Mahindra: 7-ಸೀಟರ್.. ಲೆಕ್ಕವಿಲ್ಲದಷ್ಟು ವೈಶಿಷ್ಟ್ಯಗಳು! ನಾಳೆ ಮಹೀಂದ್ರಾದ ಹೊಸ ಕಾರು ಬಿಡುಗಡೆ, ಬೆಲೆ ಎಷ್ಟು, ವಿಶೇಷತೆಗಳೇನು?

ಮಹೀಂದ್ರಾ (Mahindra) ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಎಕ್ಸ್ಇವಿ 9ಇ (XEV 9e) ಮತ್ತು ಬಿಇ 6 (BE 6) ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ನಾಳೆ ಕಂಪನಿಯು ಎಕ್ಸ್ಇವಿ 9ಎಸ್ (XEV 9S) ಹೆಸರಿನ ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲಿದೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ನೂತನ ಮಹೀಂದ್ರಾ ಎಕ್ಸ್ಇವಿ 9ಎಸ್ (Mahindra XEV 9S) ಎಲೆಕ್ಟ್ರಿಕ್ ಎಸ್‌ಯುವಿ, ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಕನಿಷ್ಠ ರೂ.21 ಲಕ್ಷ ಹಾಗೂ ಗರಿಷ್ಠ ರೂ.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಟಾಟಾ ಹ್ಯಾರಿಯರ್ ಇವಿ ಮತ್ತು ಬಿವೈಡಿ ಇಮ್ಯಾಕ್7ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

Tomorrow Mahindra XEV 9S Suv Launch Expected Price And Features Details

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿರಲಿದೆ. ಹಲವು ಟೀಸರ್‌ಗಳಿಂದ ಅದು ಖಚಿತವಾಗಿದೆ. 'ಮಹೀಂದ್ರಾ ಎಕ್ಸ್ಇವಿ 9ಇ' ಕಾರಿಗೂ ಹೋಲಿಕೆಯಾಗಲಿದೆ. ತ್ರೈ ಅಂಗುಲರ್ ಹೆಡ್‌ಲೈಟ್ ಸೆಟಪ್, 'ಎಲ್' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಇದು 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ದೊಡ್ಡ ಗಾತ್ರದ ಫ್ರಂಟ್ ಫ್ರಂಕ್ ಮತ್ತು ಬೂಟ್ ಸ್ಪೇಸ್‌ನ್ನು ಒಳಗೊಂಡಿರಲಿದೆ.

ಹೊಸ 'ಮಹೀಂದ್ರಾ ಎಕ್ಸ್ಇವಿ 9ಎಸ್' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿರುವ ನಿರೀಕ್ಷೆಯಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 542 ರಿಂದ 656 ಕಿ.ಮೀ ರೇಂಜ್ (ಮೈಲೇಜ್) ನೀಡುವ ಸಾಧ್ಯತೆಯಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿರಲಿದ್ದು, 2-ಸ್ಪೋಕ್ ಸ್ಟೀರಿಂಗ್ ವೀಲ್ ಹಾಗೂ ಟ್ರಿಪಲ್-ಸ್ಕ್ರೀನ್ ಸೆಟಪ್‌ನ್ನು ಹೊಂದಿರಲಿದೆ ಎಂಬುದು ಬಹುತೇಕ ದೃಢಪಟ್ಟಿದೆ. ಮಲ್ಟಿ ಝೋನ್ ಆಟೋ ಎಸಿ, ಟ್ರಿಪಲ್-ಜೋನ್ ಕ್ಲೇಮೇಟ್ ಕಂಟ್ರೋಲ್, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್‌ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿರಲಿದೆ. ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್ ಹೋಲ್ಡ್ ಅಸಿಸ್ಟ್. ಆಟೋ ಪಾರ್ಕ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿರಬಹುದು ಎನ್ನಲಾಗಿದೆ.

ಸದ್ಯ ಖರೀದಿಗೆ ಲಭ್ಯವಿರುವ ಮಹೀಂದ್ರಾ ಎಕ್ಸ್ಇವಿ 9ಇ & ಬಿಇ 6 ವಿಶೇಷತೆಗಳೇನು:

ಮಹೀಂದ್ರಾ ಎಕ್ಸ್ಇವಿ 9ಇ: ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.22.40 ಲಕ್ಷದಿಂದ ರೂ.31.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 59 ಹಾಗೂ 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 542 ರಿಂದ 656 ಕಿ.ಮೀ ರೇಂಜ್ (ಮೈಲೇಜ್) ಕೊಡಲಿದೆ. 5 ಆಸನಗಳನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್‌ಪ್ಲೇಗಾಗಿ 12.3-ಇಂಚಿನ ಸ್ಕ್ರೀನ್ ಹಾಗೂ 7 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಹೀಂದ್ರಾ ಬಿಇ 6: ಇದು ರೂ.18.90 ಲಕ್ಷದಿಂದ ರೂ.27.79 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 59 ಮತ್ತು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 556 ರಿಂದ 682 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Wednesday, November 26, 2025, 18:49 [IST]
English summary
Tomorrow mahindra xev 9s suv launch expected price and features details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+