Maruti Suzuki: ನಾಳೆ ಮಾರುತಿ ಸುಜುಕಿಯ ಪ್ರಪ್ರಥಮ ಎಲೆಕ್ಟ್ರಿಕ್ ಕಾರು e Vitara ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಬಹುನಿರೀಕ್ಷಿತ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ (ಸೆಪ್ಟೆಂಬರ್ 3) ಅದ್ದೂರಿಯಾಗಿಯೂ ಮಾರಾಟಕ್ಕೆ ಬರಲಿದೆ. ಈ ಕಾರನ್ನು ಸ್ವಾಗತಿಸಲು ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತಿದ್ದಾರೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ನಾವಿಲ್ಲಿ ಹೊಚ್ಚ ಹೊಸ 'ಇ-ವಿಟಾರಾ'ದ ನಿರೀಕ್ಷಿತ ಬೆಲೆ ಎಷ್ಟು ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಲೆ & ರೂಪಾಂತರಗಳು (Price & variants):

ನೂತನ ಮಾರುತಿ ಇ-ವಿಟಾರಾ ಎಸ್‌ಯುವಿ ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆ ಇದ್ದು, ಕನಿಷ್ಠ ರೂ.17 ಲಕ್ಷ ಹಾಗೂ ಗರಿಷ್ಠ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗಲಿದೆ.

Tomorrow New Maruti Suzuki e Vitara Suv Launch In India Expected Price Details

ವಿನ್ಯಾಸ (Design):

ಇದೇ ಕಾರನ್ನು ಈ ವರ್ಷಾರಂಭದ ಜನವರಿ ತಿಂಗಳಲ್ಲಿ ಮುಕ್ತಾಯಗೊಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲಿಯೂ ಪ್ರದರ್ಶಿಸಲಾಗಿತ್ತು. ಅಲ್ಲಿ ಹೊಸ 'ಇ-ವಿಟಾರಾ' ಕುರಿತ ಎಲ್ಲ ಪ್ರಮುಖ ವಿವರಗಳನ್ನು ಬಹಿರಂಗಪಡಿಸಲಾಯಿತು. ಈ ಎಲೆಕ್ಟ್ರಿಕ್ ಎಸ್‌ಯುವಿಯು ಹೊರಭಾಗದಲ್ಲಿ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರನ್ನು ಆಕರ್ಷಿಸುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಸುತ್ತಳತೆ (Dimensions):

ಈ ಮಾರುತಿ ಸುಜುಕಿ ಇ-ವಿಟಾರಾ ಎಲೆಕ್ರಿಕ್ ಎಸ್‌ಯುವಿಯು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,275 ಎಂಎಂ ಉದ್ದ, 4,275 ಎಂಎಂ ಅಗಲ ಮತ್ತು 1,800 ಎಂಎಂ ಎತ್ತರ ಕೂಡ ಇದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Tomorrow New Maruti Suzuki e Vitara Suv Launch In India Expected Price Details

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ನೂತನ ಇ-ವಿಟಾರಾ ಕಾರು 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ಬೃಹದಾಕಾರದ 398 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿರುವ ಎಲ್ಲ ಲಕ್ಷಣಗಳಿವೆ.

ಕಾರ್ಯಕ್ಷಮತೆ (Performance):

ಇದರ ಪವರ್‌ಟ್ರೇನ್‌ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಹೊಸ ಇ-ವಿಟಾರಾ 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಪಡೆದಿರಲಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

ವೈಶಿಷ್ಟ್ಯಗಳು (Features):

ಈ ಇ-ವಿಟಾರಾ ಕಾರಿನ ವಿನ್ಯಾಸವು ಸಾಕಷ್ಟು ಉತ್ತಮವಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಮಾರುತಿ ಸುಜುಕಿ ಇ-ವಿಟಾರಾ ಎಲೆಕ್ರಿಕ್ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದದಲ್ಲಿ ರಕ್ಷಣೆ ಒದಗಿಸಲಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಕ್ಕೆ ಟಾಟಾ ಹ್ಯಾರಿಯರ್ ಇವಿ, ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್, ಟಾಟಾ ಕರ್ವ್ ಇವಿ, ಎಂಜಿ ವಿಂಡ್ಸರ್ ಇವಿಗಳು ಪ್ರಬಲವಾದ ಎದುರಾಳಿಯಾಗಿವೆ.

More from DriveSpark

Article Published On: Tuesday, September 2, 2025, 8:30 [IST]
English summary
Tomorrow new maruti suzuki e vitara suv launch in india expected price details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+