ಶೋರೂಂ ಮುಂದೆ ಸಾಲು ಕಟ್ಟಿದ ಗ್ರಾಹಕರು! 29 ಕಿ.ಮೀ ಮೈಲೇಜ್.. ನಾಳೆ ಹೊಸ ಮಾರುತಿ ಕಾರು ಬಿಡುಗಡೆ.. ಬೆಲೆ ಎಷ್ಟು?
ಇತ್ತೀಚೆಗೆ ಹೊಚ್ಚ ಹೊಸ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಎಸ್‌ಯುವಿಯನ್ನು ಅನಾವರಣಗೊಳಿಸಲಾಗಿತ್ತು. ಈ ಕಾರನ್ನು ಡೀಲರ್‌ಶಿಪ್‌ಗಳಿಗೆ ತಲುಪಿಸುವ ಕಾರ್ಯಕ್ಕೂ ಕಂಪನಿಯು ಚಾಲನೆ ನೀಡಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಮತ್ತು ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಕೈಗೆಟುಕುವ ದರದಲ್ಲೂ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ನಾಳೆ (ಸೆಪ್ಟೆಂಬರ್ 15) ವಿಕ್ಟೋರಿಸ್ ಬೆಲೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಜೊತೆಗೆ ದೇಶೀಯ ಮಾರುಕಟ್ಟೆಯಲ್ಲಿಯೂ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗುತ್ತದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡುರುವ ಮಾರುತಿ ಸುಜುಕಿಯ ಮಾರ್ಕೆಟಿಂಗ್ & ಸೇಲ್ಸ್ ವಿಭಾಗದ ಹಿರಿಯ ಅಧಿಕಾರಿ ಪಾರ್ಥೋ ಬ್ಯಾನರ್ಜಿ ಅವರು, 'ಸೆಪ್ಟೆಂಬರ್ 15 ರಂದು ವಿಕ್ಟೋರಿಸ್ ದರವನ್ನು ಬಹಿರಂಗಪಡಿಸಲಾಗುವುದು' ಎಂದು ಹೇಳಿದ್ದಾರೆ. ನೂತನ ಎಸ್‌ಯುವಿಯು ಕಡಿಮೆ ಬೆಲೆಯನ್ನು ಹೊಂದಿರಲಿದ್ದು, ರೂ.9.70 ಲಕ್ಷದಿಂದ ರೂ.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಹೊಸ ಮಾರುತಿ ಸುಜುಕಿ ವಿಕ್ಟೋರಿಸ್ ಎಸ್‌ಯುವಿಗಾಗಿ ಕಂಪನಿಯು ಬುಕ್ಕಿಂಗ್‌ನ್ನು ಪ್ರಾರಂಭ ಮಾಡಿದೆ. ಆಸಕ್ತರು ರೂ.11,000 ಮುಂಗಡ ಹಣ ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಸದ್ಯ, ಈ ಕಾರಿಗೆ ಭಾರೀ ಬೇಡಿಕೆ ಬಂದಿದ್ದು, ಪ್ರತಿದಿನ ಸರಾಸರಿ 1,000 ಬುಕ್ಕಿಂಗ್‌ಗಳನ್ನು ಪಡೆದುಕೊಳ್ಳುತ್ತಿದೆ ಎಂದು ವರದಿಯಾಗಿದೆ.
ಇದು ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ, ಜಡ್ಎಕ್ಸ್ಐ (ಒ), ಜಡ್ಎಕ್ಸ್ಐ ಪ್ಲಸ್ ಮತ್ತು ಜಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.
ಈ ಕಾರು ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್, ಮ್ಯಾಗ್ಮಾ ಗ್ರೇ ಹಾಗೂ ಮಿಸ್ಟಿಕ್ ಗ್ರೀನ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 4,360 ಎಂಎಂ ಉದ್ದ, 1,655 ಎಂಎಂ ಅಗಲ ಹಾಗೂ 1,795 ಎಂಎಂ ಎತ್ತರವು ಇದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ ವಿಕ್ಟೋರಿಸ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 28.65 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.
ಇದು 135 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, 64 ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ವಿಕ್ಟೋರಿಸ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 'ಭಾರತ್ ಎನ್‌ಸಿಎಪಿ'ಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಒಟ್ಟಾರೆಯಾಗಿ, ನಾಳೆ ಹೊಸ 'ಮಾರುತಿ ಸುಜುಕಿ ವಿಕ್ಟೋರಿಸ್' ಕಾರು ಬಿಡುಗಡೆಯಾಗಲಿದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ತುಂಬಾ ಚೆನ್ನಾಗಿದ್ದು, ನವೀನ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಈ ಎಸ್‌ಯುವಿ ವಿತರಣೆ ಶುರುವಾದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








