15 ವರ್ಷ ಕಳೆದರೂ ಈ ಜನಪ್ರಿಯ ಕಾರುಗಳದ್ದೇ ಹವಾ.. ಗ್ರಾಹಕರು ಮುಗಿಬೀಳುವರು, ಭಾರೀ ಸಂಖ್ಯೆಯಲ್ಲಿ ಮಾರಾಟ!

ವಿಶ್ವದಲ್ಲೇ ಭಾರತವು ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ಒಂದಿಲ್ಲೊಂದು ಒಂದು ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌ಯುವಿ ಹಾಗೂ ಎಂಪಿವಿಗಳು ಬಿಡುಗಡೆಯಾಗುತ್ತವೆ. ಆದರೆ, ಕೆಲವೇ ಕಾರುಗಳು ಮಾತ್ರ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತವೆ. ದೇಶೀಯವಾಗಿಯೂ ಬೆರಳೆಣಿಕೆಯಷ್ಟು ಕಾರುಗಳ ಮಾರಾಟವು ಶುರುವಾಗಿ, ದಶಕಗಳೇ ಉರುಳಿದೆ. ಅವುಗಳಲ್ಲಿ ಮಾರುತಿ ಸುಜುಕಿ ಆಲ್ಟೊ ಕೆ10, ಟಾಟಾ ಸಫಾರಿ & ಮಾರುತಿ ಸುಜುಕಿ ಸ್ವಿಫ್ಟ್ ಪ್ರಮುಖವಾಗಿವೆ. ಈ ಕಾರುಗಳು 15 ವರ್ಷಗಳಿಂದ ಮಾರಾಟದಲ್ಲಿದ್ದು, ಭಾರೀ ಬೇಡಿಕೆಯನ್ನು ಹೊಂದಿವೆ.

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):

ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಮೊದಲ ಬಾರಿಗೆ ಆಲ್ಟೊ ಕೆ10 ಕಾರನ್ನು 2010ರ ಆಗಸ್ಟ್ ತಿಂಗಳಲ್ಲಿ ಬಿಡುಗಡೆಗೊಳಿಸಲಾಯಿತು. ಸದ್ಯ, ಮಾರಾಟಕ್ಕೆ ಬಂದು 15 ವರ್ಷಗಳ ಸನಿಹದಲ್ಲಿದೆ. ಈ ಕಾರು ನಗರ ಪ್ರದೇಶದ ಚಾಲನೆಗೆ ಹೆಚ್ಚು ಸೂಕ್ತವಾಗಿದ್ದು, ಈಗಲೂ ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇದೇ ವರ್ಷದ ಮೊದಲರ್ಧದಲ್ಲಿ (ಜನವರಿಯಿಂದ ಜೂನ್) ಒಟ್ಟು 45,381 ಯುನಿಟ್‌ಗಳನ್ನು ಮಾರಲಾಗಿದೆ.

These Cars Have Been On Sale For 15 Years Still Get Huge Demand Alto K10 Safari Swift

ಈ ಹ್ಯಾಚ್‌ಬ್ಯಾಕ್ ಬಜೆಟ್ ಬೆಲೆಯಲ್ಲಿಯೂ ಲಭ್ಯವಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇದು ಕನಿಷ್ಠ ರೂ.4.23 ಲಕ್ಷ ಹಾಗೂ ಗರಿಷ್ಠ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೋಡಲು ತುಂಬಾ ಚೆನ್ನಾಗಿದ್ದು, ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ & ಮೆಟಾಲಿಕ್ ಸ್ಪೀಡಿ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಆಲ್ಟೊ ಕೆ10 1-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 33 ಕಿ.ಮೀವರೆಗೂ ಮೈಲೇಜ್ ನೀಡಬಲ್ಲದು. ಇದರಲ್ಲಿ 5 ಆಸನಗಳಿವೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಕನೆಕ್ಟಿವಿಟಿ, ಕೀಲೆಸ್ ಎಂಟ್ರಿ, 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಸಫಾರಿ (Tata Safari):

ಈ ಬಲಿಷ್ಠ ಎಸ್‌ಯುವಿಯನ್ನು ಎರಡು ದಶಕಗಳಿಂದ ಮಾರಾಟ ಮಾಡಲಾಗುತ್ತಿದೆ. 1998ರಲ್ಲಿ ಮೊದಲ ಸಫಾರಿ ಕಾರನ್ನು ಪರಿಚಯಿಸಲಾಯಿತು. ಇದು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಈಗಲೂ ಗ್ರಾಹಕರು ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಇದೇ ವರ್ಷದ ಮೊದಲರ್ಧದಲ್ಲಿಯೂ ಸರಿ ಸುಮಾರು 7,896 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

These Cars Have Been On Sale For 15 Years Still Get Huge Demand Alto K10 Safari Swift

ಹೊಸ ಸಫಾರಿ ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಕಾಸ್ಮಿಕ್ ಗೋಲ್ಡ್, ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್, ಸೂಪರ್‌ನೋವಾ ಕಾಪರ್ ಹಾಗೂ ಲೂನಾರ್ ಸ್ಲೇಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಇದರಲ್ಲಿ 2-ಲೀಟರ್ ಡೀಸೆಲ್ ಎಂಜಿನ್ ಇದ್ದು, 14 ರಿಂದ 16.30 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. 6/ 7 ಆಸನಗಳನ್ನು ಒಳಗೊಂಡಿದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):

ಈ ಹ್ಯಾಚ್‌ಬ್ಯಾಕ್ ಕೂಡ ಎರಡು ದಶಕಗಳಿಂದ ಯಶಸ್ವಿಯಾಗಿ ಮಾರಾಟವಾಗುತ್ತಿದೆ. 2005ರಲ್ಲಿ ಬಿಡುಗಡೆಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೆ ಭಾರೀ ಬೇಡಿಕೆಯನ್ನು ಹೊಂದಿದ್ದು, ಪ್ರತಿ ತಿಂಗಳು ದೇಶೀಯವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಖಚಿತವಾಗಿ ಸ್ಥಾನವೊಂದನ್ನು ಪಡೆದಿರುತ್ತದೆ. ಇದೇ ವರ್ಷದ ಮೊದಲರ್ಧದಲ್ಲಿ 93,098 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

These Cars Have Been On Sale For 15 Years Still Get Huge Demand Alto K10 Safari Swift

ನೂತನ ಸ್ವಿಫ್ಟ್ ತುಂಬಾ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಕನಿಷ್ಠ ರೂ.6.49 ಲಕ್ಷ ಮತ್ತು ಗರಿಷ್ಠ ರೂ.9.64 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಹಾಗೂ ನಾವೆಲ್ ಆರೆಂಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇದು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 32.85 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಆಸನಗಳಿವೆ. 9-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್, ಯುಎಸ್‌ಬಿ ಟೈಪ್-ಸಿ ಪೋರ್ಟ್‌, 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿದೆ.

Article Published On: Wednesday, July 23, 2025, 10:41 [IST]
English summary
These cars have been on sale for 15 years still get huge demand alto k10 safari swift
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+