Kia Seltos: ಇಂದೇ ಅನಾವರಣ.. ಹೊಸ ಕಿಯಾ ಸೆಲ್ಟೋಸ್‌ಗೆ 3 ಪರ್ಯಾಯ ಕಾರುಗಳಿವು, ಬೆಲೆ ಎಷ್ಟು.. ವಿಶೇಷತೆಗಳೇನು?
ಇಂದು 2026ರ ಹೊಸ ತಲೆಮಾರಿನ ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿಯನ್ನು ಅನಾವರಣಗೊಳಿಲಾಗಿದೆ. ಜನವರಿ 2ರಂದು ಬೆಲೆಯನ್ನು ಘೋಷಣೆ ಮಾಡಲಾಗುತ್ತದೆ. ಈ ಕಾರು ಕನಿಷ್ಠ ರೂ.10.99 ಲಕ್ಷ ಹಾಗೂ ಗರಿಷ್ಠ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಮಾರ್ನಿಂಗ್ ಹೇಸ್, ಮ್ಯಾಗ್ಮಾ ರೆಡ್, ಫ್ರಾಸ್ಟ್ ಬ್ಲೂ ಮತ್ತು ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ರಾವಿಟಿ ಗ್ರೇ, ಅರೋರಾ ಬ್ಲ್ಯಾಕ್ ಪರ್ಲ್ ಹಾಗೂ ಗ್ಲೇಸಿಯರ್ ವೈಟ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ 'ಕಿಯಾ ಸೆಲ್ಟೋಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್ ಸೆಟಪ್, ಡುಯಲ್-ಪೇನ್ ಪನೋರಮಿಕ್ ಸನ್‌ರೂಫ್ ಮತ್ತು ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ನೀವು ಇದೇ 'ಕಿಯಾ ಸೆಲ್ಟೋಸ್'ಗೆ ಬದಲಾಗಿ ಈ 3 ಜನಪ್ರಿಯ ಕಾರುಗಳಾದ ಮಾರುತಿ ಸುಜುಕಿ ವಿಕ್ಟೋರಿಸ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಹಾಗೂ ಟಾಟಾ ಸಿಯೆರಾಗಳನ್ನು ಖರೀದಿಸಬಹುದು. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):
ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. 'ಕಿಯಾ ಸೆಲ್ಟೋಸ್'ಗೆ ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಹಾಗೂ ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ನೂತನ 'ಮಾರುತಿ ವಿಕ್ಟೋರಿಸ್' ಕಾರು 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 21 ರಿಂದ 29 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):
ಈ ಎಸ್‌ಯುವಿಯನ್ನು 'ಕಿಯಾ ಸೆಲ್ಟೋಸ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್, ಕೇವ್ ಬ್ಲ್ಯಾಕ್ ಮತ್ತು ಸ್ಪೀಡಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ಹೊಸ 'ಟೊಯೊಟಾ ಹೈರೈಡರ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟಾಟಾ ಸಿಯೆರಾ (Tata Sierra):
ಇದು ನೂತನ ಎಸ್‌ಯುವಿಯಾಗಿದೆ. 'ಕಿಯಾ ಸೆಲ್ಟೋಸ್'ಗೆ ಪರ್ಯಾಯ ಕಾರಾಗಿದೆ. ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು 5 ಆಸನಗಳನ್ನು ಒಳಗೊಂಡಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ ಎಂದು ಅಂದಾಜಿಸಲಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್‌ಪ್ಲೇ), ರೇರ್ ಎಸಿ ವೆಂಟ್‌ಗಳು ಹಾಗೂ ಸನ್‌ರೂಫ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications








