ಹ್ಯಾಚ್‌ಬ್ಯಾಕ್ & ಸೆಡಾನ್‌ಗಳನ್ನು ಒಲ್ಲೆ ಎನ್ನುತ್ತಿದ್ದಾರೆ ಗ್ರಾಹಕರು.. ಅಗ್ಗದ ಈ 'Compact SUV'ಗಳಿಗೆ ಫುಲ್ ಡಿಮ್ಯಾಂಡ್!
ಭಾರತವು ವಿಶ್ವದಲ್ಲೇ ಅತಿ ದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ಲಕ್ಷಾಂತರ ಸಂಖ್ಯೆಯಲ್ಲಿ ಕಾರುಗಳು ಮಾರಾಟವಾಗುತ್ತಿವೆ. ಅದರಲ್ಲೂ ಹ್ಯಾಚ್‌ಬ್ಯಾಕ್ & ಸೆಡಾನ್‌ಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಕುಸಿತವಾಗುತ್ತಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಕಾಂಪ್ಯಾಕ್ಟ್ ಎಸ್‌ಯುವಿಗಳನ್ನು (Compact SUVs) ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಸದ್ಯ ದೇಶೀಯವಾಗಿ ಈ ಏಪ್ರಿಲ್ ತಿಂಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 'ಕಾಂಪ್ಯಾಕ್ಟ್ ಎಸ್‌ಯುವಿ'ಗಳ ಪಟ್ಟಿ ಪ್ರಕಟಗೊಂಡಿದೆ. ಬನ್ನಿ, ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಅತಿ ಸಂಖ್ಯೆಯಲ್ಲಿ ಮಾರಾಟಗೊಂಡ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಮೊದಲ ಸ್ಥಾನದಲ್ಲಿದೆ. ಆದರೂ ಈ ಕಾರಿನ ಮಾರಾಟ ಪ್ರಮಾಣ ಕೊಂಚ ಮಟ್ಟಿಗೆ ಕುಸಿತವಾಗಿದೆ. ಕಳೆದ ತಿಂಗಳು (ಏಪ್ರಿಲ್-2025) ಮಾರುತಿ ಕಂಪನಿಯು ಬರೋಬ್ಬರಿ 16,971 ಯುನಿಟ್ 'ಬ್ರೆಝಾ' ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 17,063 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ಶೇಕಡ -1% ಇಳಿಕೆಯಾಗಿದೆ.

ನೂತನ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿ, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.8 ಲಕ್ಷದಿಂದ ರೂ.14 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನಗಳಿವೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಎರಡನೇ ಸ್ಥಾನದಲ್ಲಿ ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿಯಿದೆ. ಹೋದ ತಿಂಗಳು ಟಾಟಾ ಮೋಟಾರ್ಸ್ ಸರಿ ಸುಮಾರು 15,457 ಯುನಿಟ್ 'ನೆಕ್ಸಾನ್' ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಏಪ್ರಿಲ್‌ನಲ್ಲಿ 11,168 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ ಮಾರಾಟ ಪ್ರಯಾಣ 38% ಬೆಳವಣಿಗೆಯಾಗಿದೆ.

ಹೊಸ ಟಾಟಾ ನೆಕ್ಸಾನ್ ಕಾರು ರೂ.8 ಲಕ್ಷದಿಂದ ರೂ.16 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಎಸ್‌ಯುವಿ ವಿವಿಧ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಸಿಗುತ್ತದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17.01 ರಿಂದ 24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರೊಟ್ಟಿಗೆ ನೆಕ್ಸಾನ್ ಇವಿಯೂ ಸಿಗಲಿದ್ದು, ರೂ.12.49 ಲಕ್ಷದಿಂದ ರೂ.17.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.
ಮೂರನೇ ಸ್ಥಾನದಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಇದೆ. ಕಳೆದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿ ಕಂಪನಿಯು 14,345 ಯುನಿಟ್ 'ಫ್ರಾಂಕ್ಸ್' ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 14,298 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣದಲ್ಲಿ ಸ್ಥಿರವಾದ ಪ್ರಗತಿಯಾಗಿದೆ.

ಈ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಯೂ ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. ರೂ.7.54 ಲಕ್ಷದಿಂದ ರೂ.13.03 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ನಾಲ್ಕನೇ ಸ್ಥಾನದಲ್ಲಿ ಟಾಟಾ ಪಂಚ್ (Tata Punch) ಎಸ್‌ಯುವಿಯಿದೆ. ಆದರೂ ಮಾರಾಟ ಪ್ರಮಾಣ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಹೋದ ತಿಂಗಳು ಟಾಟಾ ಕಂಪನಿಯು ಬರೋಬ್ಬರಿ 12,496 ಯುನಿಟ್ 'ಪಂಚ್' ಕಾರುಗಳನ್ನು ಮಾರಾಟ ಮಾರಾಟ ಮಾಡಿದೆ. 2024ರ ಏಪ್ರಿಲ್‌ನಲ್ಲಿ 19,158 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಅಂಕಿ ಸಂಖ್ಯೆ ಶೇಕಡ -35% ಇಳಿಮುಖವಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್ ಇಂಧನ & ಎಲೆಕ್ಟ್ರಿಕ್ ಚಾಲಿತ ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇಂಧನ ಚಾಲಿತ ಎಸ್‌ಯುವಿಯು, ರೂ.6.20 ಲಕ್ಷದಿಂದ ರೂ.10.32 ಲಕ್ಷ ಬೆಲೆಯನ್ನು ಹೊಂದಿದ್ದರೆ, ಎಲೆಕ್ಟ್ರಿಕ್ ಚಾಲಿತ ಕಾರು ರೂ.9.99 ಲಕ್ಷದಿಂದ ರೂ.14.44 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.
ಐದನೇ ಸ್ಥಾನವನ್ನು ಕಿಯಾ ಸೋನೆಟ್ (Kia Sonet) ಎಸ್‌ಯುವಿಯು ತನ್ನದಾಗಿಸಿಕೊಂಡಿದೆ. ಕಳೆದ ತಿಂಗಳು (ಏಪ್ರಿಲ್-2025) ಕಿಯಾ ಕಂಪನಿಯು ಸರಿ ಸುಮಾರು 8,068 ಯುನಿಟ್ 'ಸೋನೆಟ್' ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 7,901 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ 2% ಬೆಳವಣಿಗೆಯಾಗಿದೆ.
ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಕಿಯಾ ಸೋನೆಟ್ ಎಸ್‌ಯುವಿ, ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಪಡೆದಿದ್ದು, 18.6 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಆರನೇ ಸ್ಥಾನದಲ್ಲಿ ಹ್ಯುಂಡೈ ವೆನ್ಯೂ (Hyundai Venue): ಈ ಎಸ್‌ಯುವಿ ಇದೆ. ಹೋದ ತಿಂಗಳು ಹ್ಯುಂಡೈ ಕಂಪನಿಯು 7,953 ಯುನಿಟ್ 'ವೆನ್ಯೂ' ಕಾರುಗಳನ್ನು ಮಾರಾಟಗೊಳಿಸಿದೆ. 2024ರ ಏಪ್ರಿಲ್‌ನಲ್ಲಿ 9,120 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ಶೇಕಡ -13% ಕುಸಿತವಾಗಿದೆ.
ನೂತನ ಹ್ಯುಂಡೈ ವೆನ್ಯೂ ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಇದು ರೂ.8 ಲಕ್ಷದಿಂದ ರೂ.13 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 22.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಆಸನಗಳಿವೆ. ಜೊತೆಗೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಏಳನೇ ಸ್ಥಾನದಲ್ಲಿ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿಯಿದೆ. ಕಳೆದ ತಿಂಗಳು (ಏಪ್ರಿಲ್-2025) ಮಹೀಂದ್ರಾ ಕಂಪನಿಯು 7,568 ಯುನಿಟ್ 'ಎಕ್ಸ್‌ಯುವಿ 3ಎಕ್ಸ್ಒ' ಕಾರುಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 4,003 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಬರೋಬ್ಬರಿ ಶೇಕಡ 89% ಪ್ರಗತಿಯಾಗಿದೆ.
ಎಂಟನೇ ಸ್ಥಾನದಲ್ಲಿ ಹ್ಯುಂಡೈ ಎಕ್ಸ್‌ಟರ್ (Hyundai Exter) ಎಸ್‌ಯುವಿ ಇದೆ. ಹೋದ ತಿಂಗಳು 5,416 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿದೆ. ಆದರೂ ಮಾರಾಟ ಪ್ರಮಾಣ ಶೇಕಡ -30% ಇಳಿಕೆಯಾಗಿದೆ. ಒಂಬತ್ತನೇ ಸ್ಥಾನದಲ್ಲಿ ಸ್ಕೋಡಾ ಕೈಲಾಕ್ (5,364 ಯುನಿಟ್) ಮತ್ತು ಹತ್ತನೇ ಸ್ಥಾನದಲ್ಲಿ ಕಿಯಾ ಸೈರಸ್ (4,000 ಯುನಿಟ್) ಕಾರಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications