627 ಕಿ.ಮೀ ರೇಂಜ್.. 5-ಸೀಟರ್, ನಾಳೆಯಿಂದ ಕಲ್ಲು ಬಂಡೆಯಂತಿರುವ ಈ ಹೊಸ ಟಾಟಾ ಕಾರಿನ ಬುಕ್ಕಿಂಗ್ ಶುರು!
ಟಾಟಾ ಹ್ಯಾರಿಯರ್ ಇವಿ (Tata Harrier EV) ವಿಶ್ವಾಸಾರ್ಹ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಭಾರತ್ ಎನ್‌ಸಿಎಪಿ (Bharat NCAP) ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದ್ದು, ಅತ್ಯಂತ ಸುರಕ್ಷಿತ ಕಾರೆಂದು ಸಹ ತೀರ್ಮಾನಿಸಲಾಗಿದೆ. ಬಹುತೇಕ ಗ್ರಾಹಕರು ಈ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಖರೀದಿ ಮಾಡಬೇಕೆಂದು ತುದಿಗಾಲಿನಲ್ಲಿ ನಿಂತಿದ್ದಾರೆ. ಅಂತಹರಿಗೆ ಭರ್ಜರಿಯಾದ ಸಿಹಿಸುದ್ದಿಯೊಂದು ಲಭ್ಯವಿದೆ.
ನಾಳೆಯಿಂದ (ಜುಲೈ 2) ನೂತನ ಟಾಟಾ ಹ್ಯಾರಿಯರ್ ಇವಿ ಬುಕ್ಕಿಂಗ್ ಪ್ರಕ್ರಿಯೆಗೆ ಅಧಿಕೃತವಾದ ಚಾಲನೆ ನೀಡಲಾಗುತ್ತದೆ. ಆಸಕ್ತ ಗ್ರಾಹಕರು ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ನಿಗದಿಪಡಿಸಿದ ಮುಂಗಡ ಹಣವನ್ನು ಪಾವತಿಸಿ ಆರ್ಡರ್ ಮಾಡಬಹುದು.

ಸದ್ಯ, ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ ರೂ.21.49 ಲಕ್ಷದಿಂದ ರೂ.28.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅಡ್ವೆಂಚರ್ 65, ಅಡ್ವೆಂಚರ್ ಎಸ್ 65, ಫಿಯರ್‌ಲೆಸ್ ಪ್ಲಸ್ 65, ಫಿಯರ್‌ಲೆಸ್ ಪ್ಲಸ್ 75 ಹಾಗೂ ಎಂಪವರ್ಡ್ 75 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.
ಈ ಎಲೆಕ್ಟ್ರಿಕ್ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 19-ಇಂಚಿರುವ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಹಾಗೂ ಪ್ಯೂರ್ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಹ್ಯಾರಿಯರ್ ಇವಿಯ 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್) ಮತ್ತು ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ಟೆಕ್ನಾಲಜಿಯನ್ನು ಒಳಗೊಂಡಿದೆ.
ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾದ್ಯವಾಗುವಂತೆ 502 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 4607 ಎಂಎಂ ಉದ್ದ, 2132 ಎಂಎಂ ಅಗಲವು ಇದೆ. 2741 ಎಂಎಂ ಉದ್ದದ ವೀಲ್‌ಬೇಸ್ ಆಯ್ಕೆಯನ್ನು ಒಳಗೊಂಡಿದೆ.

ಈ ಎಲೆಕ್ಟ್ರಿಕ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (14.5-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ಪನೊರೊಮಿಕ್ ಸನ್‌ರೂಫ್, 10 - ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.
ಹೊಸ ಟಾಟಾ ಹ್ಯಾರಿಯರ್ ಇವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಡಿಸೆಂಟ್ ಕಂಟ್ರೋಲ್ ಹಾಗೂ ಆಲ್-ವೀಲ್ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.
ಇನ್ನು, ನೂತನ ಟಾಟಾ ಹ್ಯಾರಿಯರ್ ಇವಿಗಾಗಿ ಕೆಲವೇ ಗಂಟೆಗಳಲ್ಲಿ ಬುಕ್ಕಿಂಗ್ ಪ್ರಾರಂಭವಾಗುತ್ತಿದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಈ ಕಾರು ಹೆಚ್ಚು ಅತ್ಯಾಧುನಿಕವಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುವ ನೀರಿಕ್ಷೆಯಿದೆ. ಮುಂಬರುವ ದಿನಗಳಲ್ಲಿ ಖರೀದಿದಾರರಿಗೆ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








