Maruti: ನಾಳೆ ಹೊಸ ಮಾರುತಿ ಕಾರು ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಬಹುನಿರೀಕ್ಷಿತ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ (ಡಿ. 2) ಈ ಕಾರು ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ. ನೂತನ 'ಇ-ವಿಟಾರಾ' ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದೆ. ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಇದಕ್ಕೆ ಟಾಟಾ ಹ್ಯಾರಿಯರ್ ಇವಿ, ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಮತ್ತು ಎಂಜಿ ವಿಂಡ್ಸರ್ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ನೂತನ 'ಮಾರುತಿ ಇ-ವಿಟಾರಾ'ವನ್ನು ಗುಜರಾತ್‌ನ ಹಂಸಲ್‌ಪುರದಲ್ಲಿರುವ ಕಂಪನಿಯ ತಯಾರಿಕಾ ಘಟಕದಲ್ಲಿ ಉತ್ಪಾದಿಸಲಾಗುತ್ತಿದೆ. ಈಗಾಗಲೇ, ಮೊದಲ ಬ್ಯಾಚ್‌ನ 6,000 ಯುನಿಟ್‌ಗಳನ್ನು ಇಂಗ್ಲೆಂಡ್, ಜರ್ಮನಿ, ಫ್ರಾನ್ಸ್, ಸ್ವಿಟ್ಜರ್‌ಲ್ಯಾಂಡ್ ಹಾಗೂ ನೆದರ್‌ಲ್ಯಾಂಡ್‌ಗಳಿಗೂ ರಫ್ತು ಮಾಡಲಾಗಿದೆ. ಈ ಕಾರು, ಕೈಗೆಟುಕುವ ದರದಲ್ಲೂ ಸಿಗುವ ನಿರೀಕ್ಷೆಯಿದೆ. ಕನಿಷ್ಠ ರೂ.17 ಲಕ್ಷ ಹಾಗೂ ಗರಿಷ್ಠ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ಸಾಧ್ಯತೆಯಿದೆ.

Tomorrow Maruti Suzuki e Vitara Suv Launch In India Key Details

ಇದು ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್ ಹಾಗೂ 19 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ, ಬ್ಲ್ಯೂಯಿಶ್ ಬ್ಲ್ಯಾಕ್ ಮತ್ತು ಆಪ್ಯುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ 'ಮಾರುತಿ ಇ-ವಿಟಾರಾ' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿರುವ ಮಾಡೆಲ್, 144 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 189 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತೊಂದು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದುರುವ ಮಾಡೆಲ್, 174 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 189 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ನೂತನ 'ಇ-ವಿಟಾರಾ' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ ಯುರೋ ಎನ್‌ಸಿಎಪಿ (Euro NCAP) ಪರೀಕ್ಷೆಯಲ್ಲಿ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 40ಕ್ಕೆ 31 ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 42 ಅಂಕಗಳನ್ನು ಗಳಿಸಿದೆ. ಅದಕ್ಕೆ ತಕ್ಕಂತೆ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) & 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಒಟ್ಟಾರೆಯಾಗಿ, ನಾಳೆ 'ಮಾರುತಿ ಸುಜುಕಿ ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾಗುತ್ತಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಸಾಕಷ್ಟು ಅತ್ಯಾಧುನಿಕವಾಗಿದೆ. ಈ ಕಾರು, ಮಾರಾಟಕ್ಕೆ ಬಂದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

More from DriveSpark

Article Published On: Monday, December 1, 2025, 13:42 [IST]
English summary
Tomorrow maruti suzuki e vitara suv launch in india key details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+