10 ಲಕ್ಷದೊಳಗೆ ಈ 12 ಜನಪ್ರಿಯ ಕಾರುಗಳು ತುಂಬಾನೇ ಬೆಸ್ಟ್.. ಸಖತ್ ಮೈಲೇಜ್.. ಊರಿಗೆ ಹೋಗುವುದು ಸುಲಭ!
ದೇಶದಲ್ಲಿ ಸಾಮಾನ್ಯ ವರ್ಗದ ಜನರು ದೊಡ್ಡ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಅವರು ಜೀವನದಲ್ಲಿ ನೂತನ ಕಾರೊಂದನ್ನು ಖರೀದಿ ಮಾಡಬೇಕು ಎಂಬ ಆಸೆಯನ್ನು ಹೊಂದಿರುತ್ತಾರೆ. ಆದರೆ ಯಾವ ಕಾರನ್ನು ತೆಗೆದುಕೊಂಡರೆ ಒಳಿತು ಎಂಬ ಗೊಂದಲದಲ್ಲಿರುತ್ತಾರೆ. ನಾವಿಲ್ಲಿ 10 ಲಕ್ಷದೊಳಗೆ ಲಭ್ಯವಿರುವ ಮಾರುತಿ ಸುಜುಕಿ ಎರ್ಟಿಗಾ, ಟಾಟಾ ನೆಕ್ಸಾನ್, ಮಾರುತಿ ಸ್ವಿಫ್ಟ್, ಮಾರುತಿ ಸುಜುಕಿ ಡಿಜೈರ್, ಸ್ಕೋಡಾ ಕೈಲಾಕ್, ಟಾಟಾ ಪಂಚ್ ಮತ್ತು ಕಿಯಾ ಸೈರಸ್ ಸೇರಿದಂತೆ ವಿವಿಧ ಕಾರುಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಮಾರುತಿ ಎರ್ಟಿಗಾ ಸುಜುಕಿ (Maruti Suzuki Ertiga): ಇದೊಂದು ಎಂಪಿವಿಯಾಗಿದ್ದು, ರೂ.8.84 ಲಕ್ಷದಿಂದ ರೂ.13.13 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 20.51 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 7 ಆಸನ ಆಯ್ಕೆ ವ್ಯವಸ್ಥೆಯಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಟಾಟಾ ನೆಕ್ಸಾನ್ (Tata Nexon): ಈ ಎಸ್‌ಯುವಿ ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಪೆಟ್ರೋಲ್, ಡೀಸೆಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 17.01 ರಿಂದ 24 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋ ಎಸಿ ಹಾಗೂ ವೈರ್‌ಲೆಸ್ ಚಾರ್ಜಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift): ಇದು ಹ್ಯಾಚ್‌ಬ್ಯಾಕ್ ಆಗಿದೆ. ಕನಿಷ್ಠ ರೂ.6.49 ಲಕ್ಷ ಹಾಗೂ ಗರಿಷ್ಠ ರೂ.9.64 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.2-ಲೀ. 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೊಂದಿದೆ. 24.8 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire): ಈ ಸೆಡಾನ್ ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಆಟೋ ಎಸಿಯಂತಹ ಹಲವು ವೈಶಿಷ್ಟ್ಯಗಳಿವೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಸ್ಕೋಡಾ ಕೈಲಾಕ್ (Skoda Kylaq): ಇದೊಂದು ಎಸ್‌ಯುವಿಯಾಗಿದೆ. ಕನಿಷ್ಠ ರೂ.7.89 ಲಕ್ಷ ಮತ್ತು ಗರಿಷ್ಠ ರೂ.14.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.0-ಲೀ. ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 15 ರಿಂದ 18 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಪಂಚ್ (Tata Punch): ಇದು ಮೈಕ್ರೋ ಎಸ್‌ಯುವಿಯಾಗಿ ಹೆಚ್ಚು ಖ್ಯಾತಿಗಳಿಸಿದೆ. ರೂ.6 ಲಕ್ಷದಿಂದ ರೂ.10.32 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.2-ಲೀ. 3 ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 18.8 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ರೇರ್ ಎಸಿ ವೆಂಟ್‌ಗಳಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಕಿಯಾ ಸೈರಸ್ (Kia Syros): ಈ ಎಸ್‌ಯುವಿ ಕನಿಷ್ಠ ರೂ.8.99 ಲಕ್ಷ ಹಾಗೂ ಗರಿಷ್ಠ ರೂ.17.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್ ಸೆಟಪ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO): ಇದೊಂದು ಎಸ್‌ಯುವಿಯಾಗಿದೆ. ರೂ.8 ಲಕ್ಷದಿಂದ ರೂ.15.56 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಸಿಗುತ್ತದೆ. 1.2-ಲೀ. ಪೆಟ್ರೋಲ್, 1.2-ಲೀ. ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್ ಎಂಜಿನ್‌ನ್ನು ಒಳಗೊಂಡಿದ್ದು, 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್ಪ್ಲೇಯಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹ್ಯುಂಡೈ ವೆನ್ಯೂ (Hyundai Venue): ಈ ಎಸ್‌ಯುವಿ ರೂ.7.94 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.0 ಲೀ. ಟರ್ಬೊ ಪೆಟ್ರೋಲ್ ಹಾಗೂ 1.5 ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಬರೋಬ್ಬರಿ 24.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.

ಹ್ಯುಂಡೈ ಐ20 (Hyundai i20): ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಕನಿಷ್ಠ ರೂ.7.04 ಲಕ್ಷದಿಂದ ರೂ.11.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಎಂಜಿನ್ ಪಡೆದಿದ್ದು, 16 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (10.25-ಇಂಚು) ಮತ್ತು ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ರೆನಾಲ್ಟ್ ಕ್ವಿಡ್: (Renault KWID): ಈ ಕಾರು ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ಪೆಟ್ರೋಲ್ ಹೊಂದಿದ್ದು, 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ - ಇನ್ಫೋಟೈನ್ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ ಹಾಗೂ 4 - ಪವರ್ ವಿಂಡೋಗಳಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಇದರಲ್ಲಿಯೂ 5 ಜನರು ಪ್ರಯಾಣ ಮಾಡಬಹುದು.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR): ಇದು ಅತಿ ಹೆಚ್ಚಿನ ಮಾರಾಟವಾಗುವ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಕನಿಷ್ಠ ರೂ.5.64 ಲಕ್ಷ ಹಾಗೂ ಗರಿಷ್ಠ ರೂ.7.47 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್ - ಮೌಂಟೆಡ್ ಆಡಿಯೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications