆಗೂ ಹೆಸರುವಾಸಿಯಾಗಿರುವುದರಿಂದ ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಣೆಯನ್ನು ಮಾಡಲಾಗುತ್ತಿದೆ.
ಟಿಯಾಗೊ ಹ್ಯಾಚ್‌ಬ್ಯಾಕ್ ಎರಡು ವಿಧದಲ್ಲಿ ಖರೀದಿ ಲಭ್ಯ..
ಸ್ಟ್ಯಾಂಡರ್ಡ್ ಟಾಟಾ ಟಿಯಾಗೊ ಕಾರಿನ ವಿಶೇಷತೆಗಳೇನು: ಇದು ಅತಿ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 242 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು ಬೆಲೆಗೆ ತಕ್ಕಂತೆ ಪವರ್‌ಟ್ರೇನ್ ಆಯ್ಕೆಯಲ್ಲಿ ಪಡೆದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಜೊತೆಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19 ರಿಂದ 28 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಲ್ಲದು.
ನೂತನ ಟಿಯಾಗೊ ಹ್ಯಾಚ್‌ಬ್ಯಾಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕೀಲೆಸ್ ಎಂಟ್ರಿ, ಪುಶ್ ಸ್ಟಾರ್ಟ್-ಸ್ಟಾಪ್ ಬಟನ್, ರೇರ್ ಸೆನ್ಸರ್ಸ್ ವೈಪರ್‌ಗಳು ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

ಟಾಟಾ ಟಿಯಾಗೊ ಇವಿ ಹೇಗಿದೆ: ಇದು ರೂ.7.99 ಲಕ್ಷದಿಂದ ರೂ.11.14 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 19.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications