Tata Sierra: ಜನ ಸಾಲು ಕಟ್ಟುವರು.. 5-ಸೀಟರ್! ನಾಳೆ ಹೊಸ ಟಾಟಾ ಸಿಯೆರಾ ಕಾರು ಬಿಡುಗಡೆ, ಬೆಲೆ ಎಷ್ಟು.. ವಿಶೇಷತೆಗಳೇನು?
ಇತ್ತೀಚೆಗೆ ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಅದ್ದೂರಿಯಾಗಿ ಅನಾವರಣಗೊಳಿಸಲಾಗಿತ್ತು. ಕೇವಲ 'ಐಸಿಇ' ಮಾಡೆಲ್‌ನ್ನು ಮಾತ್ರವೇ ಪರಿಚಯಿಸಲಾಗಿತ್ತು. ಈಗಾಗಲೇ, ದೇಶಾದ್ಯಂತ ಆಯ್ದ ಡೀಲರ್‌ಶಿಪ್‌ಗಳಲ್ಲಿ ಅನಧಿಕೃತವಾಗಿ ಬುಕ್ಕಿಂಗ್‌ಗಳನ್ನು ಪ್ರಾರಂಭಿಸಲಾಗಿದೆ. ಆಸಕ್ತರು, ರೂ.11,000 ಟೋಕನ್ ಮೊತ್ತ ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ನಾಳೆಯೇ ನೂತನ 'ಸಿಯೆರಾ' ಬಿಡುಗಡೆಯಾಗಲಿದೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ಹೊಸ 'ಟಾಟಾ ಸಿಯೆರಾ' ಎಸ್‌ಯುವಿ ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸುಲಭವಾಗಿ ಸಂಚರಿಸಲು ಸಾಧ್ಯವಾಗಲಿದೆ. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 450 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಕಾರ್ಯಕ್ಷಮತೆ (Performance):
ಸದ್ಯಕ್ಕೆ ನೂತನ 'ಸಿಯೆರಾ'ದ ಪವರ್‌ಟ್ರೇನ್ ಕುರಿತಂತೆ ಕಂಪನಿಯು ಯಾವುದೇ ಪ್ರಮುಖ ವಿವರಗಳನ್ನು ಬಹಿರಂಗಪಡಿಸಿಲ್ಲ. ಇದು 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿರಬಹುದು ಎನ್ನಲಾಗಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಒಳಾಂಗಣ & ವೈಶಿಷ್ಟ್ಯಗಳು (Interior & Features):
'ಟಾಟಾ 'ಸಿಯೆರಾ' ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ಸಾಕಷ್ಟು ಅತ್ಯಾಧುನಿಕವಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್ಪ್ಲೇ), ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ವೈಪರ್‌ಗಳು ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಿಲ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಟಾಟಾ ಸಿಯೆರಾ ಇವಿ (Tata Sierra EV) ಸಹ ಮಾರಾಟಕ್ಕೆ ಬರಲಿದೆ:
ಈ ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯು ಮುಂದಿನ ವರ್ಷದ (2026) ಜನವರಿಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ರೂ.15 ಲಕ್ಷ ಬೆಲೆ ಹೊಂದಿರುವ ಸಾಧ್ಯತೆಯಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಭರ್ತಿ ಚಾರ್ಜ್‌ನಲ್ಲಿ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡಬಹುದು ಎನ್ನಲಾಗಿದೆ.


Click it and Unblock the Notifications








