ಇವೇ ನೋಡಿ 10 ಜನಪ್ರಿಯ ಹ್ಯಾಚ್‌ಬ್ಯಾಕ್‌ಗಳು.. ಬೆಲೆ ಇಷ್ಟೇನಾ.. ನಿಮ್ಮ ಆಯ್ಕೆ ಯಾವುದು?
ಭಾರತದ ಕಾರು ಮಾರುಕಟ್ಟೆಯಲ್ಲಿ ಎಸ್‌ಯುವಿಗಳು ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಅದರ ಹೊರತಾಗಿ ಹ್ಯಾಚ್‌ಬ್ಯಾಕ್‌ಗಳು ಖರೀದಿಗೆ ಲಭ್ಯವಿದ್ದು, ಕೈಗೆಟುಕುವ ಬೆಲೆಯನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಈ 10 ಜನಪ್ರಿಯ ಹ್ಯಾಚ್‌ಬ್ಯಾಕ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.
ಮೊದಲಿಗೆ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಇದು ಕನಿಷ್ಠ ರೂ.6.49 ಲಕ್ಷ ಹಾಗೂ ಗರಿಷ್ಠ ರೂ.9.64 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದ್ದು, 24.8 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ.

ಈ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರು ರೂ.6.70 ಲಕ್ಷದಿಂದ ರೂ.9.92 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಬಲೆನೊ ಕಾರಿನಲ್ಲೂ 5 ಮಂದಿ ಪ್ರಯಾಣ ಮಾಡಬಹುದು. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ & ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಟೊಯೊಟಾ ಗ್ಲಾನ್ಜಾ (Toyota Glanza) ಸಹ ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದೆ. ಇದು ಕನಿಷ್ಠ ರೂ.6.90 ಲಕ್ಷ ಮತ್ತು ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಟೊಯೊಟಾ ಗ್ಲಾನ್ಜಾ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್ ಹಾಗೂ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.
ಹ್ಯುಂಡೈ ಐ20 (Hyundai i20) ಬಗ್ಗೆ ಹೇಳುವುದಾದರೆ, ಇದು ರೂ.7.04 ಲಕ್ಷದಿಂದ ರೂ.11.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಎಂಜಿನ್ ಪಡೆದಿದ್ದು, 16 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದರಲ್ಲಿಯೂ 5 ಮಂದಿ ಓಡಾಟ ನಡೆಸಬಹುದು.

ಟಾಟಾ ಟಿಯಾಗೊ ಇವಿ (Tata Tiago EV) ಕುರಿತಂತೆ ಹೇಳುವುದಾದರೆ, ಇದೊಂದು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿ ಹೆಸರುವಾಸಿಯಾಗಿದೆ. ರೂ.7.99 ಲಕ್ಷದಿಂದ ರೂ.11.14 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ದೊರೆಯುತ್ತದೆ. ಇದು 19.2 ಹಾಗೂ 24 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಈ ಟಾಟಾ ಟಿಯಾಗೊ ಇವಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಇಂಚಿನ ಎಂಐಡಿ ಕ್ಲಸ್ಟರ್, 4-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಹುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios) ಕೂಡ ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಇದು ರೂ.5.98 ಲಕ್ಷದಿಂದ ರೂ.8.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ 4 ಸ್ಪೀಕರ್, ಆಟೋ ಅಪ್-ಡೌನ್ ಡ್ರೈವರ್ ವಿಂಡೋ ಹಾಗೂ ಫಾಸ್ಟ್ ಯುಎಸ್‌ಬಿ ಟೈಪ್ ಸಿ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಕುರಿತಂತೆ ತಿಳಿಸುವುದಾದರೆ, ಈ ಕಾರು ಕನಿಷ್ಠ ರೂ.5 ಲಕ್ಷ ಮತ್ತು ಗರಿಷ್ಠ ರೂ.8.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 19.43 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಕೂಡ ಎಲ್ಲರ ಮೆಚ್ಚಿನ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.5.54 ಲಕ್ಷದಿಂದ ರೂ.7.33 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಸಿಗುತ್ತದೆ. 1-ಲೀ. ಪೆಟ್ರೋಲ್ ಹಾಗೂ 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ರೆನಾಲ್ಟ್ ಕ್ವಿಡ್ (Renault KWID) ಬಗ್ಗೆ ಮಾತನಾಡುವುದರೆ, ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ.4.70 ಲಕ್ಷ ಮತ್ತು ಗರಿಷ್ಠ ರೂ.6.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಪೆಟ್ರೋಲ್ ಎಂಜಿನ್ ಹೊಂದಿದ್ದು, 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಎಂಜಿ ಕಾಮೆಟ್ ಇವಿ (MG Comet EV) ಸಹ ಪ್ರಮುಖ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಎಂದೇ ಖ್ಯಾತಿ ಗಳಿಸಿದೆ. ರೂ.4.99 ಲಕ್ಷ ಆರಂಭಿಕ ದರವನ್ನು ಪಡೆದಿದೆ. 17.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 230 ಕಿಲೋಮೀಟರ್ ಕ್ರಮಿಸುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಕಡೆಯದಾಗಿ ಸಿಟ್ರನ್ ಸಿ3 (Citroen C3) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಇದು ರೂ.6.16 ರಿಂದ ರೂ.10.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 19.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications