TATA: ಶೋರೂಂ ಮುಂದೆ ಕ್ಯೂ ನಿಂತ ಗ್ರಾಹಕರು.. 28 Km ಮೈಲೇಜ್, 4.57 ಲಕ್ಷ.. ಈ ಟಾಟಾ ಕಾರಿನ ಸೇಲ್ಸ್ ದಿಢೀರನೇ ಹೆಚ್ಚಳ!

ಟಾಟಾ ಟಿಯಾಗೊ (Tata Tiago) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳು 'ಟಿಯಾಗೊ' ಮಾರಾಟ ಸಂಖ್ಯೆ ದ್ವಿಗುಣಗೊಂಡಿದೆ. ಒಟ್ಟು 8,322 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 4,225 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 97% ಪ್ರಗತಿಯಾಗಿದೆ.

ಸ್ಟ್ಯಾಂಡರ್ಡ್ 'ಟಾಟಾ ಟಿಯಾಗೊ' ವಿಶೇಷತೆಗಳೇನು:

ಇದು ಕನಿಷ್ಠ ರೂ.4.57 ಲಕ್ಷ ಹಾಗೂ ಗರಿಷ್ಠ ರೂ.7.82 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಸ್ಮಾರ್ಟ್, ಪ್ಯೂರ್, ಅಡ್ವೆಂಚರ್, ಅಕಂಪ್ಲಿಶ್ಡ್ ಮತ್ತು ಕ್ರಿಯೆಟಿವ್ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಅರಿಜೋನಾ ಬ್ಲೂ, ಟೊರ್ನಾಡೊ ಬ್ಲೂ, ಓಷನ್ ಬ್ಲೂ, ಡೇಟೋನಾ ಗ್ರೇ ಹಾಗೂ ಸೂಪರ್ನೋವಾ ಕಾಪರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Tata Tiago Car September 2025 Sales Details

ಈ ಕಾರು ಹೆಚ್ಚು ವಿಶಾಲವಾಗಿದೆ. 3,767 ಮಿ.ಮೀ ಉದ್ದ, 1,677 ಮಿ.ಮೀ ಅಗಲ ಮತ್ತು 1,535 ಮಿ.ಮೀ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,400 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 935 ಕೆಜಿ ತೂಕವಿದೆ.

ನೂತನ 'ಟಿಯಾಗೊ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Tata Tiago Car September 2025 Sales Details

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 242 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 35 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ, 4 ಸ್ಪೀಕರ್‌ಗಳು, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ಗಳು, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್‌ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ 'ಟಿಯಾಗೊ' ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ ಡುಯಲ್ ಏರ್‌ಬ್ಯಾಗ್‌ಗಳು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಹಿಲ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Tata Tiago Car September 2025 Sales Details

ಟಾಟಾ ಟಿಯಾಗೊ ಇವಿ (Tata Tiago EV) ಕೂಡ ಖರೀದಿ ಲಭ್ಯ:

ಇದೊಂದು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.7.99 ಲಕ್ಷದಿಂದ ರೂ.11.14 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಪ್ರಿಸ್ಟೈನ್ ವೈಟ್, ಸೂಪರ್ನೋವಾ ಕಾಪರ್, ಟೀಲ್ ಬ್ಲೂ, ಅರಿಜೋನಾ ಬ್ಲೂ ಹಾಗೂ ಡೇಟೋನಾ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 5 ಆಸನಗಳನ್ನು ಒಳಗೊಂಡಿದೆ.

ಹೊಸ 'ಟಿಯಾಗೊ ಇವಿ' 19.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 24 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 250 ರಿಂದ 315 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Thursday, October 16, 2025, 11:24 [IST]
English summary
Tata tiago car september 2025 sales details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+