ಇಲ್ಲಿವೆ ನೋಡಿ.. 5 ಬಾಗಿಲುಗಳ ಪ್ರಮುಖ 3 ಆಫ್-ರೋಡ್ ಎಸ್‌ಯುವಿಗಳು, ಬೆಲೆ ಇಷ್ಟೇನಾ, ವಿಶೇಷತೆಗಳೇನು?

ಹೊಸ ಕಾರು ಖರೀದಿ ಮಾಡುವ ಗ್ರಾಹಕರಿಗೆ ಆಫ್-ರೋಡ್ ಎಸ್‌ಯುವಿಗಳ ಮೇಲೆ ವಿಶೇಷವಾದ ಪ್ರೀತಿಯಿರುತ್ತದೆ. ಇವುಗಳು ಸಾಮಾನ್ಯ ರಸ್ತೆಯಲ್ಲಿಯೂ ಸುಲಭವಾಗಿ ಚಲಿಸಬಲ್ಲವು. ಅದೇ ರೀತಿಯಲ್ಲಿ ಹಳ್ಳ-ದಿಣ್ಣೆ ಹಾಗೂ ಗುಡ್ಡಗಾಡಿನ ರಸ್ತೆಗಳಲ್ಲೂ ಲೀಲಾಜಾಲವಾಗಿ ಓಡುವಂತೆ ವಿನ್ಯಾಸಗೊಳಿಸಲಾಗಿರುತ್ತದೆ. ನಾವಿಲ್ಲಿ ಹೆಚ್ಚು ಶಕ್ತಿಯುತವಾಗಿರುವ ಜನಪ್ರಿಯ ಆಫ್-ರೋಡ್ ಎಸ್‌ಯುವಿಗಳಾದ ಮಹೀಂದ್ರಾ ಥಾರ್ ರಾಕ್ಸ್‌, ಮಾರುತಿ ಸುಜುಕಿ ಜಿಮ್ನಿ ಹಾಗೂ ಫೋರ್ಸ್ ಗೂರ್ಖಾ ಮಾಡೆಲ್‌ಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಮಹೀಂದ್ರಾ ಥಾರ್ ರಾಕ್ಸ್‌ (Mahindra Thar Roxx): ಇದು ಪ್ರಖ್ಯಾತ ಆಫ್-ರೋಡ್ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇದರ ಕಾರ್ಯಕ್ಷಮತೆಯನ್ನು ಗ್ರಾಹಕರು ಮೆಚ್ಚಿದ್ದು, ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಕಾರು, ಕನಿಷ್ಠ ರೂ.13 ಲಕ್ಷದಿಂದ ಗರಿಷ್ಠ ರೂ.23 ಲಕ್ಷವರೆಗೆ ಎಕ್ಸ್-ಶೋರೂಂ ದರವನ್ನು ಹೊಂದಿದೆ.

Top 3 Five-Door Off-Road Suvs In India Thar Roxx Jimny Gurkha

ನೂತನ ಮಹೀಂದ್ರಾ ಥಾರ್ ರಾಕ್ಸ್‌, ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 2.0-ಲೀ. ಟರ್ಬೊ ಪೆಟ್ರೋಲ್ ಹಾಗೂ 2-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 12.4 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಎಸ್‌ಯುವಿಯಲ್ಲಿ 5 - ಆಸನಗಳಿವೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny): ಇದು ಕೂಡ ಪ್ರಮುಖ ಆಫ್-ರೋಡ್ ಎಸ್‌ಯುವಿಯಾಗಿದೆ. ಆದರೆ, ಈ ಕಾರಿನ ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಂಪನಿಯು ಕಂಡಿದೆ. ಸದ್ಯ, ದೇಶೀಯ ಗ್ರಾಹಕರಿಗೆ ಜಿಮ್ನಿ ಎಸ್‌ಯುವಿಯು ರೂ.13 ಲಕ್ಷದಿಂದ ರೂ.15 ಲಕ್ಷ ಎಕ್ಸ್-ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

Top 3 Five-Door Off-Road Suvs In India Thar Roxx Jimny Gurkha

ಈ ಮಾರುತಿ ಸುಜುಕಿ ಜಿಮ್ನಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 16 ರಿಂದ 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 4 - ಆಸನ ಆಯ್ಕೆ ವ್ಯವಸ್ಥೆಯಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಫೋರ್ಸ್ ಗೂರ್ಖಾ (Force Gurkha): ಈ ಆಫ್-ರೋಡ್ ಎಸ್‌ಯುವಿ ಹೆಚ್ಚು ಜನಮನ್ನಣೆ ಗಳಿಸಿದ್ದು, ಮಹೀಂದ್ರಾ ಥಾರ್ ರಾಕ್ಸ್‌ ಹಾಗೂ ಮಾರುತಿ ಸುಜುಕಿ ಜಿಮ್ನಿಗೆ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇದು ಸಹ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ರೂ.17 ಲಕ್ಷದಿಂದ ರೂ.18 ಲಕ್ಷವರೆಗೆ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ.

Top 3 Five-Door Off-Road Suvs In India Thar Roxx Jimny Gurkha

ನೂತನ ಫೋರ್ಸ್ ಗೂರ್ಖಾ ಎಸ್‌ಯುವಿ, 2.6-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 9.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರು ಬರೋಬ್ಬರಿ 7 - ಆಸನಗಳನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, April 30, 2025, 8:21 [IST]
English summary
Top 3 five door off road suvs in india thar roxx jimny gurkha
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+