Hyundai: ಜನ ಕ್ಯೂ ನಿಲ್ಲುವರು! ನಾಳೆ ಹೊಸ ಹ್ಯುಂಡೈ ಕಾರು ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?
ನಾಳೆ ಬಹುನಿರೀಕ್ಷಿತ ಹೊಸ ತಲೆಮಾರಿನ 2025ರ ಹ್ಯುಂಡೈ ವೆನ್ಯೂ (Hyundai Venue) ಎಸ್‌ಯುವಿ ಬಿಡುಗಡೆಯಾಗಲಿದೆ. ಈ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಇದು ನೋಡಲು ತುಂಬಾ ಚೆನ್ನಾಗಿದೆ. ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ದರದಲ್ಲೂ ಸಿಗಬಹುದು ಎಂದು ಅಂದಾಜಿಸಲಾಗಿದೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನೂತನ 'ಹ್ಯುಂಡೈ ವೆನ್ಯೂ' ಕಾರು ರೂ.8 ಲಕ್ಷದಿಂದ ರೂ.13 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. ಹೆಚ್ಎಕ್ಸ್2, ಹೆಚ್ಎಕ್ಸ್4, ಹೆಚ್ಎಕ್ಸ್5, ಹೆಚ್ಎಕ್ಸ್6, ಹೆಚ್ಎಕ್ಸ್6ಟಿ, ಹೆಚ್ಎಕ್ಸ್8, ಹಾಗೂ ಹೆಚ್ಎಕ್ಸ್10 ಎಂಬ ರೂಪಾಂತರಗಳ (ವೇರಿಯೆಂಟ್) ಆಯೆಯಲ್ಲಿಯೂ ಸಿಗಲಿದೆ.

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್ ಸೆಟಪ್, ಸಿ-ಆಕಾರಕ್ಕೆ ಹೋಲಿಕೆಯಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಡಾರ್ಕ್ ಕ್ರೋಮ್ ಗ್ರಿಲ್, ಮರುವಿನ್ಯಾಸಕ್ಕೆ ಒಳಪಡಿಸಲಾದ ಬಂಪರ್, ಬ್ರಿಡ್ಜ್-ಟೈಪ್ ರೂಫ್ ರೈಲ್‌ಗಳು, ಇನ್-ಗ್ಲಾಸ್ ವೆನ್ಯೂ ಲೋಗೋ, ವೀಲ್ ಆರ್ಚ್‌ಗಳು, ರಿಫ್ರೆಶ್ಡ್ ಸಿ-ಪಿಲ್ಲರ್ ಹಾಗೂ 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಈ ಎಸ್‌ಯುವಿ ಹೆಚ್ಚು ವಿಶಾಲ ಗಾತ್ರದಲ್ಲಿದೆ. 3,995 ಮಿ.ಮೀ ಉದ್ದ, 1,800 ಮಿ.ಮೀ ಅಗಲ ಹಾಗೂ 1,665 ಮಿಮೀ ಎತ್ತರವಿದೆ. ಜೊತೆಗಿದು 2,520 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 350 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಹೊಸ 'ಹ್ಯುಂಡೈ ವೆನ್ಯೂ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಡಿಸೇಲ್ ಎಂಜಿನ್ ಹಾಗೂ 1.0-ಟರ್ಬೊ ಪೆಟೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.
ಇದು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ ಡಿಸ್‌ಪ್ಲೇಗಾಗಿ ನವೀನವಾದ ಡುಯಲ್ 12.3-ಇಂಚಿನ ಸ್ಕ್ರೀನ್‌ಗಳು, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಬ್ಲೂಲಿಂಕ್ ಕನೆಕ್ಟ್ಡ್ ಕಾರ್ ಟೆಕ್, 8-ಸ್ಪೀಕರ್ ಬೋಸ್ ಮ್ಯೂಸಿಕ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, ರಿಕ್ಲೈನಿಂಗ್ ರೇರ್ ಸೀಟ್‌ಗಳು ಹಾಗೂ ರೇರ್ ಎಸಿ ವೆಂಟ್‌ಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹೆಚ್ಎಸಿ (ಹಿಲ್ ಅಸಿಸ್ಟ್ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಬ್ಲೈಂಡ್ ಸ್ಪಾಟ್ ಮಾನಿಟರ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಹಾಗೂ 360-ಡಿಗ್ರಿ ಸರೌಂಡ್ ವ್ಯೂ ಕ್ಯಾಮೆರಾವನ್ನು ಪಡೆದಿದೆ.
ಹೊಸ 'ಹ್ಯುಂಡೈ ವೆನ್ಯೂ' ಎಸ್‌ಯುವಿಯ ಬುಕ್ಕಿಂಗ್ ಕೂಡ ಶುರುವಾಗಿದೆ. ಆಸಕ್ತ ಗ್ರಾಹಕರು ರೂ.25,000 ಮುಂಗಡ ಹಣ ಪಾವತಿಸಿ, ಅಧಿಕೃತ ವೆಬ್‌ಸೈಟ್ ಅಥವಾ ಸಮೀಪದ ಡೀಲರ್‌ಶಿಪ್‌ಗಳಿಗೆ ಭೇಟಿ ನೀಡಿ, ಆರ್ಡರ್ ಮಾಡಬಹುದು. ಇದಕ್ಕೆ ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಸ್ಕೋಡಾ ಕೈಲಾಕ್, ನಿಸ್ಸಾನ್ ಮ್ಯಾಗ್ನೈಟ್, ಮಾರುತಿ ಸುಜುಕಿ ವಿಕ್ಟೋರಿಸ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








