Tata Sierra: ಲಕ್ಷುರಿ ಫೀಚರ್ಸ್.. 5-ಸೀಟರ್! ಇಂದು ಹೊಸ ಟಾಟಾ ಸಿಯೆರಾ ಎಸ್‌ಯುವಿ ಅನಾವರಣ.. ಬೆಲೆ ಎಷ್ಟು, ವಿಶೇಷತೆಗಳೇನು?

ನೂತನ ಟಾಟಾ ಸಿಯೆರಾ (Tata Sierra) ಎಸ್‌ಯುವಿ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ ಮುಂಬೈನಲ್ಲಿ ನಡೆಯುವ ಅದ್ದೂರಿಯಾಗಿ ಸಮಾರಂಭದಲ್ಲಿ ಪರಿಚಯಗೊಳ್ಳಲಿದೆ. ನೂತನ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಇದೇ 'ಸಿಯೆರಾ'ವನ್ನು 1991 ರಿಂದ 2003ರವರೆಗೆ ಮಾರಾಟ ಮಾಡಲಾಗಿತ್ತು. ಸದ್ಯ, ಹೊಸ ರೂಪದಲ್ಲಿ ಪಾದಾರ್ಪಣೆಗೆ ಸಿದ್ದಗೊಂಡಿರುವ ಈ ಎಸ್‌ಯುವಿಯ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ಇದು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. ಕನಿಷ್ಠ ರೂ.11 ಲಕ್ಷ ಹಾಗೂ ಗರಿಷ್ಠ ರೂ.25 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಐಸಿಇ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ಚಾಲಿತ ಪವರ್‌ಟ್ರೇನ್ ಆಯ್ಕೆಯಲ್ಲಿ ಮಾರಾಟಕ್ಕೆ ಬರಲಿದೆ. ಈಗಾಗಲೇ, ದೇಶಾದ್ಯಂತ ಹಲವಾರು ಡೀಲರ್‌ಶಿಪ್‌ಗಳು ನೂತನ 'ಸಿಯೆರಾ'ಗಾಗಿ ಅನಧಿಕೃತವಾಗಿ ಬುಕ್ಕಿಂಗ್‌ನ್ನು ತೆಗೆದುಕೊಳ್ಳಲು ಪ್ರಾರಂಭಿಸಿವೆ ಎಂದು ವರದಿಯಾಗಿದೆ.

Today New Tata Sierra Suv unveil Details

ವಿನ್ಯಾಸ (Design):

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಅದು ವಿವಿಧ ಟೀಸರ್ ವಿಡಿಯೋಗಳಲ್ಲಿ ಬಹಿರಂಗಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುವ ನಿರೀಕ್ಷೆಯಿದೆ.

ಸುತ್ತಳತೆ (Dimensions & Seating Capacity):

ಹೊಸ 'ಟಾಟಾ ಸಿಯೆರಾ' ದೊಡ್ಡ ಗಾತ್ರದಲ್ಲಿದೆ. 4,300 ಮಿ.ಮೀ ಉದ್ದ, 1,800 ಮಿ.ಮೀ ಅಗಲ ಹಾಗೂ 1,600 ಮಿ.ಮೀ ಎತ್ತರವಿರಲಿದೆ. ಜೊತೆಗೆ 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,650 ಮಿ.ಮೀ ವೀಲ್‌ಬೇಸ್‌ನ್ನು ಪಡೆಯಿರಲಿದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ಕಾರ್ಯಕ್ಷಮತೆ (Performance):

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದುಕೊಂಡಿರಲಿದೆ. ಈ ಕಾರಿನ 'ಐಸಿಇ' ಮಾಡೆಲ್‍ನ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 170 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್, 118 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ನೂತನ 'ಸಿಯೆರಾ'ದ ಎಲೆಕ್ಟ್ರಿಕ್ ಮಾಡೆಲ್, 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಬರೋಬ್ಬರಿ 627 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುವ ಸಾಧ್ಯತೆಯಿದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಇದರ ವೈಶಿಷ್ಟ್ಯಗಳ ಕುರಿತಂತೆಯೂ ಬಹುತೇಕ ಎಲ್ಲ ವಿವರಗಳು ಬಹಿರಂಗಗೊಂಡಿದೆ. ಹೊಸ 'ಟಾಟಾ ಸಿಯೆರಾ' ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್-ಸೈಡ್ ಡಿಸ್​ಪ್ಲೇ) ಸ್ಟೀರಿಂಗ್ ವೀಲ್‌ನಲ್ಲಿ ಟಾಟಾ ಲೋಗೋ, ಟಚ್ ಬೇಸ್ಡ್ ಕ್ಲೇಮೇಟ್ ಕಂಟ್ರೋಲ್ ಮತ್ತು ಆಂಬಿಯೆಂಟ್ ಲೈಟಿಂಗ್‌ನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಸುರಕ್ಷತೆಗೂ ಹೆಸರುವಾಸಿಯಾಗಿರಲಿದ್ದು, ಪ್ರಯಾಣಿಕರಿಗೆ ಗರಿಷ್ಠವಾದ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.

More from DriveSpark

Article Published On: Saturday, November 15, 2025, 8:33 [IST]
English summary
Today new tata sierra suv unveil details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+