ಮಂಗಳವಾರವಷ್ಟೇ ಬಿಡುಗಡೆ.. 5-ಸೀಟರ್, ಹೊಸ ಹ್ಯುಂಡೈ ವೆನ್ಯೂಗೆ 3 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಹೊಸ ತಲೆಮಾರಿನ ಹ್ಯುಂಡೈ ವೆನ್ಯೂ (Hyundai Venue) ಎಸ್‌ಯುವಿಯನ್ನು ಮಂಗಳವಾರ ಬಿಡುಗಡೆಗೊಳಿಸಲಾಯಿತು. ಇದು ಕನಿಷ್ಠ ರೂ.7.89 ಲಕ್ಷ ಹಾಗೂ ಗರಿಷ್ಠ ರೂ.15.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಡಿಸೇಲ್ ಹಾಗೂ 1.0-ಲೀ. ಟರ್ಬೊ ಪೆಟೋಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡಬಹುದು ಎನ್ನಲಾಗಿದೆ. 5 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ ಡುಯಲ್ 12.3 ಇಂಚಿನ ಸ್ಕ್ರೀನ್‌ಗಳು, 8-ಸ್ಪೀಕರ್ ಬೋಸ್ ಮ್ಯೂಸಿಕ್ ಸಿಸ್ಟಮ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನೀವು ಇದೇ 'ಹ್ಯುಂಡೈ ವೆನ್ಯೂ'ಗೆ ಪರ್ಯಾಯವಾಗಿ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್ ಹಾಗೂ ನಿಸ್ಸಾನ್ ಮ್ಯಾಗ್ನೈಟ್‌ ಕಾರುಗಳನ್ನು ಸಹ ಖರೀದಿ ಮಾಡಬಹುದು. ಬನ್ನಿ, ಈ 3 ನೂತನ ಎಸ್‌ಯುವಿಗಳ ಬೆಲೆ ಎಷ್ಟು.. ವಿಶೇಷತೆಗಳು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

Top 3 Alternative Cars For New Hyundai Venue Suv Brezza Nexon And Magnite

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):

ಇದು ಜನಪ್ರಿಯ ಕಾರಾಗಿದ್ದು, 'ಹ್ಯುಂಡೈ ವೆನ್ಯೂ'ಗೆ ಬದಲಾಗಿಯೂ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.8.26 ಲಕ್ಷದಿಂದ ರೂ.13.01 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸಿಜ್ಲಿಂಗ್ ರೆಡ್, ಬ್ರೇವ್ ಖಾಕಿ, ಎಕ್ಸಲರೆಂಟ್ ಬ್ಲೂ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಮಿಡ್​ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಬ್ರೆಝಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 1.5-ಲೀ. ಪೆಟ್ರೋಲ್, 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಹಾಗೂ 1.5-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 17 ರಿಂದ 25 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 9 ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಯುಎಸ್‌ಬಿ ಫಾಸ್ಟ್ ಚಾರ್ಜರ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು ಪುಶ್-ಬಟನ್ ಸ್ಟಾರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top 3 Alternative Cars For New Hyundai Venue Suv Brezza Nexon And Magnite

ಟಾಟಾ ನೆಕ್ಸಾನ್ (Tata Nexon):

ಈ ಎಸ್‌ಯುವಿಯನ್ನು 'ಹ್ಯುಂಡೈ ವೆನ್ಯೂ'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಇದು ಕನಿಷ್ಠ ರೂ.7.32 ಲಕ್ಷ ಮತ್ತು ಗರಿಷ್ಠ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಕಾರ್ಬನ್ ಬ್ಲ್ಯಾಕ್, ಗ್ರಾಸ್‌ಲ್ಯಾಂಡ್ ಬೀಜ್, ರಾಯಲ್ ಬ್ಲೂ & ಓಷನ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ 'ನೆಕ್ಸಾನ್' 5 ಆಸನಗಳನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್, 1.5-ಲೀ. ಡೀಸೆಲ್ ಹಾಗೂ 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಹಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top 3 Alternative Cars For New Hyundai Venue Suv Brezza Nexon And Magnite

ನಿಸ್ಸಾನ್ ಮ್ಯಾಗ್ನೈಟ್ (Nissan Magnite):

ಇದು ಪ್ರಖ್ಯಾತ ಎಸ್‌ಯುವಿಯಾಗಲಿದ್ದು, 'ಹ್ಯುಂಡೈ ವೆನ್ಯೂ'ಗೆ ಬದಲಾಗಿ ಮನೆಗೆ ತರಬಹುದು. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕಾಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ವಿವಿಡ್ ಬ್ಲೂ ಮತ್ತು ಮೆಟಾಲಿಕ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Top 3 Alternative Cars For New Hyundai Venue Suv Brezza Nexon And Magnite

ನೂತನ 'ಮ್ಯಾಗ್ನೈಟ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 17.9 ರಿಂದ 19.9 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Thursday, November 6, 2025, 8:30 [IST]
English summary
Top 3 alternative cars for new hyundai venue suv brezza nexon and magnite
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+