ಈ 2025ರಲ್ಲಿ ಬಿಡುಗಡೆಯಾದ 3 ಜನಪ್ರಿಯ ಕಾರುಗಳು.. ಗ್ರಾಹಕರು ಕ್ಯೂ ನಿಲ್ಲುವರು, ಬೆಲೆ ಎಷ್ಟು.. ಹೇಗಿವೆ?
ವಿಶ್ವದಲ್ಲೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಈ ವರ್ಷವು ಹತ್ತಾರು ಕಾರುಗಳು ಅದ್ದೂರಿಯಾಗಿ ಬಿಡುಗಡೆಗೊಂಡಿವೆ. ಅದರಲ್ಲೂ 2025ರಲ್ಲಿ ವಿನ್‌ಫಾಸ್ಟ್ ವಿಎಫ್7, ಹೊಸ ತಲೆಮಾರಿನ ಹುಂಡೈ ವೆನ್ಯೂ ಹಾಗೂ ಟಾಟಾ ಸಿಯೆರಾ ಎಸ್‌ಯುವಿಗಳನ್ನು ಮಾರಾಟಕ್ಕೆ ತರಲಾಗಿತು. ಇವು ನೋಡಲು ತುಂಬಾ ಸುಂದರವಾಗಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಬನ್ನಿ, ಈ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ವಿನ್‌ಫಾಸ್ಟ್ ವಿಎಫ್7 (VinFast VF7):
ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ವರ್ಷದ ಸೆಪ್ಟೆಂಬರ್ 6 ರಂದು ಪರಿಚಯಿಸಲಾಯಿತು. ರೂ.20.89 ಲಕ್ಷದಿಂದ ರೂ.25.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಡೆಸಾಟ್ ಸಿಲ್ವರ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್, ಜೆನಿತ್ ಗ್ರೇ ಮತ್ತು ಅರ್ಬನ್ ಮಿಂಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,840 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 70.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 438 ರಿಂದ 532 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 5.8 ರಿಂದ 10 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ನೂತನ 'ವಿನ್‌ಫಾಸ್ಟ್ ವಿಎಫ್7' ಎಸ್‌ಯುವಿಯು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. 12.9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಹ್ಯುಂಡೈ ವೆನ್ಯೂ (Hyundai Venue):
ಈ ಹೊಸ ತಲೆಮಾರಿನ ಎಸ್‌ಯುವಿಯನ್ನು ನವೆಂಬರ್ 4 ರಂದು ಮಾರಾಟಕ್ಕೆ ತರಲಾಗಿತ್ತು. ರೂ.7.89 ಲಕ್ಷದಿಂದ ರೂ.15.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಡ್ರ್ಯಾಗನ್ ರೆಡ್, ಅಬಿಸ್ ಬ್ಲ್ಯಾಕ್, ಟೈಟಾನ್ ಗ್ರೇ, ಮಿಸ್ಟಿಕ್ ಸಫೈರ್, ಅಟ್ಲಾಸ್ ವೈಟ್ ಮತ್ತು ಹ್ಯಾಜೆಲ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ನೂತನ 'ಹ್ಯುಂಡೈ ವೆನ್ಯೂ' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಡಿಸೇಲ್ ಹಾಗೂ 1.0-ಲೀ. ಟರ್ಬೊ ಪೆಟೋಲ್ ಎಂಜಿನ್‌ನ್ನು ಒಳಗೊಂಡಿದೆ. 17.9 ರಿಂದ 20.99 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ 12.3 ಇಂಚಿನ ಡುಯಲ್ ಸ್ಕ್ರೀನ್‌ಗಳು ಮತ್ತು ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟಾಟಾ ಸಿಯೆರಾ (Tata Sierra):
ಇದು ಪ್ರಮುಖ ಎಸ್‌ಯುವಿಯಾಗಿದೆ. ನವೆಂಬರ್ 25ರಂದು ಬಿಡುಗಡೆಗೊಳಿಸಲಾಯಿತು. ರೂ.11.49 ಲಕ್ಷ (ಎಕ್ಸ್-ಶೋರೂಂ) ಪರಿಚಯಾತ್ಮಕ ಬೆಲೆಯನ್ನು ಒಳಗೊಂಡಿದೆ. ನೋಡಲು ಸಹ ಚೆನ್ನಾಗಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2730 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಹೊಸ 'ಟಾಟಾ ಸಿಯೆರಾ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 5 ಆಸನಗಳನ್ನು ಹೊಂದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್ಪ್ಲೇ), ರೇರ್ ಎಸಿ ವೆಂಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








