7 ಲಕ್ಷ ಬೆಲೆ.. 28.06 Km ಮೈಲೇಜ್.. ನೂತನ ಟಾಟಾ ಟಿಯಾಗೊ ಎನ್‌ಆರ್‌ಜಿ ಕಾರಿನ ಕುರಿತ ಪ್ರಮುಖಾಂಶಗಳಿವು!
ಟಾಟಾ ಮೋಟಾರ್ಸ್ (Tata Motors) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ಈಚೆಗೆ ನವೀಕರಣಗೊಳಿಸಿರುವ 2025ರ ಟಿಯಾಗೊ ಎನ್‌ಆರ್‌ಜಿ ಹ್ಯಾಚ್‌ಬ್ಯಾಕ್‌ನ್ನು ಬಿಡುಗಡೆಗೊಳಿಸಿದೆ. ಸಾಮಾನ್ಯ ಟಿಯಾಗೊ ಕಾರಿಗೆ ಹೋಲಿಕೆ ಮಾಡಿದರೆ, ಒಂದಷ್ಟು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆದುಕೊಂಡಿದೆ. ವಿಶೇಷವಾಗಿ ಈ ಕಾರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಬಲ್ಲದು... ಎಂತಹ ರಸ್ತೆಯಲ್ಲಿ ಬೇಕಾದರೂ ಲೀಲಾಜಾಲವಾಗಿ ಹೋಗುತ್ತದೆ. ಬನ್ನಿ.. ಈ ನೂತನ ಟಿಯಾಗೊ ಎನ್‌ಆರ್‌ಜಿ ಹ್ಯಾಚ್‌ಬ್ಯಾಕ್‌ನ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.
ಬೆಲೆ (Price): 2025ರ ಹೊಸ ಟಾಟಾ ಟಿಯಾಗೊ ಎನ್‌ಆರ್‌ಜಿ (Tata Tiago NRG) ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಇದರ ಪೆಟ್ರೋಲ್ ರೂಪಾಂತರಗಳು ರೂ.7.2 ಲಕ್ಷದಿಂದ ರೂ.7.75 ಲಕ್ಷ ಹಾಗೂ ಸಿಎನ್‌ಜಿ ರೂಪಾಂತರಗಳು ರೂ.8.2 ಲಕ್ಷದಿಂದ ರೂ.8.75 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿವೆ.

ವಿನ್ಯಾಸ (Design): ಈ ಕಾರಿನ ಹೊರಭಾಗದ ವಿನ್ಯಾಸ ಪ್ರಸ್ತುತವಿರುವ ಟಿಯಾಗೊಗೆ ಹೋಲಿಕೆಯಾಗುತ್ತದೆ. ಅದರ ಹೊರತಾಗಿ ಥಿಕ್ ಸಿಲ್ವರ್ ಸ್ಕಿಡ್ ಪ್ಲೇಟ್, ಮರುವಿನ್ಯಾಸಗೊಳಿಸಿರುವ ಬಂಪರ್, ಶಾರ್ಕ್ ಫಿನ್ ಆಂಟೆನಾ, ಮುಸ್ಕ್ಯುಲರ್ ಟೈಲ್‌ಗೇಟ್‌ನ್ನು ಪಡೆದಿದೆ. ಒಳಭಾಗದ ಕ್ಯಾಬಿನ್ ಕೂಡ ಚೆನ್ನಾಗಿದ್ದು, ಟೂ-ಸ್ಪೋಕ್ ಸ್ಟೀರಿಂಗ್ ವೀಲ್‌ನಲ್ಲಿ ಟಾಟಾ ಲೋಗೋವನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance): ನೂತನ ಟಾಟಾ ಟಿಯಾಗೊ ಎನ್‌ಆರ್‌ಜಿ ಹ್ಯಾಚ್‌ಬ್ಯಾಕ್‌ನ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಯಾವುದೇ ಬದಲಾವಣೆಗಳನ್ನು ಮಾಡಿಲಾಗಿಲ್ಲ. ಇದು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.43 ರಿಂದ 28.06 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಆಸನ ಆಯ್ಕೆ & ವೈಶಿಷ್ಟ್ಯಗಳು (Seating Capacity & Features): ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಇದರಿಂದ ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ - ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕೀಲೆಸ್ ಎಂಟ್ರಿ, ಪುಶ್ ಸ್ಟಾರ್ಟ್/ಸ್ಟಾಪ್ ಬಟನ್, ಹೈಟ್-ಅಡ್ಜಸ್ಟಬಲ್ ಡ್ರೈವರ್ ಸೀಟ್, ರೇರ್ ಸೆನ್ಸರ್ಸ್ ವೈಪರ್‌ಗಳು ಮತ್ತು ಸ್ಟೀರಿಂಗ್ - ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ಹೊಸ ಟಾಟಾ ಟಿಯಾಗೊ ಎನ್‌ಆರ್‌ಜಿ ಹ್ಯಾಚ್‌ಬ್ಯಾಕ್ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

ಒಟ್ಟಾರೆಯಾಗಿ ನೂತನ ಟಾಟಾ ಟಿಯಾಗೊ ಎನ್‌ಆರ್‌ಜಿ ಹ್ಯಾಚ್‌ಬ್ಯಾಕ್ ಬಿಡುಗಡೆಯಾಗಿರುವುದು ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುವ ನಿರೀಕ್ಷೆಯಿದೆ. ಮುಂಬರುವ ದಿನಗಳಲ್ಲಿ ಈ ಕಾರಿಗೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications