VinFast: ನಾಳೆ ಹೊಸ ಬ್ರ್ಯಾಂಡ್ ವಿನ್‌ಫಾಸ್ಟ್‌ನ VF6 & VF7 ಕಾರುಗಳು ಬಿಡುಗಡೆ.. ಬೆಲೆ ಎಷ್ಟಿರಲಿದೆ, ವಿಶೇಷತೆಗಳೇನು?

ನಾಳೆ (ಸೆ.6) ವಿಯೆಟ್ನಾಂ ಮೂಲದ ಹೊಸ ಬ್ರ್ಯಾಂಡ್ ವಿನ್‌ಫಾಸ್ಟ್ (VinFast), ವಿಎಫ್6 (VF6) ಮತ್ತು ವಿಎಫ್7 (VF7) ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಿದೆ. ಇವೆರೆಡು ಕಾರುಗಳು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ. ಇದೇ ವರ್ಷಾರಂಭದಲ್ಲಿ ಮುಕ್ತಾಯಗೊಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲೂ ಪ್ರದರ್ಶಿಸಲಾಗಿತ್ತು. ಈಗಾಗಲೇ ಪ್ರಿ-ಬುಕ್ಕಿಂಗ್‌ ಆರಂಭವಾಗಿದ್ದು, ಆಸಕ್ತರು ರೂ.21,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಬನ್ನಿ, ನೂತನ ಕಾರುಗಳ ನಿರೀಕ್ಷಿತ ಬೆಲೆ ಎಷ್ಟು ಹಾಗೂ ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.

ವಿನ್‌ಫಾಸ್ಟ್‌ ವಿಎಫ್6 (Vinfast VF6):

ಈ ಎಲೆಕ್ಟ್ರಿಕ್ ಎಸ್‌ಯುವಿ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.18 ಲಕ್ಷದಿಂದ ರೂ.24 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಅರ್ಥ್ ಹಾಗೂ ವಿಂಡ್ ಎಂಬ 2 ರೂಪಾಂತರಗಳನ್ನು (ವೇರಿಯೆಂಟ್) ಪಡೆದಿರಲಿದೆ. ಇದರೊಂದಿಗೆ ಡೆಸಾಟ್ ಸಿಲ್ವರ್, ಜೆಟ್ ಬ್ಲ್ಯಾಕ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್, ಜೆನಿತ್ ಗ್ರೇ ಹಾಗೂ ಅರ್ಬನ್ ಮಿಂಟ್ ಬಣ್ಣಗಳ ಆಯ್ಕೆಯಲ್ಲಿ ಸಿಗುವುದು ಬಹುತೇಕ ಖಚಿತವಾಗಿದೆ.

Tomorrow Vinfast VF6 And VF7 Electric Suv Launch In India Expected Price Range And Features Details

ಇದು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿರಲಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. 4,238 ಎಂಎಂ ಉದ್ದ, 1,820 ಎಂಎಂ ಅಗಲ ಹಾಗೂ 1,594 ಎಂಎಂ ಎತ್ತರ ಕೂಡ ಇರಲಿದೆ.

ನೂತನ 'ವಿನ್‌ಫಾಸ್ಟ್ ವಿಎಫ್6' ಎಲೆಕ್ಟ್ರಿಕ್ ಎಸ್‌ಯುವಿ, ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 381 ರಿಂದ 399 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

Tomorrow Vinfast VF6 And VF7 Electric Suv Launch In India Expected Price Range And Features Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ವಿನ್‌ಫಾಸ್ಟ್‌ ವಿಎಫ್7 (Vinfast VF7):

ಇದು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿರುವ ನಿರೀಕ್ಷೆಯಿದೆ. ರೂ.35 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಅರ್ಥ್, ವಿಂಡ್ & ಸ್ಕೈ ಎಂಬ ಮೂರು ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿರಲಿದೆ. ಜೆಟ್ ಬ್ಲ್ಯಾಕ್, ಡೆಸಾಟ್ ಸಿಲ್ವರ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್ ಹಾಗೂ ಜೆನಿತ್ ಗ್ರೇ ಸೇರಿದಂತೆ 6 ಬಣ್ಣಗಳ ಆಯ್ಕೆಯಲ್ಲಿ ಸಿಗುವುದು ಬಹುತೇಕ ದೃಢಪಟ್ಟಿದೆ.

Tomorrow Vinfast VF6 And VF7 Electric Suv Launch In India Expected Price Range And Features Details

ಹೊಸ ವಿಎಫ್7 ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿರಲಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳು ಮತ್ತು 19-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. 4545 ಎಂಎಂ ಉದ್ದ, 1890 ಎಂಎಂ ಅಗಲ ಹಾಗೂ 1636 ಎಂಎಂ ಎತ್ತರವು ಇರಲಿದೆ. ಜೊತೆಗೆ 2840 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿರಲಿದ್ದು, 5 ಆಸನಗಳನ್ನು ಸಹ ಪಡೆದಿರಲಿದೆ.

ಈ ಕಾರು ಶಕ್ತಿಯುತವಾದ 75.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 431 ರಿಂದ 450 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡಬಹುದು ಹೇಳಲಾಗಿದೆ. 15-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಗ್ಲಾಸ್ ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿರುವ ಸಾಧ್ಯತೆಯಿದೆ. ಸುರಕ್ಷತೆಗಾಗಿ 8 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎನ್ನಲಾಗಿದೆ.

More from DriveSpark

Article Published On: Friday, September 5, 2025, 8:30 [IST]
English summary
Tomorrow vinfast vf6 and vf7 electric suv launch in india expected price range and features details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+