28.51 Km ಮೈಲೇಜ್.. 7.52 ಲಕ್ಷ.. ಟಾಟಾ - ಹ್ಯುಂಡೈ ಅಲ್ಲ, ಈ ಜನಪ್ರಿಯ ಮಾರುತಿ ಕಾರು ಆಯ್ತು ನಂ.1..!

ಭಾರತವು ವಿಶ್ವದಲ್ಲಿಯೇ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಇತ್ತೀಚೆಗೆ ಎಲ್ಲ ವಾಹನ ತಯಾರಕ ಕಂಪನಿಗಳು 2025 ಫೆಬ್ರವರಿಯ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಅದರಲ್ಲೂ ಮಾರುತಿ ಸುಜುಕಿಗೆ ಈ ಫೆಬ್ರವರಿ ತುಂಬಾ ಮಹತ್ವದ ತಿಂಗಳಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಂಡ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಕಂಪನಿಯ 7 ಕಾರುಗಳು ಸ್ಥಾನ ಪಡೆದಿವೆ. ಈ ಪಟ್ಟಿಯಲ್ಲಿ ಮಾರುತಿ ಸುಜುಕಿ ಹೊರತುಪಡಿಸಿ, ಟಾಟಾದ ಎರಡು ಹಾಗೂ ಹ್ಯುಂಡೈನ ಒಂದು ಕಾರು ಸಹ ಇದೆ.

ಕಳೆದ ತಿಂಗಳು (ಫೆಬ್ರವರಿ - 2025) ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ, ಬರೋಬ್ಬರಿ 21,461 ಯುನಿಟ್ ಮಾರಾಟಗೊಂದಿಗೆ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ (19,879 ಯುನಿಟ್), ಮೂರನೇ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ (16,317 ಯುನಿಟ್), ನಾಲ್ಕನೇ ಸ್ಥಾನದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ (16,269 ಯುನಿಟ್‌) ಹಾಗೂ ಐದನೇ ಸ್ಥಾನದಲ್ಲಿ ಮಾರುತಿ ಸುಜುಕಿ ಬಲೆನೊ (15,480 ಯುನಿಟ್) ಕಾರಿದೆ.

Top 10 Cars Sales In February 2025 Fronx Number 1 WagonR Second Creta 3rd Position

ಆರನೇ ಸ್ಥಾನದಲ್ಲಿ ಮಾರುತಿ ಸುಜುಕಿ ಬ್ರೆಝಾ (15,392 ಯುನಿಟ್), ಏಳನೇ ಸ್ಥಾನದಲ್ಲಿ ಟಾಟಾ ನೆಕ್ಸಾನ್ (15,349 ಯುನಿಟ್), ಎಂಟನೇ ಸ್ಥಾನದಲ್ಲಿ ಮಾರುತಿ ಸುಜುಕಿ ಎರ್ಟಿಗಾ (14,868 ಯುನಿಟ್), ಒಂಬತ್ತನೇ ಸ್ಥಾನದಲ್ಲಿ ಮಾರುತಿ ಸುಜುಕಿ ಡಿಜೈರ್ (14,694 ಯುನಿಟ್) ಮತ್ತು ಹತ್ತನೇ ಸ್ಥಾನವನ್ನು ಟಾಟಾ ಪಂಚ್ (14,559 ಯುನಿಟ್) ಕಾರು ತನ್ನದಾಗಿಸಿಕೊಂಡಿದೆ.

ಮೊದಲ ಸ್ಥಾನದಲ್ಲಿರುವ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ರೂ.7.52 ಲಕ್ಷದಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

Top 10 Cars Sales In February 2025 Fronx Number 1 WagonR Second Creta 3rd Position

ಈ ಫ್ರಾಂಕ್ಸ್ ಕಾರಿನಲ್ಲಿ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. ಇದು ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಎರಡನೇ ಸ್ಥಾನದಲ್ಲಿರುವ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರು ರೂ.5.64 ಲಕ್ಷದಿಂದ ರೂ.7.47 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 24.35 ರಿಂದ 33.48 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಮೂರನೇ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ (Hyundai Creta) ಎಸ್‌ಯುವಿ ಕುರಿತಂತೆ ಮಾತನಾಡುವುದಾದರೆ, ಇದು ರೂ.11.11 ಲಕ್ಷದಿಂದ ರೂ.20.42 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 21 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, March 4, 2025, 16:18 [IST]
English summary
Top 10 cars sales in february 2025 fronx number 1 wagonr second creta 3rd position
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+